ಸಂಸದೆ ಶೋಭಾ ಕರಂದ್ಲಾಜೆ ದೆಹಲಿ ಬ್ಯಾಂಕ್ ಖಾತೆಗೆ ಕನ್ನ
ಬೆಂಗಳೂರು, ಫೆಬ್ರವರಿ 12: ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅವರ ದೆಹಲಿಯಲ್ಲಿರುವ ಬ್ಯಾಂಕ್ ಖಾತೆಗೆ ಖದೀಮರು ಕನ್ನ ಹಾಕಿರುವ ಘಟನೆ ವರದಿಯಾಗಿದೆ.
ಈ ಬಗ್ಗೆ ಸಂಸದೆ ಶೋಭಾ ಕರಂದ್ಲಾಜೆ ಅವರು ನವದೆಹಲಿಯ ಸಂಸತ್ ಭವನ ಮಾರ್ಗದ ಪೊಲೀಸರಿಗೆ ದೂರು ನೀಡಿದ್ದಾರೆ.
ಸಂಸತ್ ಭವನದ ಭಾರತೀಯ ಸ್ಟೇಟ್ ಬ್ಯಾಂಕ್‌ನ ವೇತನದ ಖಾತೆಯಿಂದ ಹಣ ಲಪಟಾಯಿಸಲಾಗಿದೆ ಎಂದು ಶೋಭಾ ಕರಂದ್ಲಾಜೆ ಅವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಬ್ಯಾಂಕ್ ಖಾತೆಯಿಂದ ಸುಮಾರು 20 ಲಕ್ಷ ರೂಪಾಯಿ ಕಳವು ಮಾಡಲಾಗಿದೆ ಎನ್ನಲಾಗಿದೆ. ಈ ವಿಚಾರವನ್ನು ದೊಡ್ಡದು ಮಾಡಲು ಇಷ್ಟವಿಲ್ಲ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಹ್ಯಾಕರ್‌ಗಳು ಪ್ರಭಾವಿ ವ್ಯಕ್ತಿಗಳು ಮತ್ತು ಸಿರಿವಂತರ ಬ್ಯಾಂಕ್ ಖಾತೆಗಳಿಗೆ ಕನ್ನ ಹಾಕಿರುವ ಘಟನೆ ಅನೇಕ ಬಾರಿ ನಡೆದಿವೆ. ಸುಮಾರು ಎರಡು ವರ್ಷಗಳ ಹಿಂದೆ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಅವರ ಬೆಂಗಳೂರಿನ ಜೆಸಿ ರಸ್ತೆಯಲ್ಲಿರುವ ಎಸ್‌ಬಿಐ ಉಳಿತಾಯ ಖಾತೆಗೆ ಕನ್ನ ಹಾಕಿ ಸುಮಾರು 1.9 ಲಕ್ಷ ರೂಪಾಯಿ ಕದಿಯಲಾಗಿತ್ತು.












Click it and Unblock the Notifications