ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚುನಾವಣಾ ಆಯೋಗಕ್ಕೆ ರಾಹುಲ್ ವಿರುದ್ಧ ದೂರು ನೀಡಿದ ಬಿಜೆಪಿ ನಿಯೋಗ

|
Google Oneindia Kannada News

ನವದೆಹಲಿ, ಏಪ್ರಿಲ್ 12: ರಫೇಲ್ ವಿವಾದದ ಕುರಿತು ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಿಂದ ಚೌಕಿದಾರ ಚೋರ ಎಂಬುದು ಸಾಬೀತಾಗಿದೆ. ನರೇಂದ್ರ ಮೋದಿ ಭ್ರಷ್ಟಾಚಾರ ನಡೆಸಿದ್ದು ದೃಢವಾಗಿದೆ ಎಂದಿದ್ದ ರಾಹುಲ್ ಗಾಂಧಿ ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ನಿಯೋಗ ದೂರು ನೀಡಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ನೇತೃತ್ವದ ಬಿಜೆಪಿ ನಿಯೋಗವು ಚುನಾವಣಾ ಆಯೋಗಕ್ಕೆ ಇಂದು ದೂರು ನೀಡಿದ್ದು, ಪ್ರಧಾನ ಮಂತ್ರಿಯಂಥ ಉನ್ನತ ಹುದ್ದೆಯಲ್ಲಿರುವ ವ್ಯಕ್ತಿಯ ಬಗ್ಗೆ ಯಾವುದೇ ಆಧಾರವಿಲ್ಲದೆ ಆರೋಪ ಹೊರಿಸಿದ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅದು ಮನವಿ ಮಾಡಿದೆ.

ಏ. 15 ರಂದು ರಾಹುಲ್ ಗಾಂಧಿ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ಏ. 15 ರಂದು ರಾಹುಲ್ ಗಾಂಧಿ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ

ಜೊತೆಗೆ ತೃಣಮೂಲ ಕಾಂಗ್ರೆಸ್ ಪಕ್ಷದ ವಿರುದ್ಧವೂ ದೂರು ದಾಖಲಿಸಲಾಗಿದೆ.

"ರಫೇಲ್ ವಿವಾದದ ಕುರಿತ ದಾಖಲೆಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಇಂದು ನೀಡಿದ ತೀರ್ಪಿನಿಂದ ಚೌಕಿದಾರ ಚೋರ ಎಂಬುದು ಸಾಬೀತಾಗಿದೆ. ಇದರಿಂದಾಗಿ ಮತ್ತಷ್ಟು ಭ್ರಷ್ಟಾಚಾರದ ಪ್ರಕರಣಗಳು ಹೊರಬರಲಿವೆ. ಇದು ನ್ಯಾಯದ ಗೆಲುವು. ಸುಪ್ರೀಂ ಕೋರ್ಟ್ ತೀರ್ಪನ್ನು ನಾವು ಸ್ವಾಗತಿಸುತ್ತೇವೆ. ನೀವು ಭ್ರಷ್ಟಾಚಾರ ಮಾಡಿದ್ದೀರಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇದು ಅತ್ಯಂತ ಪ್ರಮುಖ ದಿನ" ಎಂದು ರಾಹುಲ್ ಗಾಂಧಿ ಹೇಳಿದ್ದರು.

BJP delegation meets Election commission ti raise complaint against Rahul Gandhi

ರಫೇಲ್ ಗೆ ಸಂಬಂಧಿಸಿದ 'ಕಳುವಾದ' ದಾಖಲೆಗಳನ್ನು ಪರಾಮರ್ಶೆಗಾಗಿ ಬಳಸಿಕೊಳ್ಳಬಹುದು ಎಂದು ಸುಪ್ರೀಂಕೋರ್ಟ್ ಬುಧವಾರ ತೀರ್ಪು ನೀಡಿತ್ತು. ಇದರಿಂದ ಸೋರಿಕೆಯಾದ ದಾಖಲೆಗಳನ್ನು ತೀರ್ಪು ಮರುಪರಿಶೀಲನೆಗೆ ಬಳಸಿಕೊಳ್ಳುವಂತೆ ಸಲ್ಲಿಸಲಾಗಿದ್ದ ಅರ್ಜಿಗಳಿಗೆ ಪ್ರಾಥಮಿಕ ಆಕ್ಷೇಪ ವ್ಯಕ್ತಪಡಿಸಿದ್ದ ಕೇಂದ್ರ ಸರ್ಕಾರದ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು.

English summary
Union Ministers Mukhtar Abbas Naqvi and Nirmala sitharam led BJP delegation met Election Commission to raises complaints against Rahul, Trinamool Congress for their remark against PM Narendra Modi on Rafale deal SC verdict.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X