ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking News: ರಾಜ್ಯಸಭೆಯಿಂದ ಟಿಎಂಸಿ ಸಂಸದ ಸಂತಾನು ಸೇನ್ ಅಮಾನತು

|
Google Oneindia Kannada News

ನವದೆಹಲಿ, ಜುಲೈ 22: ರಾಜ್ಯಸಭೆಯ ತೃಣಮೂಲ ಕಾಂಗ್ರೆಸ್ ಪಕ್ಷದ ಸದಸ್ಯ ಸಂತಾನು ಸೇನ್ ರನ್ನು ಅಮಾನತುಗೊಳಿಸಲಾಗಿದೆ. ಆಗಸ್ಟ್ 13ರವರೆಗೂ ನಡೆಯಲಿರುವ ಮುಂಗಾರು ಅಧಿವೇಶನದಿಂದ ದೂರ ಇರುವಂತೆ ರಾಜ್ಯಸಭೆ ಸಭಾಪತಿ ವೆಂಕಯ್ಯ ನಾಯ್ಡು ಸೂಚನೆ ನೀಡಿದ್ದಾರೆ.

ಕಳೆದ ಗುರುವಾರ ರಾಜ್ಯಸಭೆಯಲ್ಲಿ ಇಸ್ರೇಲಿನ ಬೇಹುಗಾರಿಕೆ ತಂತ್ರಾಂಶ ಪೆಗಾಸಸ್ ಕುರಿತು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಉತ್ತರ ನೀಡುತ್ತಿದ್ದರು. ಈ ವೇಳೆ ಸಚಿವರ ಕೈಯಲ್ಲಿದ್ದ ಪತ್ರಗಳನ್ನು ಕಸಿದುಕೊಂಡ ಸಂಸದ ಸಂತಾನು ಸೇನ್ ಅದನ್ನು ಹರಿದು ಹಾಕಿದ್ದರು.

"ಸದನದಲ್ಲಿ ನಡೆದ ಘಟನೆಗಳ ಬಗ್ಗೆ ನನಗೆ ತುಂಬಾ ನೋವಾಗುತ್ತದೆ. ಕಲಾಪ ನಡೆಯುತ್ತಿರುವ ಸಂದರ್ಭದಲ್ಲಿ ಸಚಿವರ ಕೈಯಲ್ಲಿರುವ ಪತ್ರಗಳನ್ನು ಕಸಿದು ಹರಿದು ಹಾಕುವಷ್ಟು ಕೆಳಮಟ್ಟಕ್ಕೆ ಇಳಿದಿರುವುದು ದುರಾದೃಷ್ಟಕರ ಸಂಗತಿಯಾಗಿದೆ. ಇಂಥ ನಡುವಳಿಕೆಯು ಸಂಸದೀಯ ಪ್ರಜಾಪ್ರಭುತ್ವದ ಮೇಲಿನ ದಾಳಿ ಆಗಿರುತ್ತದೆ," ಎಂದು ರಾಜ್ಯಸಭೆ ಸಭಾಪತಿ ವೆಂಕಯ್ಯ ನಾಯ್ಡು ಹೇಳಿದ್ದಾರೆ.

Breaking News: TMC MP Santanu Sen Suspended From Rajya Sabha For This Entire Session

ಮಧ್ಯಾಹ್ನ 12.30ಕ್ಕೆ ಸಂಸತ್ ಕಲಾಪ ಮುಂದೂಡಿಕೆ:

ಟಿಎಂಸಿ ಸಂಸದ ದೆರೆಕ್ ಒಬ್ರಿಯನ್ ಗುರುವಾರದ ಘಟನೆ ಬಗ್ಗೆ ರಾಜ್ಯಸಭೆಯಲ್ಲಿ ಉಲ್ಲೇಖಿಸುತ್ತಿದ್ದಂತೆ ಗದ್ದಲ ಗಲಾಟೆ ಶುರುವಾಯಿತು. ಸಂತಾನು ಸೇನ್, ದಯವಿಟ್ಟು ಸದನದಿಂದ ಹೊರ ನಡೆದು, ಸುಗಮವಾಗಿ ಕಲಾಪ ನಡೆಸುವುದಕ್ಕೆ ಅವಕಾಶ ನೀಡಿ ಎಂದು ರಾಜ್ಯಸಭೆ ಸಭಾಪತಿಗಳು ಹೇಳಿದರು. ಮಧ್ಯಾಹ್ನ 12 ಗಂಟೆಗೆ ಸದನವನ್ನು ಮುಂದೂಡಲಾಯಿತು. ಇದರ ಬೆನ್ನಲ್ಲೇ ಮೇಲ್ಮನೆ ಕಲಾಪ ಆರಂಭವಾಗುತ್ತಿದ್ದಂತೆ ಉಪ ಸಭಾಪತಿ ಹರಿವಂಶ್ ಕೂಡಾ ಕಲಾಪದಿಂದ ಹೊರ ನಡೆಯುವಂತೆ ಟಿಎಂಸಿ ಸಂಸದ ಸಂತಾನು ಸೇನ್ ರಿಗೆ ಸೂಚನೆ ನೀಡಿದರು. ಗದ್ದಲ ಗಲಾಟೆ ಹೆಚ್ಚಾದ ಹಿನ್ನೆಲೆ ಮತ್ತೆ ಸದನವನ್ನು ಅರ್ಧಗಂಟೆಗಳ ಕಾಲ ಮುಂದೂಡಲಾಯಿತು.

English summary
Breaking News: TMC MP Santanu Sen Suspended From Rajya Sabha For This Entire Session. ಬ್
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X