ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚುನಾವಣಾ ಫಲಿತಾಂಶಕ್ಕೆ ಮೊದಲೇ "ದೀದಿ" ಬಿಟ್ಟುಹೋದ್ರಾ ಪ್ರಶಾಂತ್; ಬಿಜೆಪಿ ವ್ಯಂಗ್ಯ

|
Google Oneindia Kannada News

ನವದೆಹಲಿ, ಮಾರ್ಚ್ 02: ಪಂಜಾಬ್‌ನಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಸಿಎಂ ಅಮರಿಂದರ್ ಸಿಂಗ್ ಸಿದ್ಧತೆ ನಡೆಸುತ್ತಿದ್ದು, ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಪರ ಚುನಾವಣಾ ಪ್ರಚಾರ ಕಾರ್ಯತಂತ್ರ ರೂಪಿಸುತ್ತಿರುವ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರನ್ನು ಪ್ರಧಾನ ಸಲಹೆಗಾರರಾಗಿ ನೇಮಿಸಿಕೊಂಡಿದ್ದಾರೆ.

ಈ ಕುರಿತು ಬಿಜೆಪಿ ಪ್ರತಿಕ್ರಿಯಿಸಿದ್ದು, "ಪ್ರಶಾಂತ್ ಅವರು ಕಾಂಗ್ರೆಸ್ ಸೇರಲು "ದೀದಿ"ಯನ್ನು ಈಗಲೇ ಬಿಟ್ಟು ಹೋಗಿದ್ದಾರೆ" ಎಂದು ವ್ಯಂಗ್ಯ ಮಾಡಿದೆ.

BJP Reaction Over Poll Strategist Prashanth Kishore Joins Punjab CM Amarinder

"ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್, ದೀದಿಯನ್ನು ಬಿಟ್ಟುಬಿಟ್ಟಿದ್ದಾರೆ. ಚುನಾವಣಾ ಫಲಿತಾಂಶ ಬರುವ ಮುನ್ನವೇ ಬೇರೆಡೆಗೆ ದೊಡ್ಡ ಸಲಹೆಗಾರನಾಗಿ ಸೇರಿಕೊಂಡಿದ್ದಾರೆ. ಈ ಸಂಗತಿಯೇ ಸಾಕಷ್ಟು ವಿಚಾರವನ್ನು ಹೇಳುತ್ತಿದೆ" ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಟೀಕಿಸಿದ್ದಾರೆ.

2022ರ ಚುನಾವಣೆಗೆ ಈಗಲೇ ಜತೆಗೂಡಿದ ಅಮರಿಂದರ್ ಸಿಂಗ್-ಪ್ರಶಾಂತ್ ಕಿಶೋರ್ 2022ರ ಚುನಾವಣೆಗೆ ಈಗಲೇ ಜತೆಗೂಡಿದ ಅಮರಿಂದರ್ ಸಿಂಗ್-ಪ್ರಶಾಂತ್ ಕಿಶೋರ್

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪರ ಪ್ರಶಾಂತ್ ಕಿಶೋರ್, ಚುನಾವಣಾ ತಂತ್ರಗಾರನಾಗಿದ್ದಾರೆ. ಮಾರ್ಚ್ 27ರಂದು ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಆರಂಭಗೊಳ್ಳಲಿದ್ದು, ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಈ ನಡುವೆ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪರವಾಗಿ ಚುನಾವಣಾ ಪ್ರಚಾರ ತಂತ್ರ ರೂಪಿಸುತ್ತಿರುವ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರು ತಮ್ಮ ತಂಡ ಸೇರಿಕೊಂಡಿರುವುದಾಗಿ ಅಮರಿಂದರ್ ಸಿಂಗ್ ಸೋಮವಾರ ಘೋಷಿಸಿದ್ದಾರೆ.

English summary
BJP on Tuesday(Mar 2) said Poll strategist Prashanth Kishore has "left" Trinamool Congress president Mamata Banerjee to join Congress leader,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X