ರಾಜೀವ್‌ಗಾಂಧಿ ಪ್ರತಿಷ್ಠಾನಕ್ಕೆ ಚೀನಾದ ದೇಣಿಗೆ: ಬಿಜೆಪಿ ಹೇಳೋದೇನು?

ನವದೆಹಲಿ, ಜೂನ್ 25: ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್‌ಗೆ ಚೀನಾದಿಂದ ಲಕ್ಷಾಂತರೂ ದೇಣಿಗೆ ಹರಿದುಬಂದಿತ್ತು ಎಂದು ಬಿಜೆಪಿ ಆರೋಪಿಸಿದೆ.

Recommended Video

      SSLC Exam : ತಮಿಳುನಾಡು, ಆಂಧ್ರದಲ್ಲಿಲ್ಲ, ಕರ್ನಾಟಕದಲ್ಲೇಕೆ SSLC ಪರೀಕ್ಷೆ?| Oneindia Kannada

      ಕೇಂದ್ರದಲ್ಲಿ ಮನಮೋಹನ್​ ಸಿಂಗ್​ ನೇತೃತ್ವದ ಯುಪಿಎ ಸರ್ಕಾರ ಆಡಳಿತದಲ್ಲಿದ್ದಾಗ ಚೀನಾ ಅಧ್ಯಕ್ಷ ಕ್ಸಿ ಜಿನ್​ಪಿಂಗ್​ ಉಪಸ್ಥಿತಿಯಲ್ಲಿ ಕಾಂಗ್ರೆಸ್​ ಮುಖಂಡ ರಾಹುಲ್​ ಗಾಂಧಿ ಒಪ್ಪಂದ ಒಂದಕ್ಕೆ ಸಹಿ ಹಾಕಿದ್ದರು.

      ಆಗ ಕಾಂಗ್ರೆಸ್​ ಅಧ್ಯಕ್ಷೆಯಾಗಿದ್ದ ಸೋನಿಯಾ ಗಾಂಧಿ ಅವರ ಉಪಸ್ಥಿತಿಯಲ್ಲಿ ಈ ಒಪ್ಪಂದ ಏರ್ಪಟ್ಟ ಬಳಿಕ ರಾಜೀವ್​ ಗಾಂಧಿ ಪ್ರತಿಷ್ಠಾನಕ್ಕೆ ಚೀನಾ ಸರ್ಕಾರದಿಂದ 90 ಲಕ್ಷ ರೂಪಾಯಿ ದೇಣಿಗೆ ಸಂದಾಯವಾಗಿತ್ತು ಎಂದು ಕಾನೂನು ಸಚಿವ ರವಿಶಂಕರ್ ಪ್ರಸಾದ್ ಆರೋಪಿಸಿದ್ದಾರೆ.

      BJP Says Chinese Funds For Rajiv Gandhi Foundation

      ಚೀನಾ-ಭಾರತದ ನಡುವೆ ಇದೀಗ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ, ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಹಲವರು ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಕಿಡಿ ಕಾರುತ್ತಿದ್ದಾರೆ.

      ರಾಜೀವ್​ ಗಾಂಧಿ ಪ್ರತಿಷ್ಠಾನ 2008-09ನೇ ಸಾಲಿಗೆ ಸಲ್ಲಿಸಿದ್ದ ಲೆಕ್ಕಪತ್ರ ವರದಿಯಲ್ಲಿ ಚೀನಾ ಸರ್ಕಾರ ಪ್ರತಿಷ್ಠಾನಕ್ಕೆ ನೇರವಾಗಿ 90 ಲಕ್ಷ ರೂಪಾಯಿ ದೇಣಿಗೆ ನೀಡಿರುವ ಅಂಶವೂ ಬಹಿರಂಗಗೊಂಡಿದ್ದು, ಕಾಂಗ್ರೆಸ್​ಗೆ ತೀವ್ರ ಇರಿಸುಮುರಿಸು ಉಂಟು ಮಾಡುತ್ತಿದೆ.

      ಇದೇ ಸಂದರ್ಭದಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್​ಪಿಂಗ್​ ಜತೆ ಒಪ್ಪಂದ ಒಂದಕ್ಕೆ ರಾಹುಲ್​ ಗಾಂಧಿ ಸಹಿ ಹಾಕುತ್ತಿರುವ ಭಾವಚಿತ್ರವೊಂದು ಮುಂಚೂಣಿಗೆ ಬಂದಿದೆ.

      ಈ ಒಪ್ಪಂದದ ಪ್ರಕಾರ ಅಂತಾರಾಷ್ಟ್ರೀಯ ಮತ್ತು ಸ್ಥಳೀಯವಾದ ಪ್ರಮುಖ ವಿಷಯದ ಕುರಿತು ಭಾರತ ಮತ್ತು ಚೀನಾ ನಡುವೆ ಉನ್ನತಮಟ್ಟದ ರಾಜತಾಂತ್ರಿಕ ಚರ್ಚೆಗೆ ಅವಕಾಶ ಕಲ್ಪಿಸಲಾಗಿದೆ.

      ರಾಜೀವ್​ ಗಾಂಧಿ ಪ್ರತಿಷ್ಠಾನದ 2005-06ನೇ ಸಾಲಿನ ವಾರ್ಷಿಕ ವರದಿಯಲ್ಲಿ ಕೂಡ ಚೀನಾ ಕೂಡ ಸಂಸ್ಥೆಗೆ ದೇಣಿಗೆ ನೀಡಿರುವುದಾಗಿ ಪ್ರಸ್ತಾಪಿಸಲಾಗಿದೆ. ಇದಕ್ಕೆ ಪೂರಕವಾಗಿ ರಾಜೀವ್​ ಗಾಂಧಿ ಸಮಕಾಲೀನ ಅಧ್ಯಯನ ಸಂಸ್ಥೆ ಕೂಡ ಚೀನಾ ಸರ್ಕಾರ ಡೋನರ್​ ಎಂದು ಹೇಳಿಕೊಂಡಿರುವುದು ಇದೀಗ ಬಹಿರಂಗಗೊಂಡಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+