ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

"ಕರ್ನಾಟಕ ಉಪ ಚುನಾವಣೆಯಲ್ಲಿ ಒಂದು ಕ್ಷೇತ್ರಕ್ಕೆ 100 ಕೋಟಿ ಖರ್ಚು"

|
Google Oneindia Kannada News

Recommended Video

ಯಡಿಯೂರಪ್ಪ ವಿರುದ್ಧ ಸಿದ್ದರಾಮಯ್ಯ ಗರಂ | SIDDARAMAIAH | YEDIYURAPPA | ONEINDIA KANNADA

ನವದೆಹಲಿ, ಜನವರಿ.14: ಕರ್ನಾಟಕದಲ್ಲಿ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿಯವರು ಒಂದೊಂದು ವಿಧಾನಸಭಾ ಕ್ಷೇತ್ರದಲ್ಲಿ 100 ಕೋಟಿ ರುಪಾಯಿಗೂ ಅಧಿಕ ಹಣವನ್ನು ಖರ್ಚು ಮಾಡಿ ಚುನಾವಣೆ ಗೆದ್ದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರವಾಗಿ ಆರೋಪಿಸಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿ ಸರ್ಕಾರವು ರಾಜ್ಯದಲ್ಲಿ ಮತದಾರರನ್ನೆಲ್ಲ ಭ್ರಷ್ಟರನ್ನಾಗಿ ಮಾಡುತ್ತಿದೆ. ಹಣ ಹಂಚಿಕೆ ಮಾಡುವುದರ ಮೂಲಕ ಚುನಾವಣೆ ನಡೆಸಿ ಗೆಲುವು ಸಾಧಿಸಿದೆ ಎಂದು ದೂರಿದ್ದಾರೆ.

ಕೆಪಿಸಿಸಿ ಮುಂದಿನ ಸಾರಥಿ ಡಿಕೆ ಶಿವಕುಮಾರ್?ಕೆಪಿಸಿಸಿ ಮುಂದಿನ ಸಾರಥಿ ಡಿಕೆ ಶಿವಕುಮಾರ್?

ಕೆಪಿಸಿಸಿ ಅಧ್ಯಕ್ಷರ ಸ್ಥಾನಕ್ಕೆ ಯಾರನ್ನು ನೇಮಿಸಬೇಕು ಎಂಬುದರ ಕುರಿತು ಚರ್ಚೆಗೆ ತೆರಳಿರುವ ಮಾಜಿ ಸಿಎಂ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಜೊತೆ ಸುದೀರ್ಘ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದರು.

BJP Spent 100 Crore To One Constituency To Win Assembly By-Election

"ರಾಜ್ಯದಲ್ಲಿ ಟೇಕ್ ಆಫ್ ಆಗದ ಸರ್ಕಾರ":

ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಇಷ್ಟು ದಿನಗಳೇ ಕಳೆದರೂ ಟೇಕ್ ಆಫ್ ಆಗಿಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದರು. ಸರ್ಕಾರದಲ್ಲಿ ಇಂದಿಗೂ ಎಷ್ಟೇ ಖಾತೆಗಳಿಗೆ ಸಚಿವರೇ ಇಲ್ಲ. ಎಲ್ಲ ಖಾತೆಗಳನ್ನು ಮುಖ್ಯಮಂತ್ರಿಗಳೇ ಇಟ್ಟುಕೊಂಡಿದ್ದಾರೆ. ಅದನ್ನು ಸಮರ್ಥವಾಗಿ ನಿಭಾಯಿಸುವಲ್ಲೂ ಯಡಿಯೂರಪ್ಪ ವಿಫಲರಾಗಿದ್ದಾರೆ. ಕೇವಲ ಅಧಿಕಾರಿಗಳನ್ನು ಇಟ್ಟುಕೊಂಡು ರಾಜ್ಯದಲ್ಲಿ ಸರ್ಕಾರವನ್ನು ನಡೆಸಲಾಗುತ್ತಿದೆ ಎಂದು ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

English summary
BJP Spent 100 Crore To One Constituency For Win Assembly By-Election. Ex-CM Siddaramaiah Allegation On State BJP Leaders.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X