NCC ಕುರಿತ ರಾಹುಲ್ ಹೇಳಿಕೆಗೆ ಬಿಜೆಪಿ ವ್ಯಂಗ್ಯ

ನವದೆಹಲಿ, ಮಾರ್ಚ್ 24: ಎನ್ ಸಿಸಿ(National Cadet Corp)ಯ 'ಸಿ' ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ನನಗೆ ಹೆಚ್ಚು ತಿಳಿದಿಲ್ಲ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ವ್ಯಂಗ್ಯವಾಗಿ ಪ್ರತಿಕ್ರಿಯೆ ನೀಡಿದೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ಈ ಕುರಿತು ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವ ಮತ್ತು ಬಿಜೆಪಿ ಮುಖಂಡ ರಾಜ್ಯವರ್ಧನ್ ಸಿಂಗ್ ರಾಥೋರ್, "ಸಾವಿರಾರು ಜನ ಇಷ್ಟಪಡುವ ಎನ್ ಸಿಸಿ ಬಗ್ಗೆ ರಾಹುಲ್ ಗಾಂಧಿಗೆ ಏನೂ ಗೊತ್ತಿಲ್ಲವಂತೆ! ಶಾಲೆ ಮತ್ತು ಕಾಲೇಜುಗಳಲ್ಲಿ ಎನ್ ಸಿಸಿ ಬಗ್ಗೆ ಹೆಮ್ಮೆಯಿತ್ತು. ಅದೇ ನಮಗೆ ಶಿಸ್ತನ್ನೂ, ದೇಶಭಕ್ತಿಯನ್ನೂ ಕಲಿಸಿದ್ದು. ಆದರೆ ಅದರ ಬಗ್ಗೆ ಗೊತ್ತಿಲ್ಲ ಎಂಬ ರಾಹುಲ್ ಗಾಂಧಿ ಹೇಳಿಕೆ ನಿಜಕ್ಕೂ ವಿಪರ್ಯಾಸ" ಎಂದಿದ್ದಾರೆ.

BJP takes on Rahul over NCC comment

ಎರಡು ದಿನಗಳ ಮೈಸೂರು ಪ್ರವಾಸದಲ್ಲಿರುವ ರಾಹುಲ್ ಗಾಂಧಿ, ಇಲ್ಲಿನ ಮಹಾರಾಣಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿದರು. ಈ ವೇಳೆ ವಿದ್ಯಾರ್ಥಿನಿಯೊಬ್ಬರು, "ಎನ್‌ಸಿಸಿಯಲ್ಲಿ 'ಸಿ' ಪ್ರಮಾಣ ಪತ್ರ ನೀಡಿದ ನಂತರ ನೀವು ನಮಗೆ ಏನು ಸೌಲಭ್ಯ ನೀಡುತ್ತೀರಿ?" ಎಂದು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, "ನನಗೆ ಎನ್ ಸಿಸಿ ತರಬೇತಿ ಮತ್ತು ಪ್ರಮಾಣಪತ್ರಗಳ ಬಗ್ಗೆ ಹೆಚ್ಚು ಗೊತ್ತಿಲ್ಲ. ಆದ್ದರಿಂದ ಈ ಪ್ರಶ್ನೆಗೆ ಉತ್ತರಿಸಲಾರೆ" ಎಂದಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+