• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ವಿಜಯೇಂದ್ರ ಸೂಪರ್ ಸಿಎಂ ಆರೋಪಕ್ಕೆ ಯಡಿಯೂರಪ್ಪ ತಿರುಗೇಟು!

|

ಬೆಂಗಳೂರು, ಸೆ. 18: ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಗೊಂದಲ ಇರುವಾಗಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹೊಸ ಸವಾಲು ಎದುರಾಗಿದೆ. ತಮ್ಮ ಪುತ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಸರ್ಕಾರದಲ್ಲಿ ಅಸಮಾಧಾನ ವ್ಯಕ್ತವಾಗಿತ್ತು. ಜೊತೆಗೆ ವಿಜಯೇಂದ್ರ ಅವರ ಕುರಿತು ಅನಾಮಧೇಯ ಪತ್ರ ಕೂಡ ಹರಿದಾಡಿತ್ತು. ಇದೀಗ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೂ ಕೂಡ ವಿಜಯೇಂದ್ರ ಅವರನ್ನು ಸೂಪರ್ ಸಿಎಂ ಎಂದು ಆರೋಪಿಸಿದ್ದಾರೆ.

ದೆಹಲಿಯಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಪುತ್ರ ಬಿ ವೈ ವಿಜಯೇಂದ್ರ ಅವರನ್ನು ಸೂಪರ್ ಸಿಎಂ ಎಂದಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಆರೋಪವನ್ನು ತಳ್ಳಿ ಹಾಕಿದ್ದಾರೆ. ಬಿ.ವೈ. ವಿಜಯೇಂದ್ರ ಅವರು ಭಾರತೀಯ ಜನತಾ ಪಕ್ಷದ ರಾಜ್ಯ ಘಟಕದಲ್ಲಿ ಉಪಾಧ್ಯಕ್ಷರಾಗಿ ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸುವಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆಯೇ ಹೊರತು, ರಾಜ್ಯ ಸರ್ಕಾರದ ಯಾವುದೇ ಚಟುವಟಿಕೆಗಳಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಇದರೊಂದಿಗೆ ಪ್ರಧಾನಿ ಭೇಟಿಯ ಬಗ್ಗೆಯೂ ಯಡಿಯೂರಪ್ಪ ಅವರು ಮಾತನಾಡಿದರು, ರಾಜ್ಯದ ಅಭಿವೃದ್ಧಿ ಚಟುವಟಿಕೆಗಳ ಕುರಿತು ಚರ್ಚಿಸಲು ತಾವು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ಹಲವು ಸಚಿವರನ್ನು ಭೇಟಿ ಮಾಡುತ್ತಿರುವುದಾಗಿ ತಿಳಿಸಿದರು.

ಇದೇ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 120 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕರ್ನಾಟಕ ಭವನ-1 ಕಾವೇರಿ ಕಟ್ಟಡ ಪುನರ್‌ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಿದರು. ಎರಡು ತಳ ಮಹಡಿಗಳೂ, ನೆಲ ಮಹಡಿ ಹಾಗೂ ಆರು ಮಹಡಿ ಒಳಗೊಂಡಂತೆ ಒಟ್ಟು ಒಂಭತ್ತು ಮಹಡಿಗಳ ಈ ಕಟ್ಟಡವನ್ನು ರ್ಮಾಣಕ್ಕೆ ಮೆ. ಬಾಲಾಜಿ ಕೃಪಾ ಪ್ರಾಜೆಕ್ಟ್ಸ್‌ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ವಹಿಸಿದ್ದು, ಮುಂದಿನ 24 ತಿಂಗಳಲ್ಲಿ ಕಟ್ಟಡದ ಕಾಮಗಾರಿಗಳು ಪೂರ್ಣಗೊಳ್ಳಲಿವೆ ಎಂದರು.

ಊಹಾಪೋಹ ಬೇಡ: ಜೆಡಿಎಸ್ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹಾಗೂ ತಮ್ಮ ನಡುವಿನ ಇತ್ತೀಚಿನ ಭೇಟಿ ಕುರಿತು ಯಡಿಯೂರಪ್ಪ ಅವರು ಸ್ಪಷ್ಟನೆ ಕೊಟ್ಟಿದ್ದಾರೆ. ಕುಮಾರಸ್ವಾಮಿ ಅವರು ಪ್ರತಿಪಕ್ಷದ ನಾಯಕರಲ್ಲೊಬ್ಬರು. ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚಿಸಲು ಆಗಮಿಸಿದ್ದರು. ಇಂತಹ ವಿಷಯಗಳಲ್ಲಿ ಅನಗತ್ಯ ಊಹಾಪೋಹ ಬೇಡ ಎಂದು ಹೇಳಿದ್ದಾರೆ.

English summary
Speaking in Delhi, Chief Minister B.S. Yediyurappa said that B.Y. Vijayendra was working as the vice president of the state Bharatiya Janata Party (BJP), organizing the party in the state and not interfering with any activities of the state government. Yediyurappa has dismissed accusation of opposition leader Siddaramaiah as his son BY Vijayendra is Super CM.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X