ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅನರ್ಹ ಶಾಸಕರ ಬಗ್ಗೆ ಯಡಿಯೂರಪ್ಪಗೆ ಅಮಿತ್ ಶಾ ಹೇಳಿದ್ದೇನು?

|
Google Oneindia Kannada News

Recommended Video

ಯಡಿಯೂರಪ್ಪಗೆ ತಲೆನೋವಾದ ಅಮಿತ್ ಶಾ ನಡೆ. | Amit Shah | Oneindia Kannada

ನವದೆಹಲಿ, ಸೆಪ್ಟೆಂಬರ್ 23: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭಾನುವಾರ ಭೇಟಿ ಮಾಡಿ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದರು.

ಸುಪ್ರೀಂಕೋರ್ಟ್ ತೀರ್ಪು ತೀರ್ಪು ನೋಡಿ ನಿರ್ಧರಿಸೋಣ ಎಂದು ಅಮಿತ್ ಶಾ ಹೇಳಿರುವುದಾಗಿ ಮಾಹಿತಿ ಲಭ್ಯವಾಗಿದೆ.

ಯಡಿಯೂರಪ್ಪ ದೆಹಲಿ ಭೇಟಿ ಕಾರಣ ಬಿಚ್ಚಿಟ್ಟ ಕುಮಾರಸ್ವಾಮಿ!ಯಡಿಯೂರಪ್ಪ ದೆಹಲಿ ಭೇಟಿ ಕಾರಣ ಬಿಚ್ಚಿಟ್ಟ ಕುಮಾರಸ್ವಾಮಿ!

ವಿಧಾನಸಭಾ ಉಪ ಚುನಾವಣೆ ದಿನಾಂಕ ಪ್ರಕಟವಾಗುತ್ತಿದ್ದಂತೆ ದೆಹಲಿಗೆ ಓಡಿದ್ದ ಬಿಎಸ್‌ವೈ ಅನರ್ಹ ಶಾಸಕರ ವಿಚಾರವಾಗಿಯೇ ಚರ್ಚಿಸಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ.

ಸುಪ್ರೀಂಕೋರ್ಟ್ ತೀರ್ಪು ನೋಡಿ ನಿರ್ಧರಿಸೋಣ

ಸುಪ್ರೀಂಕೋರ್ಟ್ ತೀರ್ಪು ನೋಡಿ ನಿರ್ಧರಿಸೋಣ

ಸೋಮವಾರ ಸುಪ್ರೀಂಕೋರ್ಟ್‌ನಲ್ಲಿ ಅನರ್ಹ ಶಾಸಕರ ಅರ್ಜಿಗೆ ಸಂಬಂಧಿಸಿದ ವಿಚಾರಣೆ ನೋಡಿ ಮುಂದಿನ ನಡೆ ತೀರ್ಮಾನಿಸೋಣ ಎಂದು ಯಡಿಯೂರಪ್ಪಗೆ ಶಾ ಹೇಳಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಯಡಿಯೂರಪ್ಪ ಜೊತೆಗೆ ಯಾರ್ಯಾರಿದ್ದರು

ಯಡಿಯೂರಪ್ಪ ಜೊತೆಗೆ ಯಾರ್ಯಾರಿದ್ದರು

ಯಡಿಯೂರಪ್ಪ ಅವರ ಜೊತೆ ಡಿಸಿಎಂಗಳಾದ ಅಶ್ವತ್ಥ ನಾರಾಯಣ, ಸವದಿ ಅನರ್ಹ ಶಾಸಕ ಜಾರಕಿಹೊಳಿ ಆಪ್ತ ಭರತ್ ಇದ್ದರು. ಬಿಜೆಪಿ ಸೇರಲು ಉತ್ಸುಕರಾಗಿರುವ 15 ಪದಚ್ಯುತ ಶಾಸಕರ ಸ್ಥಿತಿ ಅತಂತ್ರ . ಶಾ ಬಳಿ ಬಿಎಸ್‌ವೈ ಅಹವಾಲು ಸಲ್ಲಿಸಿದ್ದಾರೆ. ಅನರ್ಹತೆ ಬಗ್ಗೆ ಸುಪ್ರೀಂಕೋರ್ಟ್ ವಿಚಾರಣೆ ನೋಡಿಕೊಂಡು ನಿರ್ಧರಿಸೋಣ ಎಂದು ಶಾ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

Big Breaking: ಅನರ್ಹ ಶಾಸಕರು ಉಪ ಚುನಾವಣೆ ಸರ್ಧಿಸಲು ಅವಕಾಶವಿಲ್ಲBig Breaking: ಅನರ್ಹ ಶಾಸಕರು ಉಪ ಚುನಾವಣೆ ಸರ್ಧಿಸಲು ಅವಕಾಶವಿಲ್ಲ

ಕರ್ನಾಟಕದ 15 ಕ್ಷೇತ್ರಗಳಿಗೆ ಅಕ್ಟೋಬರ್ 21ರಂದು ಉಪ ಚುನಾವಣೆ

ಕರ್ನಾಟಕದ 15 ಕ್ಷೇತ್ರಗಳಿಗೆ ಅಕ್ಟೋಬರ್ 21ರಂದು ಉಪ ಚುನಾವಣೆ

ರಾಜ್ಯದ 17 ವಿಧಾನ ಸಭಾ ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಅಕ್ಟೋಬರ್ 21 ರಂದು ಉಪ ಚುನಾವಣೆ ನಡೆಯಲಿದ್ದು, ಈ ಎಲ್ಲಾ ಕ್ಷೇತ್ರಗಳಲ್ಲಿ ಸೆ.21ರಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಸಂಜೀವಕುಮಾರ್ ಕುಮಾರ್ ತಿಳಿಸಿದ್ದಾರೆ.

ಉಪಚುನಾವಣೆಯಲ್ಲಿ ಸ್ಪರ್ಧೆಗೆ ಅನರ್ಹ ಶಾಸಕರಿಗೆ ಅವಕಾಶವಿಲ್ಲ

ಉಪಚುನಾವಣೆಯಲ್ಲಿ ಸ್ಪರ್ಧೆಗೆ ಅನರ್ಹ ಶಾಸಕರಿಗೆ ಅವಕಾಶವಿಲ್ಲ

ಸ್ಪೀಕರ್ ಆದೇಶ ಈ ಚುನಾವಣೆಗೂ ಅನ್ವಯವಾಗುವ ಹಿನ್ನೆಲೆಯಲ್ಲಿ ಈ ಚುನಾವಣೆಯಲ್ಲಿ ಅನರ್ಹರ ಸ್ಪರ್ಧೆಗೆ ಅವಕಾಶವಿಲ್ಲ. ಶಾಸಕರನ್ನು ಅನರ್ಹಗೊಳಿಸುವ ಮುನ್ನವೇ ಮಸ್ಕಿ ಮತ್ತು ಆರ್ ಆರ್ ನಗರ ಪ್ರಕರಣ ಕೋರ್ಟಿನಲ್ಲಿತ್ತು. ಹಾಗಾಗಿ ಅಲ್ಲಿ ಚುನಾವಣೆ ನಡೆಯಲ್ಲ ಎಂದು ಸಂಜೀವ್ ಕುಮಾರ್ ಹೇಳಿದರು.

ಅಥಣಿ, ಕಾಗವಾಡ, ಗೋಕಾಕ, ಯಲ್ಲಾಪುರ, ಹಿರೇಕೆರೂರು, ರಾಣಿಬೆನ್ನೂರು, ವಿಜಯನಗರ, ಚಿಕ್ಕಬಳ್ಳಾಪುರ, ಕೆ ಆರ್ ಪುರ, ಯಶವಂತಪುರ, ಮಹಾಲಕ್ಷ್ಮಿಲೇಔಟ್, ಶಿವಾಜಿನಗರ, ಹೊಸಕೋಟೆ, ಕೃಷ್ಣರಾಜಪೇಟೆ, ಹುಣಸೂರಿನಲ್ಲಿ ಉಪ ಚುನಾವಣೆ ನಡೆಯಲಿದ್ದು, ಈ ಎಲ್ಲಾ ಕ್ಷೇತ್ರಗಳಲ್ಲಿ ಚುನಾವಣಾ ನೀತಿ ಸಂಹಿತೆ ಚಾಲನೆಗೆ ಬಂದಿದೆ ಎಂದರು.

English summary
BS Yediyuappa Meets Amit Shah Discussed About Disqualified MLA, Karnataka Chief Minister BS Yeddyurappa said that he was hopeful of a positive judgement, ahead of the Supreme Court hearing the rebel Congress-JDS MLAs' plea.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X