ಈ ಬಾರಿ ಬಿಜೆಪಿ 2014 ಕ್ಕಿಂತ ಕಡಿಮೆ ಸ್ಥಾನ ಗೆಲ್ಲಲಿದೆ ಎಂದ ಕೇಂದ್ರ ಸಚಿವ

ನವದೆಹಲಿ, ಮೇ 14: ಬಿಜೆಪಿ 2014 ರ ಲೋಕಸಭೆ ಚುನಾವಣೆಯಲ್ಲಿ ಗೆದ್ದಿದ್ದಕ್ಕಿಂತ ಕಡಿಮೆ ಕ್ಷೇತ್ರಗಳಲ್ಲಿಈ ಬಾರಿ ಗೆಲುವು ಸಾಧಿಸಲಿದೆ ಎಂದು ಕೇಂದ್ರ ಸಚಿವ ರಾಮದಾಸ್ ಅಠಾವಳೆ ಹೇಳಿದ್ದಾರೆ.

ಮಹಾರಾಷ್ಟ್ರದ ದಲಿತ ಮುಖಂಡ, ಭಾರತೀಯ ರಿಪಬ್ಲಿಕನ್ ಪಕ್ಷದ ಮುಖಂಡ ಅಠಾವಳೆ 2019 ರ ಲೋಕಸಭೆ ಚುನಾವಣೆಯ ಫಲಿತಾಂಶದ ಕುರಿತು ಭವಿಷ್ಯ ನುಡಿದಿದ್ದಾರೆ.

ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಕೂಟ 2014 ರ ಲೋಕಸಭೆ ಚುನಾವಣೆಯಲ್ಲಿ 42(48)ಕ್ಷೇತ್ರಗಳಲ್ಲಿ ಜಯಗಳಿಸಿತ್ತು. ಆದರೆ ಈ ಬಾರಿ ಅದಕ್ಕಿಂತ ಕಡಿಮೆ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದು, ಕಳೆದ ವರ್ಷ ಗೆದ್ದಿದ್ದ ಐದು ಸ್ಥಾನಗಳಲ್ಲಿ ಈ ಬಾರಿ ಸೋಲು ಕಾಣಲಿದೆ ಎಂದಿದ್ದಾರೆ. ಇನ್ನು ಅತ್ಯಧಿಕ ಲೋಕಸಭೆ ಕ್ಷೇತ್ರಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲೂ ಬಿಜೆಪಿ ಕಡಿಮೆ ಸ್ಥಾನ ಪಡೆಯಲಿದೆ. ಇಲ್ಲಿ ಬಿಎಸಿ-ಎಸ್ಪಿ ಮತ್ತು ರಾಷ್ಟ್ರೀಯ ಲೋಕದಳ ಪಕ್ಷಗಳು ಮೈತ್ರಿ ಮಾಡಿಕೊಂಡಿರುವುದರಿಂದ ಬಿಜೆಪಿಗೆ ನಷ್ಟವಾಗಲಿದೆ ಎಂದು ಅವರು ಹೇಳಿದ್ದಾರೆ.

BJP will win lesser seats in 2019 than 2014: Ramdas Athawale

ಇತ್ತೀಚೆಗಷ್ಟೇ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ಬಿಜೆಪಿ ಮುಖಂಡ ರಾಮ್ ಮಾಧವ್ ಸಹ ಬಿಜೆಪಿ ಈ ಬಾರಿ ಬಹುಮತ ಪಡೆಯುವುದು ಅನುಮಾನ. ಆದರೆ ಎನ್ ಡಿಎ ಮೈತ್ರಿಕೂಟದೊಂದಿಗೆ ಸೇರಿ ಬಿಜೆಪಿ ಬಹುಮತಗಳಿಸಿ, ಆಡಳಿತ ನಡೆಸಲಿದೆ ಎಂದಿದ್ದನ್ನು ಇಲ್ಲಿ ಸ್ಮರಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+