• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ದರ ಏರಿಕೆ ಬೇಡ, ಪೆಟ್ರೋಲ್, ಡೀಸೆಲ್‌ನ್ನು ಜಿಎಸ್‌ಟಿಯಡಿ ತನ್ನಿ: ಕಾಂಗ್ರೆಸ್

|

ನವದೆಹಲಿ, ಜೂನ್ 15: ಪೆಟ್ರೋಲ್, ಡೀಸೆಲ್ ದರ ಏರಿಕೆ ಬೇಡ ಅವುಗಳನ್ನು ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ)ಯಡಿಗೆ ತನ್ನಿ ಎಂದು ಕಾಂಗ್ರೆಸ್ ಒತ್ತಾಯಿಸಿದೆ.

ಆಗಸ್ಟ್ 2004ರ ಮಟ್ಟಕ್ಕೆ ಪೆಟ್ರೋಲ್-ಡೀಸೆಲ್-ಅಡುಗೆ ಅನಿಲದ ದರವನ್ನು ಇಳಿಸಬೇಕೆಂದೂ ಸಹ ಕಾಂಗ್ರೆಸ್‍ ಆಗ್ರಹಿಸಿದೆ.

ಎಐಸಿಸಿ ಸಂವಹನ ವಿಭಾಗದ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ ಮಾತನಾಡಿ, ಮೋದಿ ಸರ್ಕಾರವು ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಸರ್ಕಾರ 2014ರ ಮೇ ತಿಂಗಳಿನಿಂದ ಅಬಕಾರಿ ಸುಂಕವನ್ನು 12 ಬಾರಿ ಹೆಚ್ಚಿಸಿದೆ. ಇಂಧನವನ್ನು ಜಿಎಸ್‍ಟಿ ವ್ಯಾಪ್ತಿಗೆ ತರುವವರೆಗೆ ದರ ಏರಿಕೆಯನ್ನು ನಿಲ್ಲಿಸಬೇಕು.

ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ)ಯಡಿಗೆ ಇಂಧನಗಳನ್ನೂ ತರುವಂತೆ ಕೇಂದ್ರಕ್ಕೆ ಒತ್ತಾಯಿಸಿರುವ ಕಾಂಗ್ರೆಸ್‍, ಕಚ್ಚಾ ತೈಲಗಳ ಅಗ್ಗದ ಲಾಭವನ್ನು ಜನರಿಗೆ ತಲುಪಿಸುವಂತೆ ಆಗ್ರಹಿಸಿದೆ.

ಲಾಕ್ಡೌನ್ ಹೊರೆ: 8 ದಿನಗಳಿಂದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ಭಾರತಕ್ಕೆ ಲೀಟರ್‌ಗೆ 20 ರೂ.ಗಿಂತ ಕಡಿಮೆ ಬೆಲೆಗೆ ಸಿಗುತ್ತಿರುವ ಪೆಟ್ರೋಲ್ ಅನ್ನು ಲೀಟರ್ ಗೆ 75.78 ರೂ. ಮತ್ತು ಡೀಸೆಲ್‌ ಅನ್ನು 74.03 ರೂ.ಗೆ ಏಕೆ ಮಾರಾಟ ಮಾಡಲಾಗುತ್ತಿದೆ ಎನ್ನುವುದಕ್ಕೆ ಮೋದಿ ಸರ್ಕಾರ ಉತ್ತರಿಸಲೇಬೇಕು.

ಕಚ್ಚಾ ತೈಲ ಬೆಲೆ ಬ್ಯಾರೆಲ್‌ಗೆ 40 ಡಾಲರ್‌ಗೆ ಇಳಿದರೂ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಹೆಚ್ಚಿನ ದರಕ್ಕೆ ಏಕೆ ಮಾರಾಟ ಮಾಡಲಾಗುತ್ತಿದೆ ಎಂದರು.

English summary
Amid a hike in prices of petrol and diesel for the eighth consecutive day, the Congress on Sunday demanded the government bring the fuels under the goods and services tax (GST) and also urged it to pass the benefit of lower crude prices to the people.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more