ಒಬ್ಬರನ್ನು ಬಿಟ್ಟು ಕರ್ನಾಟಕ ಸಂಸದರೆಲ್ಲರೂ ಕನ್ನಡದಲ್ಲಿಯೇ ಪ್ರಮಾಣ ವಚನ

ನವದೆಹಲಿ, ಜೂನ್ 17: ಹದಿನೇಳನೇ ಲೋಕಸಭೆಯ ಮೊದಲ ಸಂಸತ್ ಅಧಿವೇಶನದಲ್ಲಿ ಇಂದು ಎಲ್ಲ ಸಂಸದರು ಪ್ರಮಾಣ ವಚನ ಸ್ವೀಕಾರ ಮಾಡಿದರು.

ಕರ್ನಾಟಕದ 28 ಸಂಸದರು ಸಹ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದರು. ಅದರಲ್ಲಿಯೂ 27 ಮಂದಿ ಸಂಸದರು ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದ್ದು ವಿಶೇಷ, ಆದರೆ ಒಬ್ಬರು ಸಂಸದರು ಮಾತ್ರ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಲಿಲ್ಲ.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಸಂಸತ್‌ಗೆ ಆಯ್ಕೆ ಆಗಿರುವ ಬಿಜೆಪಿ ಸಂಸದ ಅನಂತ್‌ಕುಮಾರ್ ಹೆಗಡೆ ಅವರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸದೆ, ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

BJP MP Ananth Kumar Hegde took oath in Sanskrit language

ಹಿಂದೂ ಚಿಂತನೆಗಳಿಂದ ಖ್ಯಾತರಾಗಿರುವ ಅನಂತ್‌ಕುಮಾರ್ ಹೆಗಡೆ ಅವರು, ಹಿಂದೂ ಭಾಷೆಯೆಂದೆ ಗುರುತಿಸಲ್ಪಡುವ ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಕಳೆದ ಬಾರಿಯೂ ಸಹ ಅನಂತ್‌ಕುಮಾರ್ ಹೆಗಡೆ ಅವರು ಸಂಸ್ಕೃತದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+