ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಹುಲ್ ಪ್ರಚಾರ ನಿರ್ಬಂಧಕ್ಕೆ ಚುನಾವಣಾ ಆಯೋಗಕ್ಕೆ ಬಿಜೆಪಿ ಮನವಿ

|
Google Oneindia Kannada News

ನವದೆಹಲಿ, ಏ.17: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಚುನಾವಣಾ ಪ್ರಚಾರದಿಂದ ನಿರ್ಗಮಿಸಬೇಕು ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ಮನವಿ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ರಫೇಲ್ ಯುದ್ಧ ವಿಮಾನ ಖರೀದಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಹಾಗೂ ಸಿಎಜಿ ಕ್ಲೀನ್ ಚಿಟ್ ಹೊರತಾಗಿಯೂ ರಾಹುಲ್ ಅನಾವಶ್ಯಕ ಆರೋಪಗಳನ್ನು ಹೊರಿಸುತ್ತಿದ್ದಾರೆ. ಚೌಕಿದಾರ್ ಚೋರ್‌ ಹೈ ಎನ್ನುವ ಮೂಲಕ ಅವಮಾನಿಸುತ್ತಿದ್ದಾರೆ.

BJP wants Rahul Gandhi campaign ban

ಈ ಹಿನ್ನೆಲೆಯಲ್ಲಿ ಮುಂದಿನ ಚುನಾವಣಾ ಪ್ರಚಾರದಿಂದ ರಾಹುಲ್ ಗಾಂಧಿಯನ್ನು ನಿರ್ಬಂಧಿಸಿ ಭಾರಿ ಪ್ರಮಾಣದ ದಂಡ ವಿಧಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ಈ ಕುರಿತು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಅವರನ್ನು ಬಿಜೆಪಿ ನಿಯೋಗ ಭೇಟಿ ಮಾಡಿದೆ, ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ನೇತೃತ್ವದಲ್ಲಿ ಬಿಜೆಪಿ ನಿಯೋಗ ತೆರಳಿತ್ತು.

ಎರಡನೇ ಹಂತದ ಚುನಾವಣೆ ಏಪ್ರಿಲ್‌ 18ರಂದು ನಡೆಯಲಿದೆ. 3ನೇ ಹಂತದ ಚುನಾವಣೆ ಏಪ್ರಿಲ್ 23ರಂದು ನಡೆಯಲಿದೆ. 4ನೇ ಹಂತ 29 ಏಪ್ರಿಲ್, 5ನೇ ಹಂತ ಮೇ6ರಂದು, ಮೇ 12ಕ್ಕೆ 6ನೇ ಹಂತ, 7ನೇ ಹಂತದ ಚುನಾವಣೆ ಮೇ 19ರಂದು ನಡೆಯಲಿದೆ. ಮೇ 23ರಂದು ಫಲಿತಾಂಶ ಹೊರಬೀಳಲಿದೆ.

English summary
BJP leaders lodge a complaint to election commission regarding Rahul Gandhi Campaign ban.They urge the commission to take action on Ragul Gandhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X