ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ಹೊಸ ಜವಾಬ್ದಾರಿ ನೀಡಿದೆ ಎಂದ ಶೋಭಾ ಕರಂದ್ಲಾಜೆ

|
Google Oneindia Kannada News

ನವದೆಹಲಿ, ಜುಲೈ 07: ಭಾರತೀಯ ಜನತಾ ಪಕ್ಷಕ್ಕಾಗಿ ನಾನು 30 ವರ್ಷಗಳ ಕಾಲ ದುಡಿದಿದ್ದರಿಂದ ಇಂದು ನನಗೆ ಪಕ್ಷವು ಹೊಸ ಜವಾಬ್ದಾರಿಯನ್ನು ನೀಡಿದೆ ಎಂದು ನೂತನ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಂತಸ ವ್ಯಕ್ತಪಡಿಸಿದ್ದಾರೆ.

ನವದೆಹಲಿಯಲ್ಲಿ ಬುಧವಾರ ನೂತನ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಮಾಧ್ಯಮಕ್ಕೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. "ಬಿಜೆಪಿಯಲ್ಲಿ ದುಡಿದ ಒಬ್ಬ ಸಾಮಾನ್ಯ ಕಾರ್ಯಕರ್ತರಿಗೆ ಒಂದು ಸಚಿವ ಸ್ಥಾನ ಸಿಗುತ್ತದೆ ಎಂದರೆ ಪಕ್ಷದ ಕಾರ್ಮಿಕರು ಹೆಮ್ಮೆಪಡುವಂತಾ ವಿಷಯವಾಗಿದೆ. 3 ದಶಕಗಳ ಕಾಲ ಕಾರ್ಯಕರ್ತರಾಗಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಹೊಸ ಜವಾಬ್ದಾರಿಯನ್ನು ನೀಡಲಾಗಿದೆ. ಕೇಂದ್ರ ಸರ್ಕಾರ ನೀಡಿರುವ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸಿಕೊಂಡು ಹೋಗುತ್ತೇನೆ," ಎಂದು ಸಚಿವೆ ಶೋಭಾ ಕರಂದ್ಲಾಜೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವ್ಯಕ್ತಿಚಿತ್ರ: ಕೇಂದ್ರ ಸಚಿವೆ, ಹೋರಾಟಗಾರ್ತಿ ಸಂಸದೆ ಶೋಭಾವ್ಯಕ್ತಿಚಿತ್ರ: ಕೇಂದ್ರ ಸಚಿವೆ, ಹೋರಾಟಗಾರ್ತಿ ಸಂಸದೆ ಶೋಭಾ

ಕರ್ನಾಟಕದಿಂದ ಲೋಕಸಭೆಗೆ ಆಯ್ಕೆ ಆಗಿರುವ ಬೀದರ್ ಸಂಸದ ಭಗವಂತ್ ಖೂಬಾ, ಚಿತ್ರದುರ್ಗ ಸಂಸದ ಎ ನಾರಾಯಣಸ್ವಾಮಿ, ದಕ್ಷಿಣ ಕನ್ನಡ ಸಂಸದೆ ಶೋಧಾ ಕರಂದ್ಲಾಜೆ ಹಾಗೂ ರಾಜ್ಯಸಭೆಗೆ ಆಯ್ಕೆ ಆಗಿರುವ ಸಂಸದ ರಾಜೀವ್ ಚಂದ್ರಶೇಖರ್ ಪಾಲಿಗೆ ಈ ಬಾರಿ ಸಚಿವ ಸ್ಥಾನ ಅರಸಿ ಬಂದಿದೆ.

Cabinet Reshuffle: Shobha Karandlaje First Reaction After Take Oath As Union Cabinet Minister

PM Modi Cabinet Reshuffle Updates: ಪ್ರಮಾಣ ವಚನ ಸ್ವೀಕರಿಸಿದ 43 ಸಚಿವರು

ಕೇಂದ್ರ ಸಂಪುಟಕ್ಕೆ 43 ಸಂಸದರ ಸೇರ್ಪಡೆ:

ನವದೆಹಲಿ ರಾಷ್ಟ್ರಪತಿ ಭವನದಲ್ಲಿ ಆಷಾಢ 16, 1943ನೇ ಶಖೆ ಬುಧವಾರ 6 ಗಂಟೆಗೆ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಆರಂಭವಾಯಿತು. ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟಕ್ಕೆ 43 ನೂತನ ಸಚಿವರು ಸೇರ್ಪಡೆಯಾದರು. ಬುಧವಾರ ಕೇಂದ್ರ ಸಂಪುಟ ಸೇರಿದ 43 ಸಚಿವರ ಪೈಕಿ 15 ನೂತನ ಸಚಿವರಿಗೆ ಸಂಪುಟ ದರ್ಜೆ ಸ್ಥಾನಮಾನ ಹಾಗೂ ಬಾಕಿ 28 ಸಚಿವರಿಗೆ ರಾಜ್ಯ ಖಾತೆಯ ಸ್ಥಾನಮಾನ ನೀಡಲಾಗುವುದು ಎಂದು ತಿಳಿದು ಬಂದಿದೆ.

English summary
Cabinet Reshuffle: Shobha Karandlaje First Reaction After Take Oath As Union Cabinet Minister.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X