ಮಮತಾ ಬ್ಯಾನರ್ಜಿ ಮತ್ತು ಸುಬ್ರಮಣಿಯನ್ ಸ್ವಾಮಿ ಭೇಟಿ ಹಿಂದೆ ರಾಜಕೀಯ ಕುತೂಹಲ?
ನವೆದೆಹಲಿ, ನವೆಂಬರ್ 24: ಕೇಂದ್ರದ ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ಸಂಸದ ಸುಬ್ರಮಣಿಯನ್ ಸ್ವಾಮಿ ಬುಧವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರನ್ನು ಭೇಟಿ ಮಾಡಲಿದ್ದಾರೆ ಎಂದು ಟಿಎಂಸಿ ತಿಳಿಸಿದೆ.
ದೆಹಲಿಯಲ್ಲಿರುವ ತೃಣಮೂಲ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅಧಿಕೃತ ನಿವಾಸದಲ್ಲಿ ಮಧ್ಯಾಹ್ನ 3.30ಕ್ಕೆ ಉಭಯ ನಾಯಕರ ನಡುವೆ ಸಭೆ ನಡೆಯುವ ಸಾಧ್ಯತೆಯಿದೆ. ಮಂಗಳವಾರ ಕೋಲ್ಕತ್ತಾದಲ್ಲಿದ್ದ ಸುಬ್ರಮಣಿಯನ್ ಸ್ವಾಮಿ, ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧಂಖರ್ ಅವರನ್ನು ಭೇಟಿಯಾಗಿದ್ದರು.
ಬುಧವಾರವೇ ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ, ಈ ವೇಳೆ ಪಶ್ಚಿಮ ಬಂಗಾಳದಲ್ಲಿ ಬಿಎಸ್ಎಫ್‌ನ ಪ್ರಾದೇಶಿಕ ವ್ಯಾಪ್ತಿ ವಿಸ್ತರಿಸುವುದು ಹಾಗೂ ತ್ರಿಪುರಾದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಮೇಲೆ ನಡೆಸಿದ ದಾಳಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಪ್ರಸ್ತಾಪಿಸಲಿದ್ದಾರೆ ಎಂದು ತಿಳಿದು ಬಂದಿದೆ. ಇದರ ಮಧ್ಯೆ ಮಮತಾ ಬ್ಯಾನರ್ಜಿ ಹಾಗೂ ಸುಬ್ರಮಮಣಿಯನ್ ಸ್ವಾಮಿ ಭೇಟಿಯು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರೆಳಿಸಿದೆ.

ಕುತೂಹಲ ಕೆರಳಿಸಿದ್ದು ಏಕೆ ಬ್ಯಾನರ್ಜಿ, ಸ್ವಾಮಿ ಭೇಟಿ?:
ಒಂದು ಕಾಲದಲ್ಲಿ ಭಾರತೀಯ ಜನತಾ ಪಕ್ಷದ ಮೇಲ್ಪಕ್ತಿ ನಾಯಕರ ಸಾಲಿನಲ್ಲಿ ಇದೇ ಸುಬ್ರಮಣಿಯನ್ ಸ್ವಾಮಿ ಕಾಣಿಸಿಕೊಳ್ಳುತ್ತಿದ್ದರು. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಎರಡನೇ ಅವಧಿ ಸರ್ಕಾರದ ಬಗ್ಗೆ ಹಲವು ಬಾರಿ ಟೀಕಿಸಿದ್ದ ಸುಬ್ರಮಣಿಯನ್ ಸ್ವಾಮಿ, ಹಲವು ಸಂದರ್ಭಗಳಲ್ಲಿ ಟಿಎಂಸಿ ಅನ್ನು ಹಾಡಿ ಹೊಗಳಿದ್ದರು. ಈ ಬೆಳವಣಿಗೆಗಳ ಮಧ್ಯೆ ಕಳೆದ ತಿಂಗಳು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಿಂದ ಸುಬ್ರಮಣಿಯನ್ ಸ್ವಾಮಿ ಅವರನ್ನು ಕೈಬಿಡಲಾಗಿತ್ತು.
ಕಳೆದ ಅಕ್ಟೋಬರ್‌ನಲ್ಲಿ ನಡೆಯಲಿರುವ ಜಾಗತಿಕ ಶಾಂತಿ ಸಮ್ಮೇಳನದಲ್ಲಿ ಭಾಗವಹಿಸಲು ರೋಮ್‌ಗೆ ಭೇಟಿ ನೀಡಲು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ಅನುಮತಿ ನಿರಾಕರಿಸಿದ್ದಕ್ಕಾಗಿ ಕೇಂದ್ರ ಸರ್ಕಾರವನ್ನು ಸ್ವಾಮಿ ಟೀಕಿಸಿದ್ದರು.
ದೀದಿಗೆ ಶುಭಾಷಯ ತಿಳಿಸಿದ್ದ ಸ್ವಾಮಿ:
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನಂದಿಗ್ರಾಮ್‌ನಲ್ಲಿ ಪ್ರಚಾರ ಮಾಡುವಾಗ ಮಮತಾ ಬ್ಯಾನರ್ಜಿಯವರ ಕಾಲಿಗೆ ಗಾಯವಾಗಿದ್ದು, ಶೀಘ್ರ ಚೇತರಿಸಿಕೊಳ್ಳಲಿ ಎಂದು ಸುಬ್ರಮಣಿಯನ್ ಸ್ವಾಮಿ ಶುಭಾಶಯ ತಿಳಿಸಿದ್ದರು. ಈ ಘಟನೆಯು ರಾಜ್ಯದ ಚುನಾವಣೆಗೂ ಮುನ್ನ ಟಿಎಂಸಿ ಮತ್ತು ಬಿಜೆಪಿ ನಡುವೆ ಮಾತಿನ ಸಮರಕ್ಕೆ ಕಾರಣವಾಗಿತ್ತು.
ನಮ್ಮ ಹೋರಾಟ ರಾಜಕೀಯ ರಂಗದಲ್ಲಿ ಮಾತ್ರ:
ತಮ್ಮ ರಾಜಕೀಯ ನಿಲುವನ್ನು ಟೀಕಿಸುವ ಟ್ವೀಟ್ ಸಂದೇಶಕ್ಕೆ ಸ್ವಾಮಿ ಪ್ರತಿಕ್ರಿಯೆ ನೀಡಿದ್ದರು. "ನನ್ನ ಪ್ರಕಾರ ಮಮತಾ ಬ್ಯಾನರ್ಜಿ ಪಕ್ಕಾ ಹಿಂದೂ ಮತ್ತು ದುರ್ಗಾ ಭಕ್ತರಾಗಿದ್ದಾರೆ. ಇದರ ಆಧಾರದ ಮೇಲೆ ಅವರು ಕಾರ್ಯ ನಿರ್ವಹಿಸುತ್ತಾರೆ. ಅವರ ರಾಜಕೀಯವೇ ಬೇರೆಯಾಗಿದೆ. ನಾವು ಆ ಮೈದಾನದಲ್ಲಿ ಹೋರಾಡುತ್ತೇವೆ," ಎಂದಿದ್ದರು.
ಕೇಂದ್ರ ಸರ್ಕಾರವನ್ನು ಟೀಕಿಸಿದ್ದ ಸಂಸದ ಸುಬ್ರಮಣಿಯನ್ ಸ್ವಾಮಿ:
ಬಿಜೆಪಿ ಸಂಸದರಾಗಿದ್ದರೂ ಸಹ ಕೇಂದ್ರ ಸರ್ಕಾರವನ್ನು ಹಲವು ಬಾರಿ ಸುಬ್ರಮಣಿಯನ್ ಸ್ವಾಮಿ ತಿವಿದಿದ್ದರು. ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ ಜಾರಿಗೊಳಿಸಿದ ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಘೋಷಣೆಯನ್ನು ಅವರು ಸ್ವಾಗತಿಸಿದ್ದರು.
"ಕಳೆದ ಒಂದು ವರ್ಷಗಳ ಕಾಲ ಬಿಸಿಲು ಹಾಗೂ ಮೈಕೊರೆಯುವ ಚಳಿ ನಡುವೆ ಶಾಂತಿಯುತ ಸತ್ಯಾಗ್ರಹ ನಡೆಸಿದ ರೈತರ ಸಂಕಷ್ಟಗಳನ್ನು ನಿವಾರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಿರ್ಧಾರದಿಂದ ನನಗೆ ತುಂಬಾ ಸಂತೋಷವಾಗುತ್ತಿದೆ. ಆದರೆ ಎನ್‌ಇಸಿಯಲ್ಲಿ ನಿರ್ಣಯವನ್ನು ಅಂಗೀಕರಿಸದಿರಲು ಬಿಜೆಪಿ ಪ್ರಾಯಶ್ಚಿತ್ತ ಪಡಬೇಕಾಗಿದೆ," ಎಂದು ಮಾಜಿ ಸಚಿವ ಸುಬ್ರಮಣಿಯನ್ ಸ್ವಾಮಿ ಕೂ ಮಾಡಿದ್ದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications