ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿ ಚುನಾವಣೆ: 57 ಅಭ್ಯರ್ಥಿಗಳ ಬಿಜೆಪಿ ಪಟ್ಟಿ ಬಿಡುಗಡೆ

|
Google Oneindia Kannada News

ನವದೆಹಲಿ, ಜನವರಿ 17: ದೆಹಲಿ ವಿಧಾನಸಭೆ ಚುನಾವಣೆಗೆ ಬಿಜೆಪಿಯು ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮೊದಲ ಹಂತದಲ್ಲಿ 57 ಅಭ್ಯರ್ಥಿಗಳ ಪಟ್ಟಿಯನ್ನಷ್ಟೇ ಬಿಡುಗಡೆಗೊಳಿಸಿದೆ.

ಒಟ್ಟು 70 ವಿಧಾನಸಭೆ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಬಿಜೆಪಿಯು ಮೊದಲ ಪಟ್ಟಿಯಲ್ಲಿ 57 ಅಭ್ಯರ್ಥಿಗಳ ಹೆಸರನ್ನು ಬಿಡುಗಡೆಗೊಳಿಸಿದೆ. ಈ ಪಟ್ಟಿಯಲ್ಲಿ 11 ಪರಿಶಿಷ್ಟ ಜಾತಿ/ ಪಂಗಡ ಅಭ್ಯರ್ಥಿಗಳು ಮತ್ತು 4 ಮಂದಿ ಮಹಿಳೆಯರಿಗೆ ಸ್ಥಾನ ನೀಡಲಾಗಿದೆ.

ಮಾಡಲ್ ಟೌನ್‌ನಲ್ಲಿ ದೆಹಲಿ ಬಿಜೆಪಿ ನಾಯಕ ಕಪಿಲ್ ಮಿಶ್ರಾ ಕಣಕ್ಕೆ ಇಳಿದಿದ್ದು, ನವದೆಹಲಿ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ. ನವದೆಹಲಿ ಕ್ಷೇತ್ರದಿಂದ ಸಿಎಂ ಅರವಿಂದ ಕೇಜ್ರಿವಾಲ್ ಕಣಕ್ಕೆ ಇಳಿಯಲಿದ್ದಾರೆ.

BJP Relased List Of 57 Candidates For Delhi Assembly Elections

ದೆಹಲಿಯ ಬಿಜೆಪಿ ನಾಯಕ ಮನೋಜ್ ತಿವಾರಿ ಅವರು ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬುದು ಅಂತಿಮವಾಗಿಲ್ಲ. ಎರಡನೇ ಪಟ್ಟಿಯಲ್ಲಿ 13 ಅಭ್ಯರ್ಥಿಗಳ ಹೆಸರು ಬಿಡುಗಡೆ ಮಾಡಲಾಗುವುದು ಎಂದು ದೆಹಲಿ ಬಿಜೆಪಿ ಹೇಳಿದ್ದು, ಆ ಪಟ್ಟಿಯಲ್ಲಿ ಮಜೋಜ್ ತಿವಾರಿ ಹೆಸರು ಇರಲಿದೆ.

ಎಎಪಿಯು ದೆಹಲಿಯ ಎಲ್ಲಾ 70 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಅಂತಿಮಗೊಳಿಸಿ ಪಟ್ಟಿಯನ್ನು ಈಗಾಗಲೇ ಬಿಡುಗಡೆಗೊಳಿಸಿದೆ. ಕಾಂಗ್ರೆಸ್ ಇನ್ನೂ ಪಟ್ಟಿಯನ್ನು ಬಿಡುಗಡೆಗೊಳಿಸಿಲ್ಲ. ಇಂದು ಸಂಜೆ ಅಥವಾ ನಾಳೆ ಕಾಂಗ್ರೆಸ್ ಪಟ್ಟಿ ಬಿಡುಗಡೆಗೊಳಿಸುವ ಸಾಧ್ಯತೆ ಇದೆ.

ದೆಹಲಿ ವಿಧಾನಸಭೆ ಚುನಾವಣೆಯು ಫೆಬ್ರವರಿ 8 ರಂದು ನಡೆಯಲಿದ್ದು, ಫಲಿತಾಂಶವು ಫೆಬ್ರವರಿ 11 ರಂದು ಹೊರಬೀಳಲಿದೆ.

English summary
BJP released list of 57 candidates names for new Delhi assembly elections. AAP already announced 70 candidates names, congress yet to announce.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X