ಬಿಜೆಪಿ ಸಂಸದರಿಗೆ ಶಿಸ್ತಿನ ಪಾಠ: ಕಾರ್ಯಾಗಾರಕ್ಕೆ ಹಾಜರಿ ಕಡ್ಡಾಯ
ನವದೆಹಲಿ, ಆಗಸ್ಟ್ 3: ಬಿಜೆಪಿ ತನ್ನ ಸಂಸದರಿಗೆ ಎರಡು ದಿನಗಳ ಕಾಲ ಕಾರ್ಯಾಗಾರ ನಡೆಸುತ್ತಿದೆ. ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಈ ಕಾರ್ಯಾಗಾರ ಆರಂಭವಾಗಿದ್ದು, ಎರಡೂ ದಿನ ಇದರಲ್ಲಿ ಭಾಗವಹಿಸುವುದು ಕಡ್ಡಾಯವಾಗಿದೆ.
ಈ ಕಾರ್ಯಾಗಾರದೊಳಗೆ ಮಾಧ್ಯಮ ಸೇರಿದಂತೆ ಇತರರಿಗೆ ಪ್ರವೇಶವಿಲ್ಲ. ಸದನ ಮತ್ತು ಹೊರಭಾಗದಲ್ಲಿ ನಡವಳಿಕೆಗಳು, ಸಂಸದೀಯ ಪ್ರಕ್ರಿಯೆಗಳು ಮತ್ತು ಸೈದ್ಧಾಂತಿಕ ಸಂಗತಿಗಳ ಕುರಿತು ಮುಚ್ಚಿದ ಬಾಗಿಲಿನಲ್ಲಿ ವಿವಿಧ ಉಪನ್ಯಾಸ, ತರಬೇತಿಗಳು ನಡೆಯಲಿವೆ.
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಪಕ್ಷದ ಕಾರ್ಯಾಧ್ಯಕ್ಷ ಜೆಪಿ ನಡ್ಡಾ ಈ ಕಾರ್ಯಕ್ರಮದ ನೇತೃತ್ವ ವಹಿಸಿದ್ದಾರೆ.

ಜೆಪಿ ನಡ್ಡಾ ಅವರು ಉದ್ಘಾಟನಾ ಭಾಷಣ ಮಾಡಲಿದ್ದಾರೆ. ಸಂಜೆ ಅಮಿತ್ ಶಾ ಅವರು ಸಂಸತ್‌ನಲ್ಲಿ ಸಂಸದರ ಕರ್ತವ್ಯದ ಕುರಿತು ಮಾತನಾಡಲಿದ್ದಾರೆ. ಬಿಜೆಪಿ ಸಂಸದರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾನುವಾರ ಮಾತನಾಡಲಿದ್ದಾರೆ.
ಬಿಜೆಪಿ 'ಅಭ್ಯಾಸ ವರ್ಗ' ಎಂದು ಕರೆಯಲಾಗುವ ಕಾರ್ಯಕ್ರಮದ ಫೋಟೊಗಳನ್ನು ತೆಗೆಯಲು ಮಾತ್ರ ಮಾಧ್ಯಮದವರಿಗೆ ಅವಕಾಶ ನೀಡಲಾಗುತ್ತದೆ.
ಕೆಲವು ಸಂಸದರು ಸಂಸತ್‌ನ ಒಳಗೆ ಮತ್ತು ಹೊರಗೆ ತಪ್ಪುಗಳನ್ನು ಎಸಗುವುದು, ವಿಪರೀತ ಹೇಳಿಕೆಗಳನ್ನು ನೀಡುವ ಮೂಲಕ ವಿವಾದ ಸೃಷ್ಟಿಸುವ ಘಟನೆಗಳನ್ನು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕಡ್ಡಾಯ ಕಾರ್ಯಾಗಾರವನ್ನು ಆಯೋಜಿಸಲಾಗುತ್ತಿದೆ.
ಎರಡನೆಯ ಅವಧಿಗೆ ಅಧಿಕಾರಕ್ಕೆ ಬಂದ ಸಂದರ್ಭದಿಂದಲೂ ಪ್ರಧಾನಿ ಮೋದಿ ಅವರು ಸಂಸದರ ಶಿಸ್ತು, ಸಮಯಪರಿಪಾಲನೆ ಮತ್ತು ಸರ್ಕಾರಕ್ಕೆ ಮುಜುಗರವಾಗುವ ರೀತಿಯಲ್ಲಿ ಮನಸಿಗೆ ಬಂದಂತೆ ಹೇಳಿಕೆಗಳನ್ನು ನೀಡುವುದರ ನಿಯಂತ್ರಣದ ಕುರಿತು ನಿರತರವಾಗಿ ಸೂಚನೆಗಳನ್ನು ನೀಡುತ್ತಿದ್ದಾರೆ. ಸಂಸತ್ ಹಾಗೂ ಪಕ್ಷದ ಸಭೆಗಳಲ್ಲಿ ಸಮಯಕ್ಕೆ ಸರಿಯಾಗಿ ಹಾಗೂ ಕಡ್ಡಾಯವಾಗಿ ಹಾಜರಾಗಬೇಕು ಎಂದು ಅವರು ನಿರ್ದೇಶಿಸಿದ್ದಾರೆ.
'ಈ ಬಾರಿ ಹೆಚ್ಚಿನ ಸಂಸದರು ಮೊದಲ ಬಾರಿಗೆ ಆಯ್ಕೆಯಾಗಿದ್ದಾರೆ. ಅಲ್ಲದೆ, ಬೇರೆ ರಾಜಕೀಯ ಪಕ್ಷದಿಂದ ಬಿಜೆಪಿ ಸೇರಿಕೊಂಡವರೂ ಇದ್ದಾರೆ. ಈ ರೀತಿಯ ಕಾರ್ಯಾಗಾರಗಳು ಪಕ್ಷದ ನೀತಿ ನಿಯಮಗಳ ಕುರಿತು ಅವರಿಗೆ ಪರಿಚಯ ಮಾಡಿಸುವುದು ಮಾತ್ರವಲ್ಲದೆ, ಪಕ್ಷವು ಅವರಿಂದ ಏನನ್ನು ನಿರೀಕ್ಷಿಸುತ್ತದೆ ಎಂಬುದನ್ನೂ ಮನದಟ್ಟು ಮಾಡುತ್ತದೆ' ಎಂದು ಬಿಜೆಪಿಯ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ












Click it and Unblock the Notifications