ಇಂಥ ಪರಿಸ್ಥಿತಿ ಬೇರೆ ಯಾವ ರಾಜ್ಯದಲ್ಲೂ ಇಲ್ಲ; ಖರ್ಗೆ
ನವದೆಹಲಿ, ಜುಲೈ 17: "ನಾನು ರಾಜೀನಾಮೆ ನೀಡಲಿದ್ದೇನೆ ಎಂಬ ಸುದ್ದಿಯಲ್ಲಿ ಸತ್ಯಾಂಶವಿಲ್ಲ. ರಾಜ್ಯ ನಾಯಕತ್ವದಲ್ಲಿ ಯಾವುದೇ ಬದಲಾವಣೆಯಿಲ್ಲ" ಎಂದು ಸಿಎಂ ಯಡಿಯೂರಪ್ಪ ಶನಿವಾರ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಜೆ.ಪಿ. ನಡ್ಡಾ ಭೇಟಿ ನಂತರ ಹೇಳಿಕೆ ನೀಡಿದ್ದು, ಈ ಹೇಳಿಕೆ ಬೆನ್ನಲ್ಲೇ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ನವದೆಹಲಿಯಲ್ಲಿ ಶನಿವಾರ ಮಾತನಾಡಿರುವ ಅವರು, "ಕರ್ನಾಟಕದಲ್ಲಿ ಬಿಜೆಪಿ ಆಡಳಿತ ಅಸ್ಥಿರವಾಗಿದೆ. ಬಿಜೆಪಿಯ ಶಾಸಕರು ಹಾಗೂ ಸಚಿವರೇ ಬಹಿರಂಗವಾಗಿ ಮುಖ್ಯಮಂತ್ರಿ ಆಡಳಿತದ ವಿರುದ್ಧ ಮಾತನಾಡುತ್ತಿದ್ದಾರೆ. ಯಾವ ರಾಜ್ಯದಲ್ಲಿಯೂ ಇಂಥ ಪರಿಸ್ಥಿತಿಯಿಲ್ಲ. ಇದು ರಾಜ್ಯದ ಆಡಳಿತದ ಮೇಲೆ ಪರಿಣಾಮ ಬೀರುತ್ತಿದೆ" ಎಂದು ಆರೋಪಿಸಿದ್ದಾರೆ.

ಸಿಎಂ ಯಡಿಯೂರಪ್ಪ ಅವರ ದೆಹಲಿ ಭೇಟಿ ಕುರಿತು ಮಾತನಾಡಿದ ಅವರು, "ಕಳೆದ ಏಳೆಂಟು ತಿಂಗಳಿನಿಂದಲೂ ರಾಜ್ಯದಲ್ಲಿ ಇದೇ ಪರಿಸ್ಥಿತಿ ಮುಂದುವರೆದಿದೆ. ಬಿಜೆಪಿ ಸರ್ಕಾರ ಅಸ್ಥಿರವಾಗಿದೆ" ಎಂದು ದೂರಿದರು.
ಶುಕ್ರವಾರ ಸಿಎಂ ಯಡಿಯೂರಪ್ಪ ಅವರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದರು. ಈ ಭೇಟಿ ನಂತರ ರಾಜ್ಯ ನಾಯಕತ್ವ, ಯಡಿಯೂರಪ್ಪ ರಾಜೀನಾಮೆ ಕುರಿತು ಹಲವು ಊಹಾಪೋಹಗಳು ಸೃಷ್ಟಿಯಾಗಿದ್ದವು. ಈ ಊಹೆಗಳಿಗೆ ಸ್ಪಷ್ಟನೆಯಂತೆ ಶನಿವಾರ ಹೇಳಿಕೆ ನೀಡಿದ್ದ ಯಡಿಯೂರಪ್ಪ, "ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವೇ ಇಲ್ಲ" ಎಂದಿದ್ದರು.












Click it and Unblock the Notifications