ದೆಹಲಿಯಲ್ಲಿ ಬಿಜೆಪಿ ಮಹತ್ವದ ಸಭೆ: ಲೋಕಸಭಾ ಚುನಾವಣೆ ತಯಾರಿ ಚರ್ಚೆ
ನವದೆಹಲಿ, ಆಗಸ್ಟ್ 28: ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿಯು ದೆಹಲಿಯಲ್ಲಿ ಮಹತ್ವದ ಸಭೆ ನಡೆಸಿದೆ.
ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಆಡಳಿತದಲ್ಲಿರುವ ರಾಜ್ಯದ ಮುಖ್ಯಮಂತ್ರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಅಮಿತ್ ಶಾ ಕೂಡ ಸಭೆಯಲ್ಲಿ ಹಾಜರಿದ್ದ ಕಾರಣಕ್ಕೆ ಸಭೆಗೆ ಹೆಚ್ಚಿನ ಮಹತ್ವ ಬಂದಿದೆ.
ಬಿಜೆಪಿ ಅಧಿಕಾರದಲ್ಲಿರುವ ರಾಜಸ್ಥಾನ, ಮಧ್ಯ ಪ್ರದೇಶ, ಛತ್ತೀಸ್‌ಘಡ್ ರಾಜ್ಯಗಳಲ್ಲಿ ಈ ವರ್ಷಾಂತ್ಯಕ್ಕೆ ವಿಧಾನಸಭೆ ಚುನಾವಣೆಗಳಿವೆ. ಮುಂದಿನ ವರ್ಷ ಲೋಕಸಭೆ ಚುನಾವಣೆ ನಡೆಯಲಿದೆ ಈ ಸಭೆಯಲ್ಲಿ ಚುನಾವಣೆ ತಯಾರಿಯ ಬಗ್ಗೆ ಮಹತ್ವ ಚರ್ಚೆಗಳು ನಡೆಯಲಿವೆ.

ಸುದೀರ್ಘವಾಗಿ ನಡೆದ ಸಭೆ
ದೆಹಲಿಯಲ್ಲಿನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬೆಳಿಗ್ಗೆ 10 ಗಂಟೆಗೆ ಆರಂಭವಾದ ಸಭೆಯು ದೀರ್ಘವಾಗಿ ನಡೆದಿದೆ. ರಾತ್ರಿ 7ರವರೆಗೆ ಸಭೆ ನಡೆದಿದೆ ಎನ್ನಲಾಗಿದೆ.

ಮನೋಹರ್ ಪರಿಕ್ಕರ್ ಭಾಗವಹಿಸಿಲ್ಲ
ಈ ಮಹತ್ವದ ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಿರುವ ಗೋವಾ ಮುಖ್ಯಮಂತ್ರಿ ಮನೋಹರ ಪರಿಕ್ಕರ್ ಹೊರತುಪಡಿಸಿ ಬಿಜೆಪಿ ಆಡಳಿತವಿರುವ 15 ರಾಜ್ಯದ ಮುಖ್ಯಮಂತ್ರಿಗಳೂ ಭಾಗವಹಿಸಿದ್ದಾರೆ. ಅವರ ಜೊತೆ ಗೃಹ ಸಚಿವ ರಾಜನಾಥ ಸಿಂಗ್ ಮತ್ತು ವಿತ್ತ ಸಚಿವ ಅರುಣ್ ಜೇಟ್ಲಿ ಸಹ ಭಾಗವಹಿಸಿದ್ದರು.

ಚುನಾವಣಾ ತಯಾರಿ ಚರ್ಚೆ
ಲೋಕಸಭೆ ಚುನಾವಣೆಗೆ ರಾಜ್ಯಗಳು ಮಾಡಿಕೊಳ್ಳಬೇಕಾದ ತಯಾರಿ. ವಿಧಾನಸಭೆ ಚುನಾವಣೆ ಎದುರಿಸಲಿರುವ ರಾಜ್ಯಗಳು ಮಾಡಿಕೊಳ್ಳಬೇಕಾದ ತಯಾರಿ ಬಗ್ಗೆ ಸಭೆಯಲ್ಲಿ ಮಹತ್ವದ ಚರ್ಚೆ ನಡೆದಿದೆ. ರಾಜ್ಯಗಳಲ್ಲಿ ಬಿಜೆಪಿಗೆ ಇರುವ ಅಲೆಯ ಬಗ್ಗೆಯೂ ಮಾಹಿತಿ ಪಡೆಯಲಾಗಿದೆ.

ಇವರೆಲ್ಲಾ ಸಭೆಯಲ್ಲಿ ಇದ್ದರು
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಗುಜರಾತ್‌ನ ವಿಜಯ್ ರೂಪಾನಿ, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ರಾಜಸ್ಥಾನ ಸಿಎಂ ವಸುಂಧರಾ ರಾಜೇ, ಅರುಣಾಚಲ ಪ್ರದೇಶ ಮುಖ್ಯಮಂತ್ರಿ ಪೇಮಾ ಖಂಡು, ಛತ್ತೀಸ್ಘಡ ಸಿಎಂ ಡಾ.ರಮಣ್ ಸಿಂಗ್, ಅಸ್ಸಾಂನ ಸರ್ಬನಂದಾ ಸೋನೊವಾಲ್, ಹಿಮಾಚಲಪ್ರದೇಶದ ಜೈ ರಾಂ ಠಾಕೂರ್, ಹರಿಯಾಣ ಸಿಎಂ ಮನೋಹರ್‍ಲಾಲ್ ಖಟ್ಟರ್, ಜಾರ್ಖಂಡ್ ಸಿಎಂ ರಘುಬರ್ ದಾಸ್, ಮಣಿಪುರ ಸಿಎಂ ಎನ್. ಬೀರೇಂದ್ರ ಸಿಂಗ್, ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್, ಉತ್ತರಖಾಂಡ್ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಅವರುಗಳು ಈ ಸಭೆಯಲ್ಲಿ ಭಾಗವಹಿಸಿದ್ದಾರೆ.












Click it and Unblock the Notifications