ಬಂಗಾಳಕೊಲ್ಲಿಯಲ್ಲಿ ಬುಲ್ ಬುಲ್ ಸೈಕ್ಲೋನ್, ಎಲ್ಲೆಲ್ಲಿ ಮಳೆಯಾಗುತ್ತೆ?

ನವದೆಹಲಿ, ನವೆಂಬರ್ 05: ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಭಾರತದ ವಾಯುವ್ಯ ಭಾಗದಲ್ಲಿ ಇನ್ನೆರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಭಾರತದ ಪೂರ್ವ ಭಾಗದಲ್ಲಿ ಕಾಣಿಸಿಕೊಳ್ಳಲಿರುವ ಸೈಕ್ಲೋನ್ ಗೆ ಬುಲ್ ಬುಲ್ ಎಂದು ಹೆಸರಿಡಲಾಗುತ್ತಿದೆ. ಇದು ಬಂಗಾಳಕೊಲ್ಲಿಯಲ್ಲಿ ಹುಟ್ಟುತ್ತಿರುವ ಈ ವರ್ಷದ ಮೂರನೇ ಸೈಕ್ಲೋನ್ ಆದರೆ, ಭಾರತಕ್ಕೆ ಅಪ್ಪಳಿಸುತ್ತಿರುವ ಏಳನೇ ಸೈಕ್ಲೋನ್ ಇದಾಗಿದೆ.

ಬಂಗಾಳಕೊಲ್ಲಿಯಲ್ಲಿ ಈ ಮೊದಲು ಪಡುಕ್ ಮತ್ತು ಫ್ಯಾನಿ ಚಂಡಮಾರುತಗಳು ಕಾಣಿಸಿಕೊಂಡಿದ್ದವು. ನವೆಂಬರ್ 8 ರಂದು ಬುಲ್ ಬುಲ್ ಚಂಡಮಾರುತದ ರುದ್ರನರ್ತನ ಆರಂಭವಾಗಲಿದ್ದು, ಮುಖ್ಯವಾಗಿ ಒಡಿಶಾಕ್ಕೆ ಈ ಚಂಡಮಾರುತ ಅಪ್ಪಳಿಸಲಿದೆ ಎನ್ನಲಾಗಿದೆ. ಜೊತೆಗೆ ಆಂಧ್ರಪ್ರದೇಶದ ಕರಾವಳಿ ಮತ್ತು ಪಶ್ಚಿಮ ಬಂಗಾಳದಲ್ಲೂ ಮಳೆಯಾಗುವ ಸಾಧ್ಯತೆ ಇದೆ. ಸೈಕ್ಲೋನ್ ಬಾಂಗ್ಲಾದೇಶವನ್ನೂ ವ್ಯಾಪಿಸಲಿದೆ.

Bulbul Cyclone To Hit Bay Of Bengal

ಬುಲ್ ಬುಲ್ ನಿಂದಾಗಿ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆಯಿದ್ದರೂ ಹಿಂದುಮಹಾಸಾಗರದಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ನವೆಂಬರ್ 8ರ ಬಳಿಕ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+