ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಪ ಚುನಾವಣೆ ಸ್ಟಾರ್ ಪ್ರಚಾರಕರ ಸಂಖ್ಯೆ ತಗ್ಗಿಸಿದ ಕೇಂದ್ರ ಆಯೋಗ

|
Google Oneindia Kannada News

ನವದೆಹಲಿ, ಅಕ್ಟೋಬರ್.10: ಬಿಹಾರ ವಿಧಾನಸಭಾ ಚುನಾವಣೆ ಸೇರಿದಂತೆ ಹಲವು ರಾಜ್ಯಗಳಲ್ಲಿ ಉಪ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಈಗಾಗಲೇ ದಿನಾಂಕ ಪ್ರಕಟಿಸಿದೆ. ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ಹಿನ್ನೆಲೆ ಸ್ಟಾರ್ ಪ್ರಚಾರಕರ ಸಂಖ್ಯೆಯನ್ನು ತಗ್ಗಿಸಿ ಹೊಸ ಮಾರ್ಗಸೂಚಿ ಹೊರಡಿಸಿದೆ.

ರಾಷ್ಟ್ರೀಯ ಪಕ್ಷಗಳ ಸ್ಟಾರ್ ಪ್ರಚಾರಕರ ಸಂಖ್ಯೆಯನ್ನು 40 ರಿಂದ 30ಕ್ಕೆ ಇಳಿಸಲಾಗಿದ್ದು, ಗುರುತಿಸಲಾಗದ ರಾಜಕೀಯ ಪಕ್ಷಗಳ ಸ್ಟಾರ್ ಪ್ರಚಾರಕರ ಸಂಖ್ಯೆಯನ್ನು 20ರಿಂದ 15ಕ್ಕೆ ತಗ್ಗಿಸಲಾಗಿದೆ. ಕೊವಿಡ್-19 ಭೀತಿ ಹಿನ್ನೆಲೆ ಬಿಹಾರದ 56 ವಿಧಾನಸಭಾ ಕ್ಷೇತ್ರ ಮತ್ತು ಒಂದು ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ಕಾಯ್ದಿರಿಸಲಾಗಿದೆ. ನವೆಂಬರ್.03ರಂದು 56 ವಿಧಾನಸಭೆ ಒಂದು ಲೋಕಸಭೆಗೆ ಮತದಾನ ನಡೆಯಲಿದೆ.

ಟಿಕೆಟ್ ರೇಸ್: ಮಾಜಿ ಕಾನ್ಸ್ ಟೇಬಲ್ ಮುಂದೆ ಸೋತ ಮಾಜಿ ಡಿಜಿಪಿ ಟಿಕೆಟ್ ರೇಸ್: ಮಾಜಿ ಕಾನ್ಸ್ ಟೇಬಲ್ ಮುಂದೆ ಸೋತ ಮಾಜಿ ಡಿಜಿಪಿ

ಛತ್ತೀಸಗಢ್, ಹರಿಯಾಣ, ತೆಲಂಗಾಣ 1, ಜಾರ್ಖಂಡ್, ಕರ್ನಾಟಕ, ನಾಗಾಲ್ಯಾಂಡ್, ಒಡಿಶಾ 2, ಉತ್ತರ ಪ್ರದೇಶ 7, ಗುಜರಾತ್ 8 ಮತ್ತು ಮಧ್ಯಪ್ರದೇಶದ 28 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್.03ರಂದು ಉಪ ಚುನಾವಣೆ ನಡೆಯಲಿದೆ. ಉಪ ಚುನಾವಣೆ ಫಲಿತಾಂಶವು ನವೆಂಬರ್.10ರಂದು ಹೊರ ಬೀಳಲಿದೆ. ಮಣಿಪುರದ ಎರಡು ವಿಧಾನಸಭಾ ಕ್ಷೇತ್ರಗಳ ಜೊತೆಗೆ ವಾಲ್ಮೀಕಿ ನಗರ ಲೋಕಸಭಾ ಕ್ಷೇತ್ರಕ್ಕೂ ನವೆಂಬರ್.07ರಂದೇ ಮತದಾನ ನಡೆಯಲಿದೆ.

By-Election: Elelction Commosion New Guiddlines For Political Parties Star Campaigners

ಸ್ಟಾರ್ ಪ್ರಚಾರಕರ ಪಟ್ಟಿ ಸಲ್ಲಿಕೆಗೆ 10 ದಿನ:

ಉಪ ಚುನಾವಣೆಗೆ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಅಂತಿಮಗೊಳಿಸಿ ಎಲ್ಲ ರಾಜ್ಯ ಚುನಾವಣಾ ಸಲ್ಲಿಸುವುದಕ್ಕೆ ರಾಜಕೀಯ ಪಕ್ಷಗಳಿಗೆ 10 ದಿನಗಳ ಗಡುವು ನೀಡಲಾಗಿದೆ. ಈ ಅವಧಿಯಲ್ಲಿ ಭಾರತದಲ್ಲಿ ಗುರುತಿಸಿದ ರಾಷ್ಟ್ರೀಯ ಪಕ್ಷಗಳಾಗ ಬಿಜೆಪಿ, ಕಾಂಗ್ರೆಸ್, ಟಿಎಂಸಿ, ಸಿಪಿಐ, ಸಿಪಿಐಎಂ, ಬಿಎಸ್ ಪಿ, ಎನ್ ಸಿಪಿ, ಮತ್ತು ಎನ್ ಪಿಪಿ ಪಕ್ಷಗಳು ತಮ್ಮ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಸಲ್ಲಿಸಲು ಸೂಚಿಸಲಾಗಿದೆ.

ಬಿಹಾರದಲ್ಲಿ ಮೂರು ಹಂತಗಳಲ್ಲಿ 243 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಅಕ್ಟೋಬರ್.28 ಮೊದಲ ಹಂತದ ಚುನಾವಣೆ, ನವೆಂಬರ್.03 ಎರಡನೇ ಹಂತದ ಚುನಾವಣೆ ಮತ್ತು ನವೆಂಬರ್.07ರಂದು ಮೂರನೇ ಹಂತದ ಚುನಾವಣೆ ನಡೆಯಲಿದೆ. ಖಾಲಿ ಆಗಿರುವ ವಾಲ್ಮೀಕಿ ನಗರ ಲೋಕಸಭಾ ಕ್ಷೇತ್ರಕ್ಕೂ ನವೆಂಬರ್.07ರಂದೇ ಮತದಾನ ನಡೆಯಲಿದೆ.

ಕೇಂದ್ರ ಗೃಹ ಸಚಿವಾಲಯದ ನಿಯಮದ ಪ್ರಕಾರ, ರಾಜಕೀಯ ಸಭೆ, ಸಮಾರಂಭಗಳಲ್ಲಿ 100 ಜನರು ಭಾಗವಹಿಸುವುದಕ್ಕೆ ಅನುಮತಿ ನೀಡಲಾಗಿದೆ. ಸಾರ್ವಜನಿಕ ಪ್ರದೇಶಗಳಲ್ಲಿ ಒಟ್ಟು ಸ್ಥಾನಗಳಲ ಶೇ.50ರಷ್ಟು ಜನ ಭಾಗವಹಿಸುವುದಕ್ಕಷ್ಟೇ ಅವಕಾಶ ಕಲ್ಪಿಸಿ ಕೊಡಲಾಗಿದ್ದು, ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಕೊವಿಡ್-19 ನಿಯಂತ್ರಣ ಕ್ರಮಗಳನ್ನು ಅನುಸರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

English summary
By-Election: Elelction Commosion New Guiddlines For Political Parties Star Campaigners.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X