• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸಿಬಿಐ ವಿವಾದ: ಪ್ರಕರಣವನ್ನು ನ.29 ಕ್ಕೆ ಮುಂದೂಡಿದ ಸುಪ್ರೀಂ

|

ನವದೆಹಲಿ, ನವೆಂಬರ್ 20: ಕೇಂದ್ರ ತನಿಖಾ ದಳ(ಸಿಬಿಐ)ದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ನವೆಂಬರ್ 29 ಕ್ಕೆ ಸುಪ್ರೀಂ ಕೋರ್ಟ್ ಮುಂದೂಡಿದೆ.

ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರನ್ನು ಕಡ್ಡಾಯ ರಜೆಯ ಮೇಲೆ ಕಳಿಸಿರುವ ಕೇಂದ್ರದ ಕ್ರಮವನ್ನು ಖಂಡಿಸಿ ಅಲೋಕ್ ವರ್ಮಾ ಅವರು ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗಯ್ ಅವರಿದ್ದ ಪೀಠ, "ಕೇಂದ್ರ ವಿಚಕ್ಷಣಾ ದಳದ ವರದಿಯನ್ನು ಸೋರಿಕೆ ಮಾಡಿರುವ ನೀವಿಬ್ಬರೂ ವಿಚಾರಣೆಗೆ ಅರ್ಹರಲ್ಲ" ಎಂದಿದೆ.

ಹೈದರಾಬಾದ್ ಮೂಲದ ಉದ್ಯಮಿಯೊಬ್ಬರಿಂದ ಸಿಬಿಐ ವಿಶೇಷ ನಿರ್ದೇಶಕ ರಾಕೇಶ್ ಆಸ್ಥಾನ ಲಂಚ ಸ್ವೀಕರಿಸಿದ್ದರು ಎಂದು ನಿರ್ದೇಶಕ ಅಲೋಕ್ ವರ್ಮಾ ದೂರಿದ್ದರು. ಅಲೋಕ್ ವರ್ಮಾ ಅವರ ಮೇಲೂ ಆಸ್ಥಾನ ಲಂಚದ ಆರೋಪ ಮಾಡಿದ್ದರು.

ಈ ಬೆಳವಣಿಗೆಯ ನಂತರ ವರ್ಮಾ ಮತ್ತು ಆಸ್ಥಾನ ಇಬ್ಬರನ್ನೂ ಕೇಂದ್ರ ಸರ್ಕಾರ ಕಡ್ಡಾಯ ರಜೆಯ ಮೇಲೆ ಕಳಿಸಿ, ನಾಗೇಶ್ವರ್ ರಾವ್ ಎಂಬುವವರನ್ನು ಹಂಗಾಮಿ ನಿರ್ದೇಶಕರನ್ನಾಗಿ ನೇಮಿಸಿತ್ತು. ಕೇಂದ್ರ ಸರ್ಕಾರದ ಈ ಕ್ರಮವನ್ನು ಖಂಡಿಸಿ ವರ್ಮಾ ಅವರು ಸುಪ್ರೀಂ ನಲ್ಲಿ ಅರ್ಜಿ ಸಲ್ಲಿಸಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಲು ಕೇಂದ್ರ ವಿಚಕ್ಷಣಾ ದಳ(CVC)ಕ್ಕೆ ಸುಪ್ರೀಂ ಆದೇಶಿಸಿತ್ತು. ನಂತರ ಸಿವಿಸಿ ಸಲ್ಲಿಸಿದ ವರದಿಗೆ ಪ್ರತಿಕ್ರಿಯೆ ನೀಡಲು ಅಲೋಕ್ ವರ್ಮಾ ಅವರಿಗೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಸೋಮವಾರ ಸಿವಿಸಿ ವರದಿಗೆ ಅಲೋಕ್ ವರ್ಮಾ ಪ್ರತಿಕ್ರಿಯೆ ನೀಡಿದ್ದರು.ಸಿವಿಸಿ ನೀದಿದ್ದ ವರದಿಯನ್ನು ಸೋರಿಕೆ ಮಾಡಿದ್ದರ ಕುರಿತು ಅಲೋಕ್ ವರ್ಮಾ ಅವರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ವಿಚಾರಣೆಯನ್ನು ನ.29 ಕ್ಕೆ ಮುಂದೂಡಿದೆ.

{document1}

English summary
CBI bribery case adjourned till November 29 by Supreme Court
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X