ಚಿತ್ರಗಳಲ್ಲಿ ನೋಡಿ ಬಿಜೆಪಿ ರಾಷ್ಟ್ರೀಯ ಪರಿಷತ್ ಸಭೆ
ನವದೆಹಲಿ, ಆ.9 : ಲೋಕಸಭಾ ಚುನಾವಣೆಯಲ್ಲಿ ದಾಖಲಾಗಿರುವ ಬಿಜೆಪಿಯ ಅಭೂತಪೂರ್ವ ವಿಜಯವು ಸಿದ್ಧಾಂತದ ವಿಜಯವಾಗಿದೆ ಎಂದು ಬಿಜೆಪಿಯ ನೂತನ ಅಧ್ಯಕ್ಷ ಅಮಿತ್ ಶಾ ವರ್ಣಿಸಿದ್ದಾರೆ. ಪಕ್ಷದ ಮೇಲೆ ನಂಬಿಕೆ ಇಟ್ಟು ಮತ ನೀಡಿದ ಬಡವರ ಏಳಿಗೆಗಾಗಿ ಕೆಲಸ ಮಾಡೋಣ ಎಂದು ಶಾ ಪಕ್ಷದ ಎಲ್ಲಾ ನಾಯಕರಿಗೆ ಕರೆ ನೀಡಿದ್ದಾರೆ.
ನವದೆಹಲಿಯ ಜವಹಾರ್ ಲಾಲ್ ನೆಹರು ಕ್ರೀಡಾಂಗಣದಲ್ಲಿ ಶನಿವಾರ ಬಿಜೆಪಿಯ ರಾಷ್ಟ್ರೀಯ ಪರಿಷತ್ ಸಭೆ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ಹಿರಿಯ ನಾಯಕರು ಇಂದಿನ ಸಭೆಯಲ್ಲಿ ಪಾಲ್ಗೊಂಡಿದ್ದರು. ಹಿರಿಯ ನಾಯಕರ ಸಮ್ಮುಖದಲ್ಲಿ ಅಮಿತ್ ಶಾ ಅವರು ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. [ಬಿಜೆಪಿ ಬಡವರ ಪಕ್ಷ, ಅವರ ಅಭಿವೃದ್ಧಿ ಮಾಡೋಣ]
ರಾಷ್ಟ್ರೀಯ ಪರಿಷತ್ ಸಭೆ ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅದ್ಭುತ ವಿಜಯಕ್ಕೆ ಪಕ್ಷದ ತಳಮಟ್ಟದ ಕಾರ್ಯಕರ್ತರೇ ಕಾರಣ. ಅವರೆಲ್ಲರನ್ನೂ ತಾನು ಕೃತಜ್ಞತೆಯಿಂದ ಸ್ಮರಿಸುತ್ತಾ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು. ಪರಿಷತ್ ಸಭೆಯ ಚಿತ್ರಗಳು ಇಲ್ಲಿವೆ [ಪಿಟಿಐ ಚಿತ್ರ]

ಅಮಿತ್ ಶಾ ಅಧಿಕಾರ ಸ್ವೀಕಾರ
ನವದೆಹಲಿಯ ಜವಹಾರ್ ಲಾಲ್ ನೆಹರು ಕ್ರೀಡಾಂಗಣದಲ್ಲಿ ಶನಿವಾರ ಬಿಜೆಪಿ ರಾಷ್ಟ್ರೀಯ ಪರಿಷತ್ ಸಭೆ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ಹಿರಿಯ ನಾಯಕರು ಇಂದಿನ ಸಭೆಯಲ್ಲಿ ಪಾಲ್ಗೊಂಡಿದ್ದರು. ಹಿರಿಯ ನಾಯಕರ ಸಮ್ಮುಖದಲ್ಲಿ ಅಮಿತ್ ಶಾ ಅವರು ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.

ಉನ್ನತ ಹುದ್ದೆ ಪಡೆಯುವುದು ಇಲ್ಲಿ ಮಾತ್ರ ಸಾಧ್ಯ
ಒಬ್ಬ ಸಾಮಾನ್ಯ ಕಾರ್ಯಕರ್ತ ದೇಶದ ಪ್ರಧಾನಿಯಾಗಬಹುದು ಎಂಬುದನ್ನು ನರೇಂದ್ರ ಮೋದಿ ಅವರು ಸಾಬೀತುಪಡಿಸಿದ್ದಾರೆ. ಅದೇ ರೀತಿ ಸಾಮಾನ್ಯ ಕಾರ್ಯಕರ್ತ ಪಕ್ಷನಾಗಿದ್ದ ನಾನು ಅಧ್ಯಕ್ಷನಾಗಿದ್ದೇನೆ ಇದು ಬಿಜೆಪಿ ಪಕ್ಷದಲ್ಲಿ ಮಾತ್ರ ಸಾಧ್ಯ. ಬಿಜೆಪಿ ಸಾಮಾನ್ಯರ, ಬಡವರ ಪಕ್ಷ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ನಾಯಕರ ನಂಬಿಕೆ ಉಳಿಸುತ್ತೇನೆ
ನನ್ನ ಮೇಲೆ ನಂಬಿಕೆ ಇಟ್ಟು ನನಗೆ ಅಧ್ಯಕ್ಷಸ್ಥಾನ ನೀಡಿದ ಬಿಜೆಪಿ ನಾಯಕರಿಗೆ ನಾನು ಚಿರಋಣಿ ಎಂದು ಹೇಳಿದ ಅಮಿತ್ ಶಾ, ನನ್ನ ಮೇಲೆ ಭರವಸೆ ಇಟ್ಟು ನನಗೆ ಉನ್ನತ ಜವಾಬ್ದಾರಿ ವಹಿಸಿದ್ದಾರೆ. ಅವರು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಖಂಡಿತ ಉಳಿಸುತ್ತೇನೆ ಎಂದು ಹೇಳಿದರು.

ಸಭೆಯಲ್ಲಿ ಪಾಲ್ಗೊಂಡ ಮೋದಿ
ಒಂದು ದಿನದ ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡಿದ್ದರು. ಬೆಳಗ್ಗೆ ಸಭೆಯ ಉದ್ಘಾಟನಾ ಸಮಯದಲ್ಲೇ ಆಗಮಿಸಿದ್ದ ಮೋದಿ ಹಿರಿಯ ನಾಯಕರೊಂದಿಗೆ ಮಾತುಕತೆ ನಡೆಸಿದರು.

ಅಡ್ವಾಣಿ ಆಶೀರ್ವಾದ ಪಡೆದ ಶಾ
ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಅಮಿತ್ ಶಾ ಪಕ್ಷದ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು.

ಸಭೆಯಲ್ಲಿ ಪಾಲ್ಗೊಂಡಿದ್ದವರು
ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ರಾಜನಾಥ್ ಸಿಂಗ್, ಹಿರಿಯ ನಾಯಕ ಎಲ್.ಕೆ.ಅಡ್ವಾಣಿ, ಹಣಕಾಸು ಸಚಿವ ಅರುಣ್ ಜೇಟ್ಲಿ, ಪಕ್ಷದ ಅಧ್ಯಕ್ಷ ಅಮಿತ್ ಶಾ, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ 200ಕ್ಕೂ ಅಧಿಕ ಜನರು ಭಾಗವಹಿಸಿದ್ದರು.

ಸಮರ್ಥ ಪ್ರಧಾನಿ ಸಿಕ್ಕಿದ್ದಾರೆ
ಕಳೆದ ಹತ್ತು ವರ್ಷಗಳಿಂದ ಕಾಂಗ್ರೆಸ್ ಅಭಿವೃದ್ಧಿ ಕಾರ್ಯಗಳು ಕೈಗೊಳ್ಳದ ಹಿನ್ನೆಲೆಯಲ್ಲಿ ದೇಶ ಸ್ಥಿತಿ ಅಧೋಗತಿಗೆ ಹೋಗಿತ್ತು. ಇದನ್ನು ಸಮರ್ಥವಾಗಿ ನಿಭಾಯಿಸುವ ದಕ್ಷ ಪ್ರಧಾನಿಯ ಅವಶ್ಯಕತೆ ದೇಶಕ್ಕೆ ಇತ್ತು. ಈ ನಿಟ್ಟಿನಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಯಾಗಿದ್ದಾರೆ ಅವರ ನೇತೃತ್ವದಲ್ಲಿ ದೇಶದ ಅಭಿವೃದ್ಧಿ ಕಾಣಲಿದೆ ಎಂದು ಅಮಿತ್ ಶಾ ಹೇಳಿದರು.

ದೇಶವನ್ನು ಕಾಂಗ್ರೆಸ್ ಮುಕ್ತ ಮಾಡೋಣ
ದೇಶ ಸಂಪೂರ್ಣವಾಗಿ ಕಾಂಗ್ರೆಸ್ ಮುಕ್ತವಾಗಿಲ್ಲ ಎಂದು ಹೇಳಿರುವ ಅಮಿತ್ ಶಾ, ಮುಂಬರುವ ಎಲ್ಲಾ ಚುನಾವಣೆಗಳಲ್ಲಿಯೂ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸುವ ಮೂಲಕ ದೇಶವನ್ನು ಕಾಂಗ್ರೆಸ್ ಮುಕ್ತ ಮಾಡೋಣ ಎಂದು ಕರೆ ನೀಡಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ
ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 15ರಂದು ದೆಹಲಿಯ ಕೆಂಪುಕೋಟೆಯ ಮೇಲೆ ಧ್ವಜಾರೋಹಣ ಮಾಡುತ್ತಾರೆ. ಅದೇ ರೀತಿ ದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲೂ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗುವುದು ಅಂದು ಬಿಜೆಪಿಯ ಸಾಮಾನ್ಯ ಕಾರ್ಯಕರ್ತರಿಂದ ಧ್ವಜಾರೋಹಣ ನಡೆಯಲಿದೆ ಎಂದು ಅಮಿತ್ ಶಾ ಹೇಳಿದರು.

ಹಿರಿಯರ ಮಾರ್ಗದರ್ಶನದಿಂದ ಯಶಸ್ಸು
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಮೋಘ ಜಯ ಗಳಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ರಾಜನಾಥ್ ಸಿಂಗ್‌ರ ಜೋಡಿಯ ಯಶಸ್ಸಾಗಿದೆ. ಹಿರಿಯ ನಾಯಕರ ಮಾರ್ಗದರ್ಶನವೂ ಇದಕ್ಕಿತ್ತು ಎಂದು ಅಮಿತ್ ಶಾ ಹೇಳಿದರು.

ಪಕ್ಷದ ಕಾರ್ಯಕರ್ತರ ಶ್ರಮ ಕಾರಣ
ಲೋಕಸಭಾ ಚುನಾವಣೆಯಲ್ಲಿ ಪಕ್ಷದ ವಿಜಯಕ್ಕೆ ಪಕ್ಷದ ತಳಮಟ್ಟದ ಕಾರ್ಯಕರ್ತರೇ ಕಾರಣ ಎಂದು ಅಮಿತ್ ಶಾ ಹೇಳಿದರು.












Click it and Unblock the Notifications