ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿಯ ಮುಂದಿನ ರಾಷ್ಟ್ರಾಧ್ಯಕ್ಷರು ಯಾರು? ಜೂನ್ 13 ರಂದು ನಿರ್ಧಾರ?

|
Google Oneindia Kannada News

ನವದೆಹಲಿ, ಜೂನ್ 10: ಬಿಜೆಪಿ ರಾಜ್ಯಾಧ್ಯಕ್ಷ ಅಮಿತ್ ಶಾ ಅವರು ಗೃಹಸಚಿವರಾಗಿ ಅಧಿಕಾರ ವಹಿಸಿಕೊಂಡ ಮೇಲೆ ಬಿಜೆಪಿಯ ಮುಂದಿನ ಅಧ್ಯಕ್ಷರು ಯಾರು ಎಂಬ ಪ್ರಶ್ನೆ ಎದ್ದಿದೆ.

ಜೂನ್ 13 ರಂದು ಬಿಜೆಪಿ ಉನ್ನತ ಸಮಿತಿ ಸಭೆ ನಡೆಯಲಿದ್ದು, ಅಂದು ಬಿಜೆಪಿಯ ನೂತನ ರಾಷ್ಟ್ರಾಧ್ಯಕ್ಷರನ್ನೂ ಆರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ರಾಷ್ಟ್ರಾಧ್ಯಕ್ಷ ಸ್ಥಾನ ಬದಲಾವಣೆ: ಅಮಿತ್ ಶಾ ನಂತರ ಯಾರು?ಬಿಜೆಪಿ ರಾಷ್ಟ್ರಾಧ್ಯಕ್ಷ ಸ್ಥಾನ ಬದಲಾವಣೆ: ಅಮಿತ್ ಶಾ ನಂತರ ಯಾರು?

ಆದರೆ ಬಿಜೆಪಿಯ ಕೆಲವು ಮೂಲಗಳ ಪ್ರಕಾರ ಅಮಿತ್ ಶಾ ಅವರನ್ನು ಅಧ್ಯಕ್ಷ ಸ್ಥಾನದಿಂದ ಬದಲಾವಣೆ ಮಾಡುವ ಸಾಧ್ಯತೆಗಳು ಕಡಿಮೆ. ಬದಲಾಗಿ ಅವರನ್ನೇ ಅಧ್ಯಕ್ಷರನ್ನಾಗಿ ಮುಂದುವರಿಸಿ, ಕಾರ್ಯಾಧ್ಯಕ್ಷ ಸ್ಥಾನದಲ್ಲಿ ಮತ್ತೊಬ್ಬರನ್ನು ಕೂರಿಸುವ ಬಗ್ಗೆ ಬಿಜೆಪಿ ಚಿಂತನೆ ನಡೆಸುತ್ತಿದೆ ಎನ್ನಲಾಗುತ್ತಿದೆ.

BJP to decide on new party chief on June 13th high level meeting

ಲೋಕ ಫಲಿತಾಂಶದ ಬಳಿಕ ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬದಲಾವಣೆ? ಲೋಕ ಫಲಿತಾಂಶದ ಬಳಿಕ ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬದಲಾವಣೆ?

ಬಿಜೆಪಿ 2014 ಮತ್ತು 2019 ರಲ್ಲಿ ಲೋಕಸಭಾ ಚುನಾವಣೆಯಲ್ಲಿ ಅತ್ಯುತ್ತಮ ಪ್ರದರ್ಶನ ತೋರುವಲ್ಲಿ ಅಧ್ಯಕ್ಷ ಅಮಿತ್ ಶಾ ಅವರ ಕಾರ್ಯತಂತ್ರ ಕೆಲಸ ಮಾಡಿದೆ. ಪಕ್ಷದಲ್ಲಿ ಸಾಕಷ್ಟು ಹಿಡಿತ ಸಾಧಿಸಿರುವ ಅವರ ಸ್ಥಾನಕ್ಕೆ ಸೂಕ್ತವಾಗುವಂಥ ವ್ಯಕ್ತಿಯ ಹುಡುಕಾಟದಲ್ಲಿ ಬಿಜೆಪಿ ಇದೆಯಾದರೂ, ಸದ್ಯಕ್ಕೆ ಅವರನ್ನೇ ಆ ಸ್ಥಾನದಲ್ಲಿ ಮುಂದುವರಿಸುವುದೇ ಹೆಚ್ಚು ಸೂಕ್ತ ಎಂದು ಬಿಜೆಪಿ ಚಿಂತಿಸುತ್ತಿದೆ ಎನ್ನಲಾಗಿದೆ. ಕಾರ್ಯಾಧ್ಯಕ್ಷ ಸ್ಥಾನಕ್ಕೆ ಜೆಪಿ ನಡ್ಡಾ ಅವರ ಹೆಸರು ಕೇಳಿಬರುತ್ತಿದೆ.

English summary
After Amit Shah takes charge as union home minister now BJP might be elect its new president on June 13 in huge level meeting.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X