ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಿವೃತ್ತ ಸಿಜೆಐ ರಂಜನ್ ಗೊಗೊಯ್ ವಿರುದ್ಧದ ಸಂಚನ್ನು ಅಲ್ಲಗಳೆಯಲಾಗದು: ಸುಪ್ರೀಂಕೋರ್ಟ್

|
Google Oneindia Kannada News

ನವದೆಹಲಿ, ಫೆಬ್ರವರಿ 18: ನಿವೃತ್ತ ಸಿಜೆಐ ರಂಜನ್ ಗೊಗೊಯ್ ಅವರ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣದ ಹಿನ್ನೆಲೆಯಲ್ಲಿ ನ್ಯಾಯಾಂಗದ ವಿರುದ್ಧದ ಸಂಚಿನ ಆರೋಪದ ಬಗ್ಗೆ 2019ರಲ್ಲಿ ಆರಂಭಿಸಿದ್ದ ಸುಮೊಟೊ ಪ್ರಕ್ರಿಯೆಯನ್ನು ಸುಪ್ರೀಂಕೋರ್ಟ್ ಮಂಗಳವಾರ ಮುಕ್ತಾಯಗೊಳಿಸಿದೆ.

'ಗೊಗೊಯ್ ಅವರನ್ನು ಸಿಲುಕಿಸುವ ಸಂಚಿಗೆ ಸಂಬಂಧಿಸಿದ ತನಿಖೆಯಲ್ಲಿ ಎರಡು ವರ್ಷ ಕಳೆದಿದ್ದು, ವಿದ್ಯುನ್ಮಾನ ದಾಖಲೆಗಳನ್ನು ಪಡೆದುಕೊಳ್ಳುವ ಸಾಧ್ಯತೆಗಳು ತೀರಾ ಕಡಿಮೆ' ಎಂದು ನ್ಯಾಯಮೂರ್ತಿ ಸಂಜಯ್ ಕಿಶನ್ ಗೌಲ್ ನೇತೃತ್ವದ ನ್ಯಾಯಪೀಠ ಹೇಳಿತು.

ಮೊದಲು ವಾಸ್ತವ ತಿಳಿದುಕೊಳ್ಳಿ: ಸಂಸದೆ ಮೊಯಿತ್ರಾಗೆ ಮಾಜಿ ಸಿಜೆಐ ರಂಜನ್ ಗೊಗೊಯ್ ತಿರುಗೇಟುಮೊದಲು ವಾಸ್ತವ ತಿಳಿದುಕೊಳ್ಳಿ: ಸಂಸದೆ ಮೊಯಿತ್ರಾಗೆ ಮಾಜಿ ಸಿಜೆಐ ರಂಜನ್ ಗೊಗೊಯ್ ತಿರುಗೇಟು

ಪ್ರಕರಣದ ಸುಮೊಟೊ ವಿಚಾರಣೆಯನ್ನು ಅಂತ್ಯಗೊಳಿಸಿದ ಸುಪ್ರೀಂಕೋರ್ಟ್, ನಿವೃತ್ತ ಸಿಜೆಐ ಗೊಗೊಯ್ ಅವರ ವಿರುದ್ಧದ ಲೈಂಗಿಕ ಕಿರುಕುಳ ಪ್ರಕ್ರಿಯೆಯ ತನಿಖೆಯನ್ನು ಆಂತರಿಕ ಪ್ರಕ್ರಿಯೆಯು ಈಗಾಗಲೇ ಪೂರ್ಣಗೊಳಿಸಿದೆ. ಹಾಗೆಯೇ ಈಗಿನ ಸಿಜೆಐ ಎಸ್‌ಎ ಬೊಬ್ಡೆ ನೇತೃತ್ವದ ಮೂವರು ಸದಸ್ಯರ ಸಮಿತಿಯು ಗೊಗೊಯ್ ಅವರನ್ನು ನಿರ್ದೋಷಿ ಎಂದು ವರದಿ ಸಲ್ಲಿಸಿದೆ ಎಂದು ಪೀಠ ಹೇಳಿದೆ.

Cant Rule Out Conspiracy Against Ex CJI Ranjan Gogoi in Sexual Harassment Case: SC

ನಿವೃತ್ತ ನ್ಯಾಯಮೂರ್ತಿ ಎ.ಕೆ. ಪಟ್ನಾಯಕ್ ಅವರ ಏಕ ಸದಸ್ಯ ನ್ಯಾಯಾಂಗ ಸಮಿತಿ ಸಲ್ಲಿಸಿರುವ ವರದಿಯನ್ನು ಪರಿಶೀಲಿಸಿದ್ದು, ಅದರಲ್ಲಿಯೂ ಗೊಗೊಯ್ ವಿರುದ್ಧದ ಸಂಚಿನ ಸಾಧ್ಯತೆಯನ್ನು ಅಲ್ಲಗಳೆಯಲು ಸಾಧ್ಯವಿಲ್ಲ ಎಂದಿರುವುದಾಗಿ ನ್ಯಾಯಾಲಯ ತಿಳಿಸಿದೆ.

ಮಾಜಿ ಸಿಜೆಐ ಗೊಗೋಯಿ ವಿರುದ್ಧ ಆರೋಪಿಸಿದ್ದ ಮಹಿಳೆಗೆ ಕೊನೆಗೂ ನ್ಯಾಯ ಮಾಜಿ ಸಿಜೆಐ ಗೊಗೋಯಿ ವಿರುದ್ಧ ಆರೋಪಿಸಿದ್ದ ಮಹಿಳೆಗೆ ಕೊನೆಗೂ ನ್ಯಾಯ

ಅಸ್ಸಾಂನಲ್ಲಿ ರಾಷ್ಟ್ರೀಯ ನಾಗರಿಕ ನೋಂದಣಿಗೆ ಸಿದ್ಧತೆ ನಡೆಸುವಂತಹ ತೀರ್ಪು ಸೇರಿದಂತೆ ಅನೇಕ ಕಠಿಣ ನಿರ್ಧಾರಗಳನ್ನು ಗೊಗೊಯ್ ತೆಗೆದುಕೊಂಡಿದ್ದರು. ಇವುಗಳ ಕಾರಣದಿಂದ ಅವರ ವಿರುದ್ಧ ಸಂಚು ನಡೆದಿರಬಹುದು ಎಂದು ಗುಪ್ತಚರ ಸಂಸ್ಥೆಯ ನಿರ್ದೇಶಕರು ಪತ್ರದಲ್ಲಿ ತಿಳಿಸಿರುವುದಾಗಿಯೂ ಸುಪ್ರೀಂಕೋರ್ಟ್ ಉಲ್ಲೇಖಿಸಿದೆ.

ಗೊಗೋಯಿಗೆ ಕಪ್ಪು ಚುಕ್ಕೆಯಾಗಿ ಉಳಿದ ಲೈಂಗಿಕ ಕಿರುಕುಳ ಕೇಸ್ಗೊಗೋಯಿಗೆ ಕಪ್ಪು ಚುಕ್ಕೆಯಾಗಿ ಉಳಿದ ಲೈಂಗಿಕ ಕಿರುಕುಳ ಕೇಸ್

ಗೊಗೊಯ್ ಅವರನ್ನು ಸಿಲುಕಿಸುವ ಸಂಚಿನ ತನಿಖೆಗೆ ವಾಟ್ಸಾಪ್ ಸಂದೇಶಗಳಂತಹ ವಿದ್ಯುನ್ಮಾನ ದಾಖಲೆಗಳನ್ನು ಪಡೆದುಕೊಳ್ಳಲು ಎ.ಕೆ. ಪಟ್ನಾಯಕ್ ಸಮಿತಿಗೆ ಸಾಧ್ಯವಾಗಿಲ್ಲ ಎಂದು ಹೇಳಿದೆ.

English summary
The Supreme Court said it cannot rule out the alleged conspiracy against former CJI Ranjan Gogoi in sexual harassment case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X