Breaking: ದೆಹಲಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿತ; 8 ಜನರ ರಕ್ಷಣೆ
ನವದೆಹಲಿ, ಮಾರ್ಚ್ 14: ಸೋಮವಾರ ದೆಹಲಿಯಲ್ಲಿನ ಕಾಶ್ಮೀರ್ ಗೇಟ್ ಪ್ರದೇಶದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದಿದ್ದು, ಕಟ್ಟಡದಡಿಯಲ್ಲಿ ಸಿಲುಕಿದ್ದ ಎಂಟು ಕಾರ್ಮಿಕರನ್ನು ರಕ್ಷಿಸಲಾಗಿದೆ. ಇನ್ನೂ ಹಲವರು ಸಿಲುಕಿರುವ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೋಮವಾರ ಸಂಜೆ 5.24ಕ್ಕೆ ಘಟನೆಯ ಬಗ್ಗೆ ಮಾಹಿತಿ ಲಭಿಸಿದ್ದು, ಮೂರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದವು ಎಂದು ಅಗ್ನಿಶಾಮಕ ಇಲಾಖೆ ತಿಳಿಸಿದೆ.

ಪೊಲೀಸ್ ಉಪ ಆಯುಕ್ತ (ಉತ್ತರ) ಸಾಗರ್ ಸಿಂಗ್ ಕಲ್ಸಿ ಮಾತನಾಡಿ, "ನಿಕಲ್ಸನ್ ರಸ್ತೆ, ಕಾಶ್ಮೀರ್ ಗೇಟ್‌ನಲ್ಲಿ ಕಟ್ಟಡ ಕುಸಿತದ ಬಗ್ಗೆ ಮಾಹಿತಿ ಪಡೆಯಲಾಗಿದೆ. ಪೊಲೀಸರು, ಅಗ್ನಿಶಾಮಕ ದಳ ಮತ್ತು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ,'' ಎಂದು ಮಾಹಿತಿ ನೀಡಿದ್ದಾರೆ.

''ಇದುವರೆಗೆ ಸ್ಥಳದಲ್ಲಿದ್ದ ಎಂಟು ಮಂದಿ ಕಾರ್ಮಿಕರನ್ನು ರಕ್ಷಿಸಲಾಗಿದೆ,'' ಎಂದು ಸಾಗರ್ ಸಿಂಗ್ ಕಲ್ಸಿ ಹೇಳಿದ್ದು, ಮೂರ್ನಾಲ್ಕು ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನೂ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.












Click it and Unblock the Notifications