ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೀಪಿಕಾ ಪಡುಕೋಣೆ ಸಿನಿಮಾಗಳಿಗೆ ಬಿಜೆಪಿ ಬಹಿಷ್ಕಾರ, ಯಾಕೆ ಗೊತ್ತಾ?

|
Google Oneindia Kannada News

Recommended Video

JNU ವಿದ್ಯಾರ್ಥಿಗಳ ಪ್ರತಿಭಟನೆಗೆ ದೀಪಿಕಾ ಬೆಂಬಲ | DEEPIKA PADUKONE | JNU | PROTEST | ONEINDIA KANNADA

ದೆಹಲಿ, ಜನವರಿ.07: ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರಕ್ಕೆ ದೇಶಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಪೊಲೀಸರು ನಡೆಸಿದ ಲಾಠಿಪ್ರಹಾರ ಹಾಗೂ ದುಷ್ಕರ್ಮಿಗಳು ನಡೆಸಿದ ಕೃತ್ಯವನ್ನು ವಿರೋಧಿಸಿ ಪ್ರತಿಭಟನೆ ಮುಂದುವರಿದಿದೆ.

ದೆಹಲಿಯಲ್ಲಿ ಜೆಎನ್ ಯು ವಿದ್ಯಾರ್ಥಿಗಳು ಹಾಗೂ ಕೆಲವು ವಿದ್ಯಾರ್ಥಿ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಗೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಕೈ ಜೋಡಿಸಿದ್ದಾರೆ. ವಿದ್ಯಾರ್ಥಿಗಳ ಮೇಲೆ ನಡೆದ ದೌರ್ಜನ್ಯಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಜೆಎನ್‌ಯು ಹಿಂಸಾಚಾರ: ಭಯದಲ್ಲಿ ಕ್ಯಾಂಪಸ್ ತೊರೆದ ವಿದ್ಯಾರ್ಥಿನಿಯರುಜೆಎನ್‌ಯು ಹಿಂಸಾಚಾರ: ಭಯದಲ್ಲಿ ಕ್ಯಾಂಪಸ್ ತೊರೆದ ವಿದ್ಯಾರ್ಥಿನಿಯರು

ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದ ಸಬರ್ ಮತಿ ಬಳಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ನಟಿ ದೀಪಿಕಾ ಪಡುಕೋಣೆ ಕೂಡಾ ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಿದ್ದಾರೆ. ಪೊಲೀಸರು ನಡೆಸಿದ ಲಾಠಿಚಾರ್ಜ್ ಗೆ ವಿರೋಧ ವ್ಯಕ್ತಪಡಿಸಿದ್ದು, ಹಿಂಸಾಚಾರ ನಡೆಸಿದ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Bollywood Actor Deepika Padukone Joints Hands With JNU Protest

ದೀಪಿಕಾ ಪಡುಕೋಣೆ ಚಿತ್ರಗಳಿಗೆ ಬಿಜೆಪಿ ಬಹಿಷ್ಕಾರ:

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಜೆಎನ್ ಯು ವಿದ್ಯಾರ್ಥಿಗಳ ಮೇಲೆ ನಡೆದ ಹಿಂಸಾಚಾರವನ್ನು ವಿರೋಧಿಸಿ ಪ್ರತಿಭಟನೆಯಲ್ಲಿ ಭಾಗಿಯಾದರು. ಇದರಿಂದ ಬಿಜೆಪಿ ನಾಯಕರು ಕೆರಳಿದ್ದಾರೆ. ಬಾಲಿವುಡ್ ನಟಿಯ ಚಿತ್ರಗಳನ್ನು ಬಹಿಷ್ಕರಿಸಲು ತೀರ್ಮಾನಿಸಲಾಗಿದೆ.

ವಿದ್ಯಾರ್ಥಿಗಳ ಹೋರಾಟಕ್ಕೆ ಹಿರಿಯ ನಾಯಕರ ಬೆಂಬಲ:

ದೆಹಲಿಯ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರಕ್ಕೆ ರಾಜಕೀಯ ಚಿಂತಕರೆಲ್ಲ ಕೆಂಡಾಮಂಡಲರಾಗಿದ್ದಾರೆ. ದೀಪಿಕಾ ಪಡುಕೋಣೆ ಅಷ್ಟೇ ಅಲ್ಲದೇ, ಸಿಪಿಐ(ಎಂ) ಮುಖಂಡ ಸೀತಾರಾಮ್ ಯೆಚೂರಿ ಕೂಡಾ ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.

ಕಳೆದ ಜನವರಿ.05ರಂದು ಜೆಎನ್ ಯುನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಮೂವರ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ. ಹಿಂಸಾಚಾರ ನಡೆಸಿದ ದುಷ್ಕರ್ಮಿಗಳ ಗುರುತು ಪತ್ತೆಗೆ ದೆಹಲಿ ಪೊಲೀಸರು ಮೂರು ತಂಡಗಳನ್ನು ರಚಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

English summary
Delhi JNU Protest: Bollywood Actor Deepika Padukone Joints Hands With Students Protest In Sabarmati Point.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X