ಬಿಜೆಪಿ ಸಂಸ್ಥಾಪನಾ ದಿನಾಚರಣೆ: ಕಾರ್ಯಕರ್ತರೊಂದಿಗೆ ಮೋದಿ ಸಂವಾದ
ನವದೆಹಲಿ, ಏಪ್ರಿಲ್ 06: ಭಾರತೀಯ ಜನತಾ ಪಕ್ಷದ 38 ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ದೇಶದ ಸುಮಾರು 734 ಜಿಲ್ಲಾ ಘಟಕದ ಕಾರ್ಯಕರ್ತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ನಮೋ app ಮೂಲಕ ವಿಡಿಯೋ ಕಾನ್ಫಿರೆನ್ಸ್ ನಲ್ಲಿ ಮಾತನಾಡಲಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು, ಸಂಸ್ಥಾಪನಾ ದಿನಾಚರಣೆಯ ಹಿನ್ನೆಲೆಯಲ್ಲಿ ಮುಂಬೈಯಲ್ಲಿ ಸಭೆಯೊಂದನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | 2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ
ಈಗಾಗಲೇ ವಿರೋಧ ಪಕ್ಷಗಳು ಎಸ್ಸಿ ಎಸ್ಟಿ ದೌರ್ಜನ್ಯ ಕಾಯ್ದೆ ಸೇರಿದಂತೆ ಹಲವು ವಿಷಯಗಳ ಕುರಿತು ಆಡಳಿತ ಪಕ್ಷವಾದ ಬಿಜೆಪಿಯ ವಿರುದ್ಧ ಹರಿಹಾಯುತ್ತಿರುವ ಕುರಿತಂತೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರಿಂದ ಮೋದಿ ಸಲಹೆಗಳನ್ನು ಆಲಿಸಲಿದ್ದು, ಕೆಲವು ಸೂಚನೆಗಳನ್ನು ನೀಡಲಿದ್ದಾರೆ.

1980 ಏಪ್ರಿಲ್ 06 ರಂದು ಅಧಿಕೃತವಾಗಿ ಭಾರತೀಯ ಜನತಾ ಪಕ್ಷ ಆರಂಭವಾದ ಕಾರಣ ಈ ದಿನವನ್ನು ಸಂಸ್ಥಾಪನಾ ದಿನಾಚರಣೆ ಎಂದು ಆಚರಿಸಲಾಗುತ್ತದೆ.












Click it and Unblock the Notifications