ಪೌರತ್ವ ತಿದ್ದುಪಡಿ ಕಾಯ್ದೆಗೆ ರಾಷ್ಟ್ರಪತಿ ಅಂಕಿತ

Recommended Video

      Citizenship amendment bill is now officially a law | PRESIDENT | RAMNATH KOVIND | ONEINDIA KANNADA

      ನವದೆಹಲಿ,ಡಿಸೆಂಬರ್ 13: ಪೌರತ್ವ ತಿದ್ದುಪಡಿ ಕಾಯ್ದೆಗೆ ರಾಷ್ಟ್ರಪತಿ ಅಂಕಿತ ಬಿದ್ದಿದ್ದು ಕಾನೂನು ರೂಪ ದೊರೆತಿದೆ.

      ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ಸುದೀರ್ಘ ಚರ್ಚೆ ಬಳಿಕ ತಿದ್ದುಪಡಿ ಕಾಯ್ದೆಯನ್ನು ಅಂಗೀಕರಿಸಲಾಗಿತ್ತು. ಉಭಯ ಸದನಗಳಲ್ಲಿ ಅನುಮತಿ ದೊರೆತ 24 ಗಂಟೆಯೊಳಗೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಕಾಯ್ದೆಗೆ ರಾಷ್ಟ್ರಪತಿ ಕೂಡ ಸಹಿ ಹಾಕಿದ್ದಾರೆ.

      ಈಗ ಕಾಯ್ದೆಗೆ ನಿಯಮಗಳನ್ನು ರೂಪಿಸಿ ಎಲ್ಲಾ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ಕಳುಹಿಸಿಕೊಡಬೇಕಿದೆ. ಆಯಾ ರಾಜ್ಯಗಳು ಈ ಕಾಯ್ದೆಯನ್ನು ತಮ್ಮ ರಾಜ್ಯಗಳಲ್ಲಿ ಅನುಷ್ಠಾನಗೊಳಿಸಬೇಕಿದೆ.

      kovind

      ಈ ಕಾಯ್ದೆಯ ಪ್ರಕಾರ ಪಾಕಿಸ್ತಾನ, ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶದ ಹಿಂದೂ , ಕ್ರಿಶ್ಚಿಯನ್, ಬೌದ್ಧ, ಸಿಖ್ ಹಾಗೂ ಜೈನ್ ಸಮುದಾಯದ ನಾಗರಿಕರಿಗೆ ಭಾರತದ ಪೌರತ್ವ ನೀಡಬಹುದಾಗಿದೆ.

      ಧಾರ್ಮಿಕ ಆಧಾರದ ಮೇಲೆ ಭಾರತದ ಪೌರತ್ವ ನೀಡುವುದಕ್ಕೆ ಪ್ರತಿಪಕ್ಷಗಳು ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಇದನ್ನೇ ಅಸ್ತ್ರವಾಗಿರಿಸಿಕೊಂಡು ಪ್ರತಿಪಕ್ಷಗಳು ದೇಶಾದ್ಯಂತ ಹೋರಾಟ ನಡೆಸುತ್ತಿವೆ. ಅದರಲ್ಲೂ ವಿಶೇಷವಾಗಿ ಈಶಾನ್ಯ ರಾಜ್ಯಗಳಲ್ಲಿ ಪ್ರತಿಭಟನೆ ತಾರಕಕ್ಕೇರಿದೆ.

      ಖುದ್ದು ಪ್ರಧಾನಿ, ಕೇಂದ್ರ ಗೃಹ ಸಚಿವರು ಸ್ಥಳೀಯ ರಾಜ್ಯಪಾಲರು ಮನವಿ ಮಾಡಿದರೂ ಪ್ರತಿಭಟನೆ ಹಿಂಪಡೆಯಲು ಪ್ರತಿಪಕ್ಷಗಳು ನಿರಾಕರಿಸುತ್ತಿವೆ.

      ಈ ಪ್ರತಿಭಟನೆ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿರುವ ಬಿಜೆಪಿ ಇದು ಕಾಂಗ್ರೆಸ್ ಪ್ರೇರಿತ ಪ್ರತಿಭಟನೆಯಾಗಿದೆ. ಜನರನ್ನು ದಾರಿ ತಪ್ಪಿಸಿ ಪ್ರತಿಭಟನೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+