• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

2019 ಬಜೆಟ್: 1.25 ಲಕ್ಷ ಕಿ.ಮೀ ಗ್ರಾಮೀಣ ರಸ್ತೆ ಅಭಿವೃದ್ಧಿ ಯೋಜನೆ

|

ನವದೆಹಲಿ, ಜುಲೈ 5: ಮೂರನೇ ಹಂತದ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ದೇಶದ 1.25 ಲಕ್ಷ ಕಿ.ಮೀ ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿ ಮಾಡಲಾಗುತ್ತದೆ ಎಂದು ಬಜೆಟ್‌ನಲ್ಲಿ ಘೋಷಿಸಲಾಗಿದೆ.

ಗ್ರಾಮೀಣ ರಸ್ತೆಯ ಅಭಿವೃದ್ಧಿಗಾಗಿ ಯೋಜನೆಯಡಿ 80,250 ಕೋಟಿ ಅನುದಾನ ನೀಡಲು ಕೇಂದ್ರ ಸರ್ಕಾರ ಸಿದ್ಧವಿದೆ.

ಕೇಂದ್ರ ಬಜೆಟ್ Liive Updates: ಈ ವರ್ಷದಲ್ಲಿ ದೇಶ ಬಯಲುಶೌಚ ಮುಕ್ತ

ಬಜೆಟ್ ಮಂಡನೆ ಮಾಡುವಾಗ ಕಳೆದ ನಾಲ್ಕು ವರ್ಷಗಳಲ್ಲಿ ರಸ್ತೆ ಅಭಿವೃದ್ಧಿಗಾಗಿ ಭಾರತ್‌ಮಾಲಾ, ಸಾಗರ್‌ಮಾಲಾ, ಉದಾನ್ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ತಿಳಿಸಿದರು. ಅಷ್ಟೇ ಅಲ್ಲದೆ ಒನ್ ನೇಷನ್ ಒನ್ ಕಾರ್ಡ್ ಕೂಡ ಶೀಘ್ರ ಜಾರಿಗೆ ತರಲಾಗುವುದು ಎಂದರು.

ಇನ್ನು ದೇಶಾದ್ಯಂತ 300 ಕಿ.ಮೀ ಮೆಟ್ರೋ ವಿಸ್ತರಣೆ ಮಾಡಲಾಗುತ್ತದೆ , ಎಲೆಕ್ಟ್ರಿಕ್ ವಾಹನಗಳು, ಸಬ್ ಅರ್ಬನ್ ರೈಲಿಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ. ಎಲೆಕ್ಟ್ರಿಕ್ ವಾಹನಗಳ ಖರೀದಿಗೆ 1.25 ಲಕ್ಷ ರೂ ಸಬ್ಸಿಡಿ ನೀಡಲಾಗುತ್ತದೆ ಹಾಗೂ ಶೇ.5 ರಷ್ಟು ಜಿಎಸ್‌ಟಿಯನ್ನು ಕಡಿಮೆ ಮಾಡುವುದಾಗಿಯೂ ತಿಳಿಸಿದರು.

2022ರ ಹೊತ್ತಿಗೆ ದೇಶದಲ್ಲಿ ಲಕ್ಷ ಕಿ.ಮೀ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಮಿಸಲಾಗುತ್ತದೆ. 2019ರ ಬಜೆಟ್ನಲ್ಲಿ 10 ಸಾವಿರ ಕಿ.ಮೀ ರಾಷ್ಟ್ರೀಯ ಹೆದ್ದಾರಿ ನಿರ್ಮಿಸಲಾಗುತ್ತದೆ. ಹಾಗೆಯೇ 295 ಪ್ರಮುಖ ಬ್ರಿಡ್ಜ್‌ಗಳನ್ನು ನಿರ್ಮಿಸಲಾಗುತ್ತದೆ.

English summary
Union budget 2019: The country will add 1.25 lakh kilometers of roads under PM Gram Sadak Yojana spending 80,250 crore.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X