ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಬಿಐ ವಿವಾದ: ಸುಪ್ರೀಂನಲ್ಲಿ ಇಂದು ಅಲೋಕ್ ವರ್ಮಾ ಅರ್ಜಿ ವಿಚಾರಣೆ

|
Google Oneindia Kannada News

ನವದೆಹಲಿ, ನವೆಂಬರ್ 29: ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರನ್ನು ಕಡ್ಡಾಯ ರಜೆಯ ಮೇಲೆ ಕಳಿಸಿರುವ ಕೇಂದ್ರದ ನಿರ್ಧಾರ ಪ್ರಶ್ನಿಸಿ ವರ್ಮಾ ಅವರು ಸುಪ್ರೀಂ ಕೋರ್ಟಿನಲ್ಲಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ನಡೆಯಲಿದೆ.

ಈ ಅರ್ಜಿಯ ವಿಚಾರಣೆಯನ್ನು ನ.20 ರಂದು ಕೈಗೆತ್ತಿಕೊಂಡಿದ್ದ ಸುಪ್ರೀಂ ಕೋರ್ಟ್, ನಂತರ ನ.29 ಕ್ಕೆ ಮುಂದೂಡಿತ್ತು.

ಸಿಬಿಐ ವಿವಾದ: ಪ್ರಕರಣವನ್ನು ನ.29 ಕ್ಕೆ ಮುಂದೂಡಿದ ಸುಪ್ರೀಂಸಿಬಿಐ ವಿವಾದ: ಪ್ರಕರಣವನ್ನು ನ.29 ಕ್ಕೆ ಮುಂದೂಡಿದ ಸುಪ್ರೀಂ

ಕೇಂದ್ರ ತನಿಖಾ ದಳ(ಸಿಬಿಐ) ವಿರುದ್ಧ ಕೇಳಿಬಂದ ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಮತ್ತು ವಿಶೇಷ ನಿರ್ದೇಶಕ ರಾಕೇಶ್ ಆಸ್ಥಾನ ಅವರನ್ನು ಕಡ್ಡಾಯ ರಜೆಯ ಮೇಲೆ ಕಳಿಸಿತ್ತು.

ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ವರ್ಮಾ ಸಲ್ಲಿಸಿದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ, 'ಕೇಂದ್ರ ವಿಚಕ್ಷಣಾ ದಳ(ಸಿವಿಸಿ) ನೀಡಿದ್ದ ವರದಿಯನ್ನು ಸೋರಿಕೆ ಮಾಡಿರುವ ನೀವಿಬ್ಬರೂ ವಿಚಾರಣೆಗೆ ಅರ್ಹರಲ್ಲ' ಎಂದು ಸುಪ್ರೀಂ ಛೀಮಾರಿ ಹಾಕಿತ್ತು.

ಕೋರ್ಟ್‌ಗೆ ನೀಡಿದ ದಾಖಲೆಯನ್ನೇ ಸೋರಿಕೆ ಮಾಡಿದರೇ ಸಿಬಿಐ ನಿರ್ದೇಶಕ? ಕೋರ್ಟ್‌ಗೆ ನೀಡಿದ ದಾಖಲೆಯನ್ನೇ ಸೋರಿಕೆ ಮಾಡಿದರೇ ಸಿಬಿಐ ನಿರ್ದೇಶಕ?

CBI controversy: Supreme court to hear Alok Vermas plea today

ಹೈದರಾಬಾದ್ ಮೂಲದ ಉದ್ಯಮಿಯೊಬ್ಬರಿಂದ ಸಿಬಿಐ ವಿಶೇಷ ನಿರ್ದೇಶಕ ರಾಕೇಶ್ ಆಸ್ಥಾನ ಲಂಚ ಸ್ವೀಕರಿಸಿದ್ದರು ಎಂದು ನಿರ್ದೇಶಕ ಅಲೋಕ್ ವರ್ಮಾ ದೂರಿದ್ದರು. ಅಲೋಕ್ ವರ್ಮಾ ಅವರ ಮೇಲೂ ಆಸ್ಥಾನ ಲಂಚದ ಆರೋಪ ಮಾಡಿದ್ದರು.

ಈ ಬೆಳವಣಿಗೆಯ ನಂತರ ವರ್ಮಾ ಮತ್ತು ಆಸ್ಥಾನ ಇಬ್ಬರನ್ನೂ ಕೇಂದ್ರ ಸರ್ಕಾರ ಕಡ್ಡಾಯ ರಜೆಯ ಮೇಲೆ ಕಳಿಸಿ, ನಾಗೇಶ್ವರ್ ರಾವ್ ಎಂಬುವವರನ್ನು ಹಂಗಾಮಿ ನಿರ್ದೇಶಕರನ್ನಾಗಿ ನೇಮಿಸಿತ್ತು. ಕೇಂದ್ರ ಸರ್ಕಾರದ ಈ ಕ್ರಮವನ್ನು ಖಂಡಿಸಿ ವರ್ಮಾ ಅವರು ಸುಪ್ರೀಂ ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಲು ಕೇಂದ್ರ ವಿಚಕ್ಷಣಾ ದಳ(CVC)ಕ್ಕೆ ಸುಪ್ರೀಂ ಆದೇಶಿಸಿತ್ತು.

ಸಿಬಿಐ ವಿವಾದ: ಮುಚ್ಚಿದ ಲಕೋಟೆಯಲ್ಲಿ ಪ್ರತಿಕ್ರಿಯೆ ಸಲ್ಲಿಸಿದ ಅಲೋಕ್ ಸಿಬಿಐ ವಿವಾದ: ಮುಚ್ಚಿದ ಲಕೋಟೆಯಲ್ಲಿ ಪ್ರತಿಕ್ರಿಯೆ ಸಲ್ಲಿಸಿದ ಅಲೋಕ್

ನಂತರ ಸಿವಿಸಿ ಸಲ್ಲಿಸಿದ ವರದಿಗೆ ಪ್ರತಿಕ್ರಿಯೆ ನೀಡಲು ಅಲೋಕ್ ವರ್ಮಾ ಅವರಿಗೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಸೋಮವಾರ ಸಿವಿಸಿ ವರದಿಗೆ ಅಲೋಕ್ ವರ್ಮಾ ಪ್ರತಿಕ್ರಿಯೆ ನೀಡಿದ್ದರು.ಸಿವಿಸಿ ನೀದಿದ್ದ ವರದಿಯನ್ನು ಸೋರಿಕೆ ಮಾಡಿದ್ದರ ಕುರಿತು ಅಲೋಕ್ ವರ್ಮಾ ಅವರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ವಿಚಾರಣೆಯನ್ನು ನ.29 ಕ್ಕೆ ಮುಂದೂಡಿತ್ತು.

English summary
The Supreme Court is scheduled to hear on Thursday CBI director Alok Verma's plea challenging the government's order divesting him of his duties and sending him on leave in view of graft allegations against him.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X