• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ನವದೆಹಲಿ ಏಮ್ಸ್ ಆಸ್ಪತ್ರೆಗೆ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ದಾಖಲು

|

ನವದೆಹಲಿ, ಫೆಬ್ರವರಿ.19: ಬಿಜೆಪಿಯ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ವೈದ್ಯರ ಸಲಹೆ ಮೇರೆಗೆ ನವದೆಹಲಿಯ ಅಖಿಲ ಭಾರತ ವಿಜ್ಞಾನ ಮತ್ತು ವೈದ್ಯಕೀಯ ಸಂಸ್ಥೆ(ಏಮ್ಸ್) ಆಸ್ಪತ್ರೆಗೆ ಶುಕ್ರವಾರ ದಾಖಲಾಗಿದ್ದಾರೆ ಎಂದು ಅವರ ಕಚೇರಿ ಮೂಲಗಳು ತಿಳಿಸಿವೆ.

ಭೋಪಾಲ್ ನ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರಿಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ವೈದ್ಯರು ಆಸ್ಪತ್ರೆಗೆ ದಾಖಲಾಗುವಂತೆ ಸಲಹೆ ನೀಡಿದ್ದರು. ಈ ಹಿಂದೆ ಅವರಲ್ಲಿ ಕೊರೊನಾವೈರಸ್ ಸೋಂಕು ಕಾಣಿಸಿಕೊಂಡಿದ್ದು, ಇದೇ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.

ಹೊಸ ದಾಖಲೆ: ಭಾರತದಲ್ಲಿ 1 ಕೋಟಿ ಮಂದಿಗೆ ಕೊರೊನಾವೈರಸ್ ಲಸಿಕೆ

ಕಳೆದ ಡಿಸೆಂಬರ್.18, 2020ರಲ್ಲಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿತ್ತು. ನವದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಡಿಸ್ಚಾರ್ಜ್ ಆಗಿರುವ ಅವರಲ್ಲಿ ಮತ್ತೆ ಸೋಂಕಿನ ಲಕ್ಷಣಗಳು ಕಂಡು ಬಂದಿರುವ ಹಿನ್ನೆಲೆ ಮತ್ತೊಮ್ಮೆ ಆರೋಗ್ಯ ತಪಾಸಣೆಗೆ ತೆರಳುವಂತೆ ವೈದ್ಯರು ಸಲಹೆ ನೀಡಿದ್ದರು ಎಂದು ಹೇಳಲಾಗಿದೆ.

ದೇಶದಲ್ಲಿ ಕೊರೊನಾವೈರಸ್ ಅಂಕಿ-ಸಂಖ್ಯೆ:

ಭಾರತದಲ್ಲಿ ಕೊರೊನಾವೈರಸ್ ಹೊಸ ಪ್ರಕರಣಗಳ ಸಂಖ್ಯೆ 13 ಸಾವಿರದ ಗಡಿ ದಾಡಿದೆ. ಕಳೆದ 24 ಗಂಟೆಗಳಲ್ಲೇ 13,193 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 1,09,63,394ಕ್ಕೆ ಏರಿಕೆಯಾಗಿದೆ. ಒಂದೇ ದಿನ 97 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 1,56,111ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಒಟ್ಟು 1,39,542 ಸಕ್ರಿಯ ಪ್ರಕರಣಗಳಿವೆ.

English summary
BJP MP Pragya Singh Thakur Admitted To New Delhi AIIMS.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X