ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಟಲಿಯಿಂದ ಬಂದ ರಾಹುಲ್‌ ಗಾಂಧಿಯನ್ನು ತಪಾಸಣೆಗೆ ಒಳಪಡಿಸಲಿ: ರಮೇಶ್ ಬಿಧೂರಿ

|
Google Oneindia Kannada News

ನವದೆಹಲಿ, ಮಾರ್ಚ್ 4: ಇಟಲಿಯಿಂದ ಬಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಕೂಡ ತಪಾಸಣೆಗೆ ಒಳಪಡಿಸಬೇಕು ಎಂದು ಬಿಜೆಪಿ ಸಂಸದ ರಮೇಶ್ ಬಿಧೂರಿ ಒತ್ತಾಯಿಸಿದ್ದಾರೆ.

ರಾಹುಲ್ ಗಾಂಧಿ ಇತ್ತೀಚೆಗಷ್ಟೇ ಇಟಲಿಯಿಂದ ಬಂದಿದ್ದಾರೆ ಎಂದು ನನಗೆ ಗೊತ್ತಿದೆ. ವಿಮಾನ ನಿಲ್ದಾಣದಲ್ಲಿ ಅವರನ್ನು ಪರೀಕ್ಷೆ ಮಾಡಿದ್ದಾರೋ ಇಲ್ಲವೋ ಗೊತ್ತಿಲ್ಲ. ಅವರಿಗೆ ಕೊರೊನಾ ವೈರಸ್ ತಗುಲಿದ್ದರೂ ಗೊತ್ತಾಗುವುದಿಲ್ಲ.

ಬೆಂಗಳೂರು: ಕೊರೊನಾ ಸೋಂಕಿತ ಟೆಕ್ಕಿ ಕೆಲಸ ಮಾಡುತ್ತಿದ್ದ ಕಂಪನಿಗೆ ರಜೆಬೆಂಗಳೂರು: ಕೊರೊನಾ ಸೋಂಕಿತ ಟೆಕ್ಕಿ ಕೆಲಸ ಮಾಡುತ್ತಿದ್ದ ಕಂಪನಿಗೆ ರಜೆ

ಪಾರ್ಲಿಮೆಂಟ್ ಹೊರಗಡೆ ಸುದ್ದಿಗಾರರೊಂದಿಗೆ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿಯವರು ಖುದ್ದಾಗಿ ಕೊರೊನಾ ಬಗ್ಗೆ ಮಾತನಾಡಿದ್ದಾರೆ. ದೇಶದಲ್ಲಿ 28 ಪ್ರಕರಣಗಳು ದೃಢಪಟ್ಟಿವೆ.

BJP MP Ramesh Says Rahul Gandhi Came From Italy He Too Must Get Checked

ಇನ್ನು ದುಬೈನಿಂದ ಬೆಂಗಳೂರಿಗೆ ಇಂಡಿಗೋ ವಿಮಾನದ ಮೂಲಕ ಬಂದಿಳಿದಿದ್ದ ಕೊರೊನಾ ಸೋಂಕಿತ ಟೆಕ್ಕಿ ಇದ್ದ ವಿಮಾನ ಸಿಬ್ಬಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ. ಭಾರತದಲ್ಲೂ ಆತಂಕಕ್ಕೆ ಕಾರಣವಾಗಿರುವ ಕೊರೊನಾ ವೈರಸ್‌ ಈ ಸಾರಿಯ ಹೋಳಿ ಸಂಭ್ರಮಾಚರಣೆ ಮೇಲೆ ಕರಿನೆರಳು ಬೀರಿದೆ. ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ಈ ಸಾರಿಯ ಹೋಳಿ ಸಂಭ್ರಮದಲ್ಲಿ ಭಾಗಿಯಾಗುತ್ತಿಲ್ಲ.

ಕೊರೊನಾ; ಟೆಕ್ಕಿಯ ಸಹೋದ್ಯೋಗಿ ಆಸ್ಪತ್ರೆಗೆ ದಾಖಲು, ಸಚಿವರ ಟ್ವೀಟ್ಕೊರೊನಾ; ಟೆಕ್ಕಿಯ ಸಹೋದ್ಯೋಗಿ ಆಸ್ಪತ್ರೆಗೆ ದಾಖಲು, ಸಚಿವರ ಟ್ವೀಟ್

ಮುಂದಿನ ವಾರ ಹೋಳಿ ಸಂಭ್ರಮಾಚರಣೆ ಇಡೀ ದೇಶಾದ್ಯಂತ ನಡೆಯಲಿದ್ದು, ಕೊರೊನಾ ವೈರಸ್ ಆತಂಕ ಹೋಳಿ ಮೇಲೆ ಬಿದ್ದಿರುವುದರಿಂದ ಹೋಳಿ ಸಂಭ್ರಮಾಚರಣೆಗೆ ಅಡ್ಡಿಯಾಗಬಹುದು ಎನ್ನಲಾಗಿದೆ. ಕೊರೊನಾ ಸೋಂಕು ತಗುಲುವ ಸಾಧ್ಯತೆಯ ಹಿನ್ನೆಲೆಯಲ್ಲಿ ತಜ್ಞರ ಸಲಹೆ ಮೇರೆಗೆ ಮೋದಿ ಹೋಳಿಯಲ್ಲಿ ಪಾಲ್ಗೊಳ್ಳದಿರಲು ನಿರ್ಧರಿಸಿದ್ದಾರೆ.

English summary
BJP MP from Delhi Ramesh Bidhuri on Wednesday suggested that Congress leader Rahul Gandhi too must go through due process of coronavirus quarantine and sample checking.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X