ಬಿಜೆಪಿ ಕೇಂದ್ರ ಕಚೇರಿಗೆ ಹುಸಿ ಬಾಂಬ್ ಕರೆ: ಮೈಸೂರಿಗನ ಕೈವಾಡ?
ನವದೆಹಲಿ, ಜೂನ್ 22: ದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಗೆ ಹುಸಿ ಬಾಂಬ್ ಕರೆ ಬಂದಿದ್ದು, ಕೆಲ ಹೊತ್ತು ಆತಂಕ ಸೃಷ್ಟಿಸಿತ್ತು.
ದೆಹಲಿಯ ಅಶೋಕ ರಸ್ತೆಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಾಂಬ್ ಇದೆ ಎಂದು ವ್ಯಕ್ತಿಯೊಬ್ಬರು ಕರೆ ಮಾಡಿದ್ದರು. ಕೂಡಲೆ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಬಿಜೆಪಿ ಕಚೇರಿಗೆ ದೌಡಾಯಿಸಿ ಪರಿಶೀಲನೆ ನಡೆಸಿದರು.
ಆದರೆ ಇದೊಂದು ಹುಸಿ ಕರೆ ಎಂಬುದು ತಿಳಿದುಬಂದಿದ್ದು, ಕರೆಯನ್ನು ಟ್ರೇಸ್ ಮಾಡಿದ ಪೊಲೀಸರಿಗೆ ಇದು ಕರ್ನಾಟಕದ ಮೈಸೂರಿನಿಂದ ಬಂದ ಕರೆ ಎಂಬುದು ತಿಳಿದುಬಂದಿದೆ. ಆದರೆ ಕರೆ ಮಾಡಿದ ವ್ಯಕ್ತಿಯ ಕುರಿತು ಇದುವರೆಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಇತ್ತೀಚೆಗಷ್ಟೇ ಮೈಸೂರಿನಲ್ಲಿ ಕುಡುಕನೊಬ್ಬ ಮೈಸೂರಿನ ಅರಮನೆ ಆವರಣದಲ್ಲಿ ಬಾಂಬ್ ಇಟ್ಟಿರುವುದಾಗಿ ಹೇಳಿ ಆತಂಕ ಸೃಷ್ಟಿಸಿದ್ದ. ಈ ಸಂದರ್ಭದಲ್ಲಿ ಪೊಲೀಸರು ತಕ್ಷಣ ಗಂಗಧಾರ್ ನನ್ನು ವಶಕ್ಕೆ ಪಡೆದಿದ್ದರು.












Click it and Unblock the Notifications