ಕಾಂಗ್ರೆಸ್‌ಗೆ ಶಾಹಿನ್ ಬಾಗ್ ರೀತಿ ಹಿಂಸಾಚಾರ ಸೃಷ್ಟಿ ಮಾಡಬೇಡಿ ಎಂದ ಬಿಜೆಪಿ
ನವದೆಹಲಿ,ಫೆಬ್ರವರಿ 03: ಶಾಹಿನ್ ಬಾಗ್ ರೀತಿ ಹಿಂಸಾಚಾರ ಸೃಷ್ಟಿಸಬೇಡಿ ಎಂದು ಬಿಜೆಪಿ ಕಾಂಗ್ರೆಸ್ ಮುಖಂಡ ಗುಲಾಬ್ ನಬಿ ಆಜಾದ್‌ಗೆ ಹೇಳಿದೆ.
ಪ್ರತಿಪಕ್ಷದ ನಾಯಕ ಮತ್ತು ಕಾಂಗ್ರೆಸ್ ಮುಖಂಡ ಗುಲಾಮ್ ನಬಿ ಅಜಾದ್ ಅವರು ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಪ್ರತಿಷ್ಠೆಯ ವಿಷಯವಾಗಿಸದೆ ಹಿಂಪಡೆಯುವಂತೆ ಕೇಂದ್ರ ಸರ್ಕಾರವನ್ನು ಕೇಳಿದ್ದಾರೆ.
ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ಧನ್ಯವಾದ ಕಲಾಪದಲ್ಲಿ ಭಾಗವಹಿಸಿದ ಅವರು, ಕೃಷಿ ಕಾಯ್ದೆಗಳನ್ನು ರದ್ದುಪಡಿಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೇ ಪ್ರಕಟಣೆ ನೀಡಬೇಕು ಎಂದು ಸಲಹೆ ನೀಡಿದರು. ಈ ವೇಳೆ ಸದನದಲ್ಲಿ ಪ್ರಧಾನಿ ಮೋದಿ ಉಪಸ್ಥಿತರಿದ್ದರು.

ಆರ್ಟಿಕಲ್ 370 ರನ್ನು ರದ್ದುಪಡಿಸಿದ ನಂತರ 2019ರಲ್ಲಿ ಹಿಂದಿನ ರಾಜ್ಯವನ್ನು ಲಡಾಖ್ ಮತ್ತು ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲಾಯಿತು. ಹಿರಿಯ ಕಾಂಗ್ರೆಸ್ ಮುಖಂಡರು 1988ರಲ್ಲಿ ತಮ್ಮದೇ ಪಕ್ಷದ ಆಡಳಿತದ ಅವಧಿಯಲ್ಲಿ ಸರ್ಕಾರವು ರೈತರ ಬೇಡಿಕೆಗಳಿಗೆ ಮಣಿದಿದ್ದನ್ನು ಒಳಗೊಂಡಂತೆ ಹಲವಾರು ಉದಾಹರಣೆಗಳನ್ನು ಉಲ್ಲೇಖಿಸಿದ್ದಾರೆ.
ರಾಷ್ಟ್ರಧ್ವಜಕ್ಕೆ ಅಗೌರವ ಸರಿಯಲ್ಲ ಎಂದ ಅವರು, ಗಣರಾಜ್ಯೋತ್ಸವದಂದು ರೈತರ ಟ್ರಾಕ್ಟರ್ ಜಾಥಾ ವೇಳೆ ಕೆಂಪು ಕೋಟೆಯಲ್ಲಿ ನಡೆದ ಹಿಂಸಾಚಾರವನ್ನೂ ಖಂಡಿಸಿದರು. ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯತ್ವವನ್ನು ಪುನಃಸ್ಥಾಪಿಸಿ ವಿಧಾನಸಭೆ ಚುನಾವಣೆ ನಡೆಸಲು ಅವಕಾಶ ನೀಡಬೇಕು. ಈ ಪ್ರದೇಶದ ಜನರು ಸಂತೋಷವಾಗಿಲ್ಲ ಮತ್ತು ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ ಎಂದು ಹೇಳಿದರು.
ಇವರ ಹೇಳಿಕೆ ಬಳಿಕ ಗುಲಾಂ ನಬಿ ಆಜಾದ್ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ ಶಾಹಿನ್ ಬಾಗ್ ರೀತಿ ಹಿಂಸಾಚಾರ ಸೃಷ್ಟಿಸಬೇಡಿ ಎಂದು ಹೇಳಿದೆ.












Click it and Unblock the Notifications