ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪೆಗಾಸಸ್ ಬೇಹುಗಾರಿಕೆ: ತಜ್ಞರ ಸಮಿತಿಗೆ ಸೇರಲ್ಲ ಎಂದಿದ್ದೇಕೆ ನಾಯಕರು?

|
Google Oneindia Kannada News

ನವದೆಹಲಿ, ಅಕ್ಟೋಬರ್ 28: ಪೆಗಾಸಸ್ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಆದೇಶದಲ್ಲಿ ತನಿಖಾ ಸಮಿತಿ ಸದಸ್ಯರಾಗಲು ಅನೇಕ ವ್ಯಕ್ತಿಗಳು ನಯವಾಗಿ ನಿರಾಕರಿಸಿದ್ದಾರೆ ಎಂಬ ಹೇಳಿಕೆಯಿಂದ ತಾವು ವಿಚಲಿತರಾರುವುದಾಗಿ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಹೇಳಿದ್ದಾರೆ.

ಪೆಗಾಸಸ್ ಬೇಹುಗಾರಿಕೆ ನಡೆಸಿರುವ ಪ್ರಕರಣ ಸಂಬಂಧ ತ್ವರಿತ ತನಿಖೆಗೆ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಆರ್ ವಿ ರವೀಂದ್ರನ್ ನೇತೃತ್ವದ ಸಮಿತಿಯನ್ನು ರಚಿಸುವಂತೆ ಸುಪ್ರೀಂಕೋರ್ಟ್ ತೀರ್ಪು ಪ್ರಕಟಿಸಿದ ಮರುದಿನ ಚಿದಂಬರಂ ಈ ಬಗ್ಗೆ ಪ್ರಸ್ತಾಪಿಸಿದ್ದಾರೆ.

 ಪೆಗಾಸಸ್‌ ತನಿಖೆಗೆ ಸುಪ್ರೀಂ ಸಮಿತಿ ರಚನೆ: 'ರಾಷ್ಟ್ರಕ್ಕಿಂತ ಪ್ರಧಾನಿ ಮೇಲಲ್ಲ' ಎಂದ ರಾಹುಲ್‌ ಪೆಗಾಸಸ್‌ ತನಿಖೆಗೆ ಸುಪ್ರೀಂ ಸಮಿತಿ ರಚನೆ: 'ರಾಷ್ಟ್ರಕ್ಕಿಂತ ಪ್ರಧಾನಿ ಮೇಲಲ್ಲ' ಎಂದ ರಾಹುಲ್‌

"ಪೆಗಾಸಸ್ ವಿವಾದದ ತನಿಖೆಗಾಗಿ ಸಮಿತಿಯ ಸದಸ್ಯರಾಗಲು ಅನೇಕ ವ್ಯಕ್ತಿಗಳನ್ನು ವಿನಂತಿಸಿದಾಗ, "ನಯವಾಗಿ ನಿರಾಕರಿಸಿದರು" ಎಂದು ಸುಪ್ರೀಂಕೋರ್ಟ್ ಆದೇಶದಲ್ಲಿ ಉಲ್ಲೇಖಿಸಲಾದ ಹೇಳಿಕೆಯಿಂದ ನಾನು ವಿಚಲಿತನಾಗಿದ್ದೇನೆ," ಎಂದು ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಟ್ವೀಟ್ ಮಾಡಿದ್ದಾರೆ.

Can any Citizen decline the request of the SC to serve paramount national interest?: Chidambaram

ಸುಪ್ರೀಂಕೋರ್ಟ್ ಆದೇಶ ನಿರಾಕರಿಸಬಹುದೇ?:

"ಆತ್ಮಸಾಕ್ಷಿಯುಳ್ಳ ಯಾವುದೇ ನಾಗರಿಕನು ರಾಷ್ಟ್ರೀಯ ಹಿತಾಸಕ್ತಿಯ ವಿಷಯದಲ್ಲಿ ಸೇವೆ ಸಲ್ಲಿಸಲು ಸುಪ್ರೀಂಕೋರ್ಟ್ ವಿನಂತಿಯನ್ನು ನಿರಾಕರಿಸಬಹುದೇ?. ಭಾರತೀಯರು ತಮ್ಮನ್ನು ಆಳುವವರಿಗೆ ಯಾವಾಗಲೂ ಭಯ ಪಡಬಾರದು ಎಂಬ ಮಹಾತ್ಮ ಗಾಂಧೀಜಿಯವರ ಉಪದೇಶದಿಂದ ನಾವು ಎಷ್ಟು ದೂರ ಹೋಗಿದ್ದೇವೆ ಎಂಬುದು ಇಲ್ಲಿ ಸ್ಪಷ್ಟವಾಗಿ ಗೋಚರಿಸುತ್ತದೆ, "ಎಂದು ಪಿ ಚಿದಂಬರಂ ತಮ್ಮ ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.

ಸುಪೀಂಕೋರ್ಟ್ ಆದೇಶ ಸ್ವಾಗತಿಸಿದ ಕಾಂಗ್ರೆಸ್:

ಪೆಗಾಸಸ್ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವನ್ನು ರಚಿಸುವ ಸುಪ್ರೀಂಕೋರ್ಟ್ ಆದೇಶವನ್ನು ಕಾಂಗ್ರೆಸ್ ಸ್ವಾಗತಿಸಿದೆ. ಸಂಸತ್ ಅಧಿವೇಶನದ ಸಂದರ್ಭದಲ್ಲಿ ಈ ವಿಷಯವನ್ನು ಪ್ರಸ್ತಾಪಿಸುವುದಾಗಿ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.

8 ವಾರಗಳಲ್ಲಿ ವರದಿ ನೀಡುವಂತೆ ನಿರ್ದೇಶನ:

ದೇಶದ ನಾಗರಿಕರ ವಿರುದ್ಧ ಕೇಂದ್ರ, ರಾಜ್ಯ ಸರ್ಕಾರ, ಕೇಂದ್ರ ಮತ್ತು ರಾಜ್ಯ ಏಜೆನ್ಸಿಗಳು ಹೆಗಾಸಸ್ ರೀತಿಯ ಯಾವುದೇ ತಂತ್ರಾಂಶವನ್ನು ಬಳಸಿಕೊಂಡಿವೆಯೇ ಎಂಬುದರ ಬಗ್ಗೆ ತನಿಖೆ ನಡೆಸುವುದಕ್ಕೆ ಸುಪ್ರೀಂ ಕೋರ್ಟ್ ಮೂವರು ಸದಸ್ಯರ ತಾಂತ್ರಿಕ ಸಮಿತಿಗೆ ಸೂಚನೆ ನೀಡಿದೆ. ಪೆಗಾಸಸ್ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ವರಿತವಾಗಿ ತನಿಖೆ ನಡೆಸಿ 8 ವಾರಗಳಲ್ಲಿ ವರದಿ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಆರ್‌ವಿ ರವೀಂದ್ರನ್ ನೇತೃತ್ವದ ತಜ್ಞರ ಸಮಿತಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ಹೇಗೆ ತನಿಖೆ ನಡೆಸಲಿದೆ ತಜ್ಞರ ಸಮಿತಿ?:

ಪೆಗಾಸಸ್ ತಂತ್ರಾಂಶವನ್ನು ಬಳಸಿ ಬೇಹುಗಾರಿಕೆ ನಡೆಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನೇಮಿಸಲಾದ ತಜ್ಞರ ಸಮಿತಿಯು ಹೇಗೆ ಕಾರ್ಯ ನಿರ್ವಹಿಸಲಿದೆ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಪೀಠ ತಿಳಿಸಿದೆ. ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಆರ್.ವಿ. ರವೀಂದ್ರನ್ ನೇತೃತ್ವದ ಸಮಿತಿಯು ಭಾರತದ ನಾಗರಿಕರಿಗೆ ಸಂಬಂಧಿಸಿದಂತೆ ಈಗಾಗಲೇ ಸಂಗ್ರಹಿಸಲಾಗಿರುವ ಅಂಕಿ-ಅಂಶಗಳನ್ನು ಕದಿಯಲು, ದೂರವಾಣಿ ಸಂಭಾಷಣೆಗಳನ್ನು ಕದ್ದಾಲಿಸಲು, ಮಾಹಿತಿ ಅಥವಾ ಯಾವುದೇ ಇತರ ಉದ್ದೇಶಗಳಿಗಾಗಿ ಪೆಗಾಸಸ್ ತಂತ್ರಾಂಶವನ್ನು ಫೋನ್‌, ಕಂಪ್ಯೂಟರ್ ಸೇರಿದಂತೆ ಇತರ ಸಾಧನಗಳಲ್ಲಿ ಬಳಸಲಾಗಿದೆಯೇ ಎಂಬುದರ ಬಗ್ಗೆ ತನಿಖೆ ನಡೆಸಲಿದೆ.

ಪೆಗಾಸಸ್ ತಂತ್ರಾಂಶದ ಬಳಸಿ ಬೇಹುಗಾರಿಕೆ ಆರೋಪ:

ಜಾಗತಿಕ ತನಿಖಾ ಸಂಸ್ಥೆಗಳು ಮಾಡಿರುವ ವರದಿಯ ಪ್ರಕಾರ, ಕೇಂದ್ರ ಸರ್ಕಾರಕ್ಕೆ ಮಾರಾಟವಾಗಿರುವ ಇಸ್ರೇಲಿನ ಬೇಹುಗಾರಿಕೆ ತಂತ್ರಾಂಶವನ್ನು ಬಳಸಿಕೊಂಡು ವಿರೋಧ ಪಕ್ಷದ ಹಲವು ನಾಯಕರ ಮೇಲೆ ಕಣ್ಗಾವಲು ಇಡಲಾಗಿದೆ. ದೇಶದ ಪ್ರಮುಖ 142ಕ್ಕೂ ಹೆಚ್ಚು ರಾಜಕೀಯ ವ್ಯಕ್ತಿಗಳ ಮೇಲೆ ಬೇಹುಗಾರಿಕೆ ನಡೆಸಲಾಗಿದೆ ಎಂಬ ವರದಿಯ ಬಗ್ಗೆ ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು. ಅಲ್ಲದೇ, ದೇಶದ 300ಕ್ಕೂ ಹೆಚ್ಚು ಪ್ರಮುಖ ರಾಜಕಾರಣಿಗಳು, ಕೇಂದ್ರ ಸಚಿವರು, ನ್ಯಾಯಾಧೀಶರು ಹಾಗೂ ಪತ್ರಕರ್ತರ ಮೊಬೈಲ್ ಸಂಖ್ಯೆ ಹ್ಯಾಕ್ ಮಾಡಲಾಗಿದೆ. ಈ ಬೇಹಾಗಾರಿಕೆಗೆ ಒಳಗಾದವರ ಪಟ್ಟಿಯಲ್ಲಿ ಸ್ವತಃ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಟಿಎಂಸಿ ಮುಖಂಡ ಅಭಿಷೇಕ್ ಬ್ಯಾನರ್ಜಿ, ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್, ಕೇಂದ್ರ ಸಚಿವರಾದ ಪ್ರಹ್ಲಾದ್ ಪಟೇಲ್ ಮತ್ತು ಅಶ್ವಿನಿ ವೈಷ್ಣವ್ ಜೊತೆಗೆ 40 ಮಂದಿ ಪತ್ರಕರ್ತರ ಹೆಸರು ಕೂಡ ಸೇರಿದೆ.

Recommended Video

Facebook ನ ಇನ್ಮೇಲೆ ಏನಂತ ಕರಿಬೇಕು ಗೊತ್ತಾ? | Oneindia Kannada

English summary
Can any Citizen decline the request of the SC to serve paramount national interest?: Chidambaram Tweet on Pegasus Case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X