ಲೋಕಸಭೆ ಚುನಾವಣೆ 2019: ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ

ನವದೆಹಲಿ, ಮಾರ್ಚ್‌ 23: ಬಿಜೆಪಿಯು ಲೋಕಸಭೆ ಚುನಾವಣೆಯ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ. ಈ ಮುಂಚೆ ಅದು ಎರಡು ಪಟ್ಟಿಯನ್ನು ಬಿಡುಗಡೆ ಮಾಡಿತ್ತು.

ಇಂದು ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ತೆಲಂಗಾಣ, ಉತ್ತರ ಪ್ರದೇಶ, ಕೇರಳ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳ ಕೆಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಮಾತ್ರವೇ ನೀಡಿದೆ.

BJP releases 11 candidates 3rd list for lok sabha elections 2019

ತೆಲಂಗಾಣದ ಆರು ಕ್ಷೇತ್ರಗಳಿಗೆ, ಉತ್ತರ ಪ್ರದೇಶದ ಮೂರು ಕ್ಷೇತ್ರಗಳಿಗೆ, ಕೇರಳದ ಒಂದು ಕ್ಷೇತ್ರಕ್ಕೆ, ಪಶ್ಚಿಮ ಬಂಗಾಳದ ಒಂದು ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಿಸಿದೆ. ಉತ್ತರ ಪ್ರದೇಶದ ಕೈರಾನಾ ಕ್ಷೇತ್ರಕ್ಕೆ ಪ್ರದೀಪ್ ಚೌದರಿ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ. ಕಳೆದ ವರ್ಷ ನಡೆದ ಉಪಚುನಾವಣೆಯಲ್ಲಿ ಈ ಕ್ಷೇತ್ರವನ್ನು ಬಿಜೆಪಿ ಸೋತಿತ್ತು.

ಮೊದಲ ಪಟ್ಟಿಯಲ್ಲಿ 184 ಅಭ್ಯರ್ಥಿಗಳನ್ನು ಬಿಜೆಪಿ ಘೋಷಿಸಿತ್ತು, ನಿನ್ನೆ ಬಿಡುಗಡೆ ಆದ ಎರಡನೇ ಪಟ್ಟಿಯಲ್ಲಿ 36 ಅಭ್ಯರ್ಥಿಗಳನ್ನು ಘೋಷಿಸಲಾಯಿತು. ಇಂದು 11 ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಈವರೆಗೆ ಒಟ್ಟು 231 ಅಭ್ಯರ್ಥಿಗಳನ್ನು ಬಿಜೆಪಿ ಘೋಷಿಸಿದೆ.

ಕರ್ನಾಟಕದ 20 ಕ್ಷೇತ್ರಗಳಿಗೆ ಈಗಾಗಲೇ ಅಭ್ಯರ್ಥಿಗಳನ್ನು ಅಧಿಕೃತವಾಗಿ ಘೋಷಿಸಿದ್ದು, ಮಂಡ್ಯ, ಬೆಂಗಳೂರು ದಕ್ಷಿಣ ಕ್ಷೇತ್ರ ಸೇರಿದಂತೆ ಎಂಟು ಕ್ಷೇತ್ರಗಳಿಗೆ ಇನ್ನೂ ಘೋಷಣೆ ಆಗಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+