ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಮಾ ಸಲಹೆ ತಿರಸ್ಕರಿಸಿದ ತಮಿಳುನಾಡು, ಸಂಧಾನ ವಿಫಲ

By Mahesh
|
Google Oneindia Kannada News

ನವದೆಹಲಿ, ಸೆ. 29: ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾ ಭಾರತಿ ಅವರ ನೇತೃತ್ವದಲ್ಲಿ ಬುಧವಾರ ನಡೆದ ಕಾವೇರಿ ಸಂಧಾನ ಸಭೆ ವಿಫಲವಾಗಿದೆ. ಕರ್ನಾಟಕ ನೀಡಿದ ಸಲಹೆಯನ್ನು ತಮಿಳುನಾಡು ತಿರಸ್ಕರಿಸಿದೆ. ಕೋರ್ಟ್ ಹೊರಗಡೆ ನಿಮ್ಮ ವ್ಯಾಜ್ಯ ಪರಿಹರಿಸಿಕೊಳ್ಳಿ, ನಿಮ್ಮ ರಾಜ್ಯಗಳಲ್ಲಿ ಗಲಭೆಯಾದರೆ ಉಪವಾಸ ಸತ್ಯಾಗ್ರಹ ಕೂರುತ್ತೇನೆ ಎಂದು ಸಚಿವೆ ಉಮಾ ಎಚ್ಚರಿಸಿದ್ದಾರೆ.

ಸುಪ್ರೀಂಕೋರ್ಟ್ ಸೂಚನೆ ಮೇರೆಗೆ ಕರ್ನಾಟಕ ಮತ್ತು ತಮಿಳುನಾಡುಗಳ ನಡುವಿನ ಕಾವೇರಿ ನೀರು ಹಂಚಿಕೆ ಬಿಕ್ಕಟ್ಟಿಗೆ ತಾತ್ಕಾಲಿಕ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಮಧ್ಯಸ್ಥಿಕೆಯಲ್ಲಿ ಸಭೆ ನಡೆಸಲಾಯಿತು. ಸಭೆಯ ನಂತರ ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾ ಭಾರತಿ ಅವರು ಸುದ್ದಿಗೋಷ್ಠಿ ನಡೆಸಿದರು.

Cauvery Dispute : TN refuses to Uma Bharti suggestion, meet remains inconclusive

ಅಣೆಕಟ್ಟುಗಳಲ್ಲಿನ ಸದ್ಯದ ಪರಿಸ್ಥಿತಿಯನ್ನು ಮನಗಂಡು ವರದಿ ಸಲ್ಲಿಸಲು ಉಭಯ ರಾಜ್ಯಗಳಿಗೆ ತಜ್ಞರ ತಂಡ ಕಳಿಸುವ ಸಲಹೆಯನ್ನು ಕರ್ನಾಟಕ ಮುಂದಿಟ್ಟಿತು.

Cauvery Dispute : TN refuses to Uma Bharti suggestion, meet remains inconclusive

ಆದರೆ, ತಮಿಳುನಾಡು ಈ ಸಲಹೆಗೆ ಒಪ್ಪಲಿಲ್ಲ. ಕೊನೆಗೆ, ಜನರ ಹಿತಕ್ಕಾಗಿ ಉಭಯ ರಾಜ್ಯಗಳು ಕೋರ್ಟಿನಿಂದ ಹೊರಗಡೆ ಮಾತುಕತೆ ನಡೆಸಿ ಸಂಧಾನ ಮಾಡಿಕೊಳ್ಳಿ ಎಂದು ಉಮಾಭಾರತಿ ಸಲಹೆ ನೀಡಿದರು. ಅಟಾರ್ನಿ ಜನರಲ್ ಮೂಲಕ ಸಭೆಯ ಮಾಹಿತಿಯನ್ನು ಸುಪ್ರೀಂಕೋರ್ಟಿಗೆ ಸಲ್ಲಿಸುತ್ತೇವೆ ಎಂದರು.
Cauvery Dispute : TN refuses to Uma Bharti suggestion, meet remains inconclusive
ಉಭಯ ರಾಜ್ಯಗಳ ಮುಖ್ಯಮಂತ್ರಿಗಳು, ಜಲಸಂಪನ್ಮೂಲ ಸಚಿವರು, ಜಲಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಸಿಎಂ ನಿಯೋಜಿತ ಯಾವುದೇ ಪ್ರಮುಖ ಅಧಿಕಾರಿ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಈ ಸಭೆಯಲ್ಲಿ ಭಾಗವಹಿಸಬಹುದು ಎಂದು ಕೇಂದ್ರ ಜಲಸಂಪನ್ಮೂಲ ಇಲಾಖೆಯ ಪತ್ರದಲ್ಲಿ ಸೂಚಿಸಲಾಗಿತ್ತು.

ಆದರೆ, ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ಅವರು ಅನಾರೋಗ್ಯ ಪೀಡಿತರಾಗಿದ್ದು, ಅವರ ಬದಲಿಗೆ ತಮಿಳುನಾಡು ಪರವಾಗಿ ಲೋಕೋಪಯೋಗಿ ಸಚಿವ ಈಡಪ್ಪಾಡಿ ಪಳನಿಸ್ವಾಮಿ, ಮುಖ್ಯ ಕಾರ್ಯ ದರ್ಶಿ ರಾಮಮೋಹನ ರಾವ್ ಪಾಲ್ಗೊಂಡಿದ್ದರು.

ರಾಜ್ಯದ ಪರ ಸಿದ್ದರಾಮಯ್ಯ, ಸಚಿವ ಎಂ.ಬಿ. ಪಾಟೀಲ, ಸರ್ಕಾರದ ಮುಖ್ಯ ಕಾರ್ಯ ದರ್ಶಿ ಅರವಿಂದ ಜಾಧವ್‌, ಜಲಸಂಪ ನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ ಸಿಂಗ್‌ ಭಾಗವಹಿಸಿದ್ದರು.

English summary
Water Resources Minister Uma Bharti suggested that a team of experts be sent to both Karnataka & TN to asses ground situation. But, Tamil Nadu refused to accept to this idea. Later, Uma Bharti said 'solve this problem outside the court and then approach the court with solution'
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X