ಪಂಚರಾಜ್ಯ ಚುನಾವಣೆ; ಬಿಜೆಪಿ ಉನ್ನತ ನಾಯಕರ ಸಭೆ
ನವದೆಹಲಿ, ಜೂನ್ 26: ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆ ಸಂಬಂಧ ಶನಿವಾರ ಪಕ್ಷದ ಮುಖಂಡರು ಹಾಗೂ ಕೇಂದ್ರ ಸಚಿವರು ದೆಹಲಿಯಲ್ಲಿ ಸಭೆ ನಡೆಸಿದ್ದಾರೆ.
ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಸಿದ್ಧತೆಗಳ ಕುರಿತು ಚರ್ಚೆ ನಡೆದಿರುವುದಾಗಿ ಮೂಲಗಳು ತಿಳಿಸಿವೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ನಿರ್ಮಲಾ ಸೀತಾರಾಮನ್, ನರೇಂದ್ರ ಸಿಂಗ್ ತೋಮರ್, ಸ್ಮೃತಿ ಇರಾನಿ ಮತ್ತ ಕಿರಣ್ ರಿಜಿಜು ಅವರು ಸಭೆಯಲ್ಲಿ ಭಾಗವಹಿಸಿದ್ದಾಗಿ ಪಕ್ಷದ ಮೂಲಗಳು ತಿಳಿಸಿವೆ.

ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಮತ್ತು ಗೋವಾ ರಾಜ್ಯಗಳ ವಿಧಾನಸಭಾ ಚುನಾವಣೆಯ ಸಿದ್ಧತೆ ವಿಷಯ ಈ ಸಭೆಯ ಮುಖ್ಯ ಕಾರ್ಯಸೂಚಿ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.
ಪಂಜಾಬ್ ಬಿಟ್ಟು ಬೇರೆಲ್ಲಾ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಮುಂದೆ ನಡೆಯುವ ಚುನಾವಣೆಗಳಲ್ಲಿ ಪಕ್ಷ ಜಯ ಗಳಿಸುವ ಉದ್ದೇಶದೊಂದಿಗೆ ಹಿರಿಯ ನಾಯಕರು ಸರಣಿ ಸಭೆಗಳನ್ನು ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.












Click it and Unblock the Notifications