ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರ ಒಪ್ಪಿದರೆ 3 ತಿಂಗಳಲ್ಲಿ ದೆಹಲಿಯ ಪ್ರತಿಯೊಬ್ಬರಿಗೂ ಕೊರೊನಾ ಲಸಿಕೆ: ಕೇಜ್ರಿವಾಲ್

|
Google Oneindia Kannada News

ನವದೆಹಲಿ, ಮಾರ್ಚ್ 18: ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದರೆ 3 ತಿಂಗಳಲ್ಲಿ ದೆಹಲಿಯ ಪ್ರತಿಯೊಬ್ಬರಿಗೂ ಕೊರೊನಾ ಲಸಿಕೆ ಹಾಕಲಾಗುತ್ತದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ, 18ಕ್ಕಿಂತ ಹೆಚ್ಚು ವಯಸ್ಸಿನ ಪ್ರತಿಯೊಬ್ಬರಿಗೂ ಕೊರೊನಾ ಲಸಿಕೆ ಹಾಕಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ದೇಶದಲ್ಲಿ ಎರಡೇ ವಾರದಲ್ಲಿ 158 ಮಂದಿಯಲ್ಲಿ ರೂಪಾಂತರಿ ಸೋಂಕು ಪತ್ತೆದೇಶದಲ್ಲಿ ಎರಡೇ ವಾರದಲ್ಲಿ 158 ಮಂದಿಯಲ್ಲಿ ರೂಪಾಂತರಿ ಸೋಂಕು ಪತ್ತೆ

ಮಹಾರಾಷ್ಟ್ರ, ಪಂಜಾಬ್, ಕೇರಳ, ಕರ್ನಾಟಕದಂತೆ ದೆಹಲಿಯಲ್ಲೂ ಕೂಡ ನಿತ್ಯ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಲಸಿಕೆಯನ್ನು ಪ್ರತಿಯೊಬ್ಬರಿಗೂ ನೀಡುವಂತಾದರೆ ಮಾತ್ರ ಸೋಂಕು ನಿಯಂತ್ರಣ ಸಾಧ್ಯ.

Can Vaccinate Everyone In Delhi In 3 Months If Allowed: Arvind Kejriwal

ಒಂದೊಮ್ಮೆ ಸರ್ಕಾರ ಅನುಮತಿ ನೀಡಿದರೆ 3 ತಿಂಗಳೊಳಗಾಗಿ ದೆಹಲಿಯ ಪ್ರತಿಯೊಬ್ಬ ನಾಗರಿಕನಿಗೂ ಕೊರೊನಾ ಲಸಿಕೆ ಹಾಕಿಸಲಾಗುವುದು ಎಂದರು.

ಪ್ರತಿನಿತ್ಯ 30,000-40,000 ಲಸಿಕೆಯನ್ನು ನಿತ್ಯ ಜನರಿಗೆ ನೀಡಲಾಗುತ್ತಿದೆ. ಅದನ್ನು 1.25 ಲಕ್ಷಕ್ಕೆ ಹೆಚ್ಚಳ ಮಾಡಬೇಕು. ಮುಂದಿನ ಕೆಲ ದಿನಗಳಲ್ಲಿ ಈ ಸಂಖ್ಯೆಯನ್ನು ಹೆಚ್ಚು ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ಯಾವುದೇ ಕಾರಣಕ್ಕೂ ಕೊರೊನಾ ಲಸಿಕೆ ಪಡೆಯಲು ಹಿಂಜರಿಕೆ ಬೇಡ, ನಾನು ಹಾಗೂ ನನ್ನ ಪಾಲಕರು ಕೂಡ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದೇವೆ. ಕೊರೊನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಅಗತ್ಯವಿದೆ ಎಂದು ಹೇಳಿದರು.

ದೇಶದಲ್ಲಿ ಕೊರೊನಾ ಅಟ್ಟಹಾಸ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಗುರುವಾರ ಭಾರತದಲ್ಲಿ ಬರೋಬ್ಬರಿ 35,871 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದು ಈ ವರ್ಷದ ಅತಿ ಗರಿಷ್ಠ ಏಕದಿನದ ಪ್ರಕರಣವಾಗಿದೆ.

ಇನ್ನು ಒಂದೇ ದಿನ ವೈರಸ್ 172 ಮಂದಿಯನ್ನು ಬಲಿಪಡೆದುಕೊಂಡಿದ್ದು, ಸಾವಿನ ಸಂಖ್ಯೆ 1,59,216ಕ್ಕೆ ಏರಿಕೆಯಾಗಿದೆ.

ಈ ನಡುವೆ ಒಟ್ಟಾರೆ 1,14,74,605 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 17,741 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 1,10,63,025ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 2,52,364 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.

English summary
Arvind Kejriwal today asked that the centre allow vaccination for all above 18 and claimed his government could inoculate all of Delhi in three months if it was allowed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X