ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾವೇರಿ ಮಂಡಳಿ ಮೊದಲ ಸಭೆ: ಕರ್ನಾಟಕ ಏನು ಹೇಳುತ್ತೆ?

By Nayana
|
Google Oneindia Kannada News

Recommended Video

ಕಾವೇರಿ ಮಂಡಳಿ ಮೊದಲ ಸಭೆ ಇಂದು | Oneindia Kannada

ನವದೆಹಲಿ, ಜುಲೈ 2: ಕರ್ನಾಟಕದ ವಿರೋಧದ ಮಧ್ಯೆಯೇ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಪ್ರಥಮ ಸಭೆ ನವದೆಹಲಿಯಲ್ಲಿ ಸೋಮವಾರ(ಜು.2)ನಡೆಯಲಿದೆ.

ನವದೆಹಲಿಯ ಶ್ರಮ ಶಕ್ತಿ ಭವನದಲ್ಲಿ ಸಭೆ ನಡೆಯಲಿದೆ ಸಭೆಯು ಕೇಂದ್ರ ಜಲಮಂಡಳಿ ಮತ್ತು ಕಾವೇರಿ ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಎಸ್‌. ಮಸೂದ್‌ ಹುಸೇನ್‌ ನೇತೃತ್ವದಲ್ಲಿ ನಡೆಯಲಿದೆ. ಸಭೆಯಲ್ಲಿ ಜುಲೈ ತಿಂಗಳಲ್ಲಿ ನೀರು ಹಂಚಿಕೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ. ಜೂನ್ ತಿಂಗಳಲ್ಲಿ ಕಾವೇರಿ ನೀರಿನ ಪ್ರಮಾಣ ಎಷ್ಟಿತ್ತು, ಈಗ ಎಷ್ಟಿದೆ, ಎಷ್ಟು ನೀರು ಹಂಚಿಕೆ ಮಾಡಲಾಗಿದೆ ಎನ್ನುವ ವಿಷಯಗಳ ಬಗ್ಗೆ ವಿಸ್ತೃತ ಚರ್ಚೆ ನಡೆಯಲಿದೆ.

ಕಾವೇರಿ ನಿರ್ವಹಣಾ ಮಂಡಳಿಗೆ ರಾಜ್ಯದ ಇಬ್ಬರು ಪ್ರತಿನಿಧಿಗಳ ನೇಮಕ ಕಾವೇರಿ ನಿರ್ವಹಣಾ ಮಂಡಳಿಗೆ ರಾಜ್ಯದ ಇಬ್ಬರು ಪ್ರತಿನಿಧಿಗಳ ನೇಮಕ

9 ಸದಸ್ಯರಿರುವ ಕಾವೇರಿ ನಿರ್ವಹಣಾ ಪ್ರಾಧಿಕಾರದಲ್ಲಿ ಕೇಂದ್ರ ಸರ್ಕಾರದ ಐವರು ಪ್ರತಿನಿಧಿ, ಕರ್ನಾಟಕ, ಕೇರಳ, ತಮಿಳುನಾಡು, ಪುದುಚೆರಿಯ ಒಂದೊಂದು ಪ್ರತಿನಿಧಿ ಇರಲಿದ್ದಾರೆ. ಈ ಸಭೆಯಲ್ಲಿ ಕರ್ನಾಟಕದ ಪ್ರತಿನಿಧಿಯಾಗಿ ಜಲಸಂಪನ್ಮೂಲ ಇಲಾಖೆ ಕಾರ್ಯದರ್ಶಿ ರಾಕೇಶ್‌ ಸಿಂಗ್‌ ಭಾಗಿಯಾಗಲಿದ್ದಾರೆ.

Cauvery management board meeting today

ಕಾವೇರಿ ನಿರ್ವಹಣಾ ಮಂಡಳಿಗೆ, ಪ್ರಾಧಿಕಾರಕ್ಕೆ ರಾಜ್ಯದ ಇಬ್ಬರು ಪ್ರತಿನಿಧಿಗಳನ್ನು ನೇಮಕ ಮಾಡಿದೆ. ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಜಲಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್ ಹಾಗೂ ಜಲಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ, ಕಾವೇರಿ ನಿಗಮದ ಎಂಡಿ ಎಚ್‌ಎಲ್‌ ಪ್ರಸನ್ನ ಸದಸ್ಯರಾಗಿ ನೇಮಕಗೊಂಡಿದ್ದಾರೆ.

ಕೇಂದ್ರ ಸರ್ಕಾರ ಜೂನ್ 1ರಂದು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ಮಾಡಿತ್ತು. ಗೆಜೆಟ್ ನೋಟಿಫಿಕೇಷನ್ ಹೊರಡಿಸಿತ್ತು. ಕರ್ನಾಟಕ, ತಮಿಳುನಾಡು, ಕೇರಳ ಹಾಗೂ ಪುದುಚೇರಿ ರಾಜ್ಯಗಳಿಗೆ ಪ್ರತಿನಿಧಿಗಳನ್ನು ನೇಮಿಸುವಂತೆ ಸೂಚನೆ ನೀಡಿತ್ತು.

English summary
Cauvery management board meeting will be held in Delhi on July 2. Representatives of Karnataka will participate and submit its objections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X