• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಜೆಟ್ 2021; ಕೋವಿಡ್ ಪರೀಕ್ಷೆಗೆ ಒಳಗಾಗಲು ಸಂಸದರಿಗೆ ಕಟ್ಟುನಿಟ್ಟಿನ ಸೂಚನೆ

|

ನವದೆಹಲಿ, ಜನವರಿ 20: ಬಜೆಟ್ ಅಧಿವೇಶನ ಇನ್ನು ಕೆಲವೇ ದಿನಗಳಲ್ಲಿ ಆರಂಭಗೊಳ್ಳಲಿದ್ದು, ಅಧಿವೇಶನದಲ್ಲಿ ಪಾಲ್ಗೊಳ್ಳಲಿರುವ ಎಲ್ಲಾ ಸಂಸದರು ಕಡ್ಡಾಯವಾಗಿ ಕೊರೊನಾ ಪರೀಕ್ಷೆಗೆ ಒಳಪಡಬೇಕೆಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿಳಿಸಿದ್ದಾರೆ.

ಸಂಸದರಿಗೆ ಕೊರೊನಾ ಪರೀಕ್ಷೆ ನಡೆಸಲು ಎಲ್ಲಾ ವ್ಯವಸ್ಥೆ ಮಾಡಲಾಗಿದ್ದು, ಜನವರಿ 27ರಿಂದ ಸಂಸತ್ತಿನ ಆವರಣದಲ್ಲಿಯೇ ಕೊರೊನಾ ಪರೀಕ್ಷೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಬಜೆಟ್ ಅಧಿವೇಶನದಲ್ಲಿ ಭಾಗವಹಿಸಿದ್ದ ನಾಲ್ವರು ಶಾಸಕರಿಗೆ ಕೊರೊನಾ ಸೋಂಕು

ಬಜೆಟ್ ಅಧಿವೇಶನಕ್ಕೆ ಸಂಬಂಧಿಸಿದಂತೆ ಮಂಗಳವಾರ ಸ್ಪೀಕರ್ ಓಂ ಬಿರ್ಲಾ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಸಭೆ ನಂತರ ಮಾತನಾಡಿದ ಅವರು, "ಬಜೆಟ್ ಅಧಿವೇಶನ ಆರಂಭಕ್ಕೂ ಮುನ್ನ ಎಲ್ಲಾ ಸಂಸದರು ಆರ್ ಟಿಪಿಸಿಆರ್ ಪರೀಕ್ಷೆಗೆ ಒಳಪಡಬೇಕಿದೆ. ಸಂಸತ್ತಿನ ಆವರಣದಲ್ಲಿ ಎರಡು ದಿನಗಳ ಕಾಲ ಪರೀಕ್ಷೆ ನಡೆಸಲಾಗುವುದು. ಜನವರಿ 29ರಿಂದ ಸಂಸತ್ತಿನ ಅಧಿವೇಶನ ಆರಂಭಗೊಳ್ಳುತ್ತಿದೆ. ಕೊರೊನಾ ಸೋಂಕು ಹರಡುವಿಕೆ ತಡೆಗೆ ಸಂಬಂಧಿಸಿದಂತೆ ಎಲ್ಲಾ ನಿಯಮಗಳನ್ನು ಪಾಲಿಸಲು ಸೂಚಿಸಲಾಗಿದೆ. ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಎಲ್ಲವೂ ಕಡ್ಡಾಯ ಎಂದು ತಿಳಿಸಿದರು.

ಸಂಸದರ ನಿವಾಸದ ಬಳಿಯೂ ಕೊರೊನಾ ಪರೀಕ್ಷೆ ನಡೆಸಲು ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು. ಸಂಸತ್ತಿನ ಬಜೆಟ್ ಅಧಿವೇಶನವು ಎರಡು ಭಾಗಗಳಲ್ಲಿ ನಡೆಯಲಿದೆ. ಜನವರಿ 29ರಿಂದ ಫೆಬ್ರುವರಿ 15ರವರೆಗೆ ಹಾಗೂ ಮಾರ್ಚ್ 8ರಿಂದ ಏಪ್ರಿಲ್ 8ರವರೆಗೆ ನಡೆಯಲಿದೆ.

English summary
All MPs requested to undergo Covid-19 test before the start of the Budget session from January 29,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X