ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಭ್ಯರ್ಥಿಗಳ ಸಂಗಾತಿ ಆದಾಯದ ಮೂಲವನ್ನೂ ಘೋಷಿಸಬೇಕು: ಸುಪ್ರೀಂ

|
Google Oneindia Kannada News

ನವದೆಹಲಿ, ಫೆಬ್ರವರಿ 17 : ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ ಆದಾಯ ಮೂಲವನ್ನು ಘೋಷಿಸುವುದರ ಜತೆಗೆ ತಮ್ಮ ಸಂಗಾತಿ ಅವಲಂಬಿತರ ಆದಾಯ ಮೂಲವನ್ನೂ ಸಹ ಕಡ್ಡಾಯವಾಗಿ ಘೋಷಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ.

ನ್ಯಾಯಮೂರ್ತಿಗಳಾದ ಜೆ.ಚೆಲಮೇಶ್ವರ್ ಮತ್ತು ಅಬ್ದುಲ್ ನಜೀರ್ ಅವರಿದ್ದ ಪೀಠ ವಿಚಾರಣೆ ನಡೆಸಿ, ನಾಮಪತ್ರಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ತಮ್ಮ ಸ್ವತ್ತುಗಳನ್ನು, ತಮ್ಮ ಸಂಗಾತಿ ಆಸ್ತಿ, ಮಕ್ಕಳು ಮತ್ತು ಇತರೆ ಅವಲಂಬಿತರ ಹೆಸರಿನಲ್ಲಿ ಆಸ್ತಿ ವಿವರಗಳನ್ನು ಚುನಾವಣಾ ಆಯೋಗಕ್ಕೆ ನೀಡಬೇಕೆಂದು ನಿರ್ದೇಶಿಸಿದೆ. ಸರ್ಕಾರೇತರ ಸಂಸ್ಥೆ ಲೋಕಪ್ರಹಾರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರ ನಡೆಸಿದ ಸುಪ್ರೀಂಕೋರ್ಟ್ ಈ ಮಹತ್ವದ ಆದೇಶ ನೀಡಿದೆ.

Candidate should declare the wealth of their wife, children and dependents too

ಇದರೊಂದಿಗೆ 26 ಸಂಸದರು, 11 ರಾಜ್ಯಸಭಾ ಸದಸ್ಯರು ಹಾಗೂ 257 ಶಾಸಕರ ಆದಾಯವು ನಾಮಪತ್ರ ಸಲ್ಲಿಕೆ ವೇಳೆ ಸಲ್ಲಿಸಿದ್ದ ಅಫಿಡವಿಟ್ ನಲ್ಲಿ ಆದಾಯಕ್ಕಿಂತ ಹೆಚ್ಚಿದೆ ಎಂದು ಅರ್ಜಿದಾರರು ಸುಪ್ರೀಂಕೋರ್ಟ್ ಗಮನಕ್ಕೆ ತಂದಿದ್ದರು.
ಚುನಾವಣಾ ಆಯೋಗ ಕೂಡ ಜನವರಿಯಲ್ಲಿ, ಚುನಾವಣೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ತಮ್ಮ ಆದಾಯ ಮೂಲದ ಜತೆಗೆ ತಮ್ಮ ಸಂಗಾತಿ ಹಾಗೂ ಅವಲಂಬಿತರ ಆದಾಯ ಮೂಲವನ್ನು ಫಾರ್ಮ್ 26 ರಲ್ಲಿ ಬಹಿರಂಗಪಡಿಸಬೇಕು ಎಂದು ಸುಪ್ರೀಂಗೆ ವಿಚಾರಣೆ ಸಮಯದಲ್ಲಿ ಕೋರಿತ್ತು.

English summary
Supreme court passed major judgement to reform electoral process that Candidate should declare the wealth of their wife, Children and dependents too.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X