ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ರಾಜ್ಯ ಉಸ್ತುವಾರಿಗಳ ಪಟ್ಟಿಯಲ್ಲಿ ಯಾರಿಗೆಲ್ಲ ಸ್ಥಾನ: ಇಲ್ಲಿದೆ ವಿವರ

|
Google Oneindia Kannada News

ನವದೆಹಲಿ, ನವೆಂಬರ್.13: ಬಿಹಾರ ವಿಧಾನಸಭಾ ಚುನಾವಣೆ ಹಾಗೂ ಉಪ ಚುನಾವಣೆ ಗೆಲುವಿನ ಬೆನ್ನಲ್ಲೇ ಭಾರತೀಯ ಜನತಾ ಪಕ್ಷವು ದೇಶದ ಪ್ರತಿಯೊಂದು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪಕ್ಷದ ಮೇಲುಸ್ತುವಾರಿಗಳನ್ನು ನೇಮಿಸಿ ಆದೇಶ ಹೊರಡಿಸಿದೆ.

ಮಣಿಪುರದ ಬಿಜೆಪಿ ರಾಜ್ಯ ಉಸ್ತುವಾರಿ ಆಗಿ ಸಂಬಿತ್ ಪಾತ್ರಾರನ್ನು ನೇಮಿಸಲಾಗಿದ್ದು, ಮಧ್ಯಪ್ರದೇಶದ ಉಸ್ತುವಾರಿಯಾಗಿ ಪಿ ಮುರಳೀಧರ್ ರಾವ್ ರನ್ನು ನೇಮಿಸಲಾಗಿದೆ. ಜಮ್ಮು - ಕಾಶ್ಮೀರದ ಬಿಜೆಪಿ ರಾಜ್ಯ ಉಸ್ತುವಾರಿ ಸ್ಥಾನಕ್ಕೆ ತರುಣ್ ಚುಂಗ್ ರನ್ನು ನೇಮಿಸಲಾಗಿದೆ.

BJP Released List Of Its State Incharges

ಬಿಹಾರದಲ್ಲಿ ಸಿಎಂ ಯಾರು ಎಂಬುದು ಎನ್ ಡಿಎ ತೀರ್ಮಾನ: ನಿತೀಶ್ಬಿಹಾರದಲ್ಲಿ ಸಿಎಂ ಯಾರು ಎಂಬುದು ಎನ್ ಡಿಎ ತೀರ್ಮಾನ: ನಿತೀಶ್

ಇತ್ತೀಚಿಗೆ ವಿಧಾನಸಭಾ ಚುನಾವಣೆ ನಡೆದ ಬಿಹಾರದಲ್ಲಿ ಬಿಜೆಪಿಯ ಉಸ್ತುವಾರಿ ಆಗಿ ಭೂಪೇಂದ್ರ ಯಾದವ್, ಸಹ ಉಸ್ತುವಾರಿಯಾಗಿ ಹರೀಶ್ ದ್ವಿವೇಗಿ ಮತ್ತು ಅನುಪತ್ ಹಜ್ರಾರನ್ನು ನೇಮಿಸಿರುವ ಕುರಿತು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಕರ್ನಾಟಕದ ಬಿಜೆಪಿ ಉಸ್ತುವಾರಿ ಆಗಿ ಅರುಣ್ ಸಿಂಗ್:

ಭಾರತೀಯ ಜನತಾ ಪಕ್ಷದ ಕರ್ನಾಟಕ ರಾಜ್ಯ ಉಸ್ತುವಾರಿ ಸ್ಥಾನಕ್ಕೆ ಅರುಣ್ ಸಿಂಗ್ ರನ್ನು ನೇಮಕಗೊಳಿಸಿ ಬಿಜೆಪಿ ಹೈಕಮಾಂಡ್ ಆದೇಶ ಹೊರಿಡಿಸಿದೆ. ಇದೇ ವೇಳೆ ಉತ್ತರ ಪ್ರದೇಶದಲ್ಲಿ ಪಕ್ಷದ ಉಸ್ತುವಾರಿ ಸ್ಥಾನಕ್ಕೆ ರಾಧಾ ಮೋಹನ್ ಸಿಂಗ್ ರನ್ನು ಆಯ್ಕೆ ಮಾಡಲಾಗಿದೆ. ಬಿಜೆಪಿಯು ಬಿಡುಗಡೆಗೊಳಿಸಿದ 30 ರಾಜ್ಯ ಮತ್ತು 6 ಕೇಂದ್ರಾಡಳಿತ ಪ್ರದೇಶಗಳಲ್ಲಿ ನೇಮಿಸಿರುವ ಬಿಜೆಪಿ ಉಸ್ತುವಾರಿಗಳ ಹೆಸರು ಮತ್ತು ರಾಜ್ಯದ ಕುರಿತು ಸಂಪೂರ್ಣ ಮಾಹಿತಿಯು ಇಲ್ಲಿದೆ ನೋಡಿ.

English summary
BJP Released List Of Its State Incharges: Here You Get Full Names And States Details.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X