ಬಿಜೆಪಿ ಕಾರ್ಯಾಧ್ಯಕ್ಷ ಜೆ.ಪಿ. ನಡ್ಡಾಗೆ ಝಡ್ ಶ್ರೇಣಿ ಭದ್ರತೆ

ನವದೆಹಲಿ, ಅಕ್ಟೋಬರ್ 11: ಬಿಜೆಪಿ ಕಾರ್ಯಾಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಝಡ್ ಶ್ರೇಣಿ ಭದ್ರತೆ ಒದಗಿಸಲಾಗಿದೆ. ಕೇಂದ್ರ ಮೀಸಲು ಪೊಲೀಸ್ ಪಡೆ(ಸಿಆರ್ ಪಿಎಫ್) ಕಮಾಂಡೋಗಳು ಅವರಿಗೆ 24 X7 ರಕ್ಷಣೆ ಒದಗಿಸಲಿದ್ದಾರೆ ಎಂದು ಕೇಂದ್ರ ಸರ್ಕಾರ ಪ್ರಕಟಿಸಿದೆ.

ನಡ್ಡಾ ಅವರಿಗೆ ಜೀವ ಬೆದರಿಕೆ ಇರುವ ಬಗ್ಗೆ ಮಾಹಿತಿ ಬಂದ ಬಳಿಕ ಅವರಿಗೆ ಸೂಕ್ತ ಭದ್ರತೆ ಒದಗಿಸಲು ಕೇಂದ್ರ ಗೃಹ ಸಚಿವಾಲಯದ ಉನ್ನತ ಮಟ್ಟದ ಸಭೆಯಲ್ಲಿ ನಿರ್ಧರಿಸಲಾಯಿತು. ನಾಲ್ಕು ತಿಂಗಳ ಹಿಂದೆ ಆಡಳಿತ ಪಕ್ಷದ ಕಾರ್ಯಕಾರಿ ಜವಾಬ್ದಾರಿಯನ್ನು ನಡ್ಡಾ ವಹಿಸಿಕೊಂಡಿದ್ದಾರೆ.

ಒಟ್ಟಾರೆ 35 ಮಂದಿ ಸಿ ಆರ್ ಪಿಎಫ್ ಕಮಾಂಡೊಗಳು ನಡ್ಡಾ ಅವರಿಗೆ ರಕ್ಷಣೆ ಒದಗಿಸಲಿದ್ದಾರೆ, ವಿವಿಧ ಪಾಳೆಯದಲ್ಲಿ ಕಾರ್ಯ ನಿರ್ವಹಿಸಲಿದ್ದು, ಪ್ರತಿ ಬಾರಿ 8 ರಿಂದ 9 ಮಂದಿ ಅವರನ್ನು ಸುತ್ತುವರೆದು ಭದ್ರತಾ ಲೋಪವಾಗದಂತೆ ನೋಡಿಕೊಳ್ಳಲಿದ್ದಾರೆ.

BJP working president JP Nadda given Z category security

ದೇಶದ ಯಾವುದೇ ಭಾಗದಲ್ಲಿ ಪ್ರವಾಸ ಕೈಗೊಂಡರೂ ಕಮಾಂಡೋಗಳ ಭದ್ರತೆ ಇರಲಿದೆ. ಇದಲ್ಲದೆ, ಸಿಆರ್ ಪಿಎಫ್ ಸಿಬ್ಬಂದಿಗಳು ನಡ್ಡಾ ಅವರ ಮನೆ ಕಾವಲು ವ್ಯವಸ್ಥೆ ನೋಡಿಕೊಳ್ಳಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+