ಫೇಸ್ಬುಕ್ನಿಂದ ಮಾಹಿತಿ ಕಳವು; ಎರಡು ಸಂಸ್ಥೆಗಳ ಮೇಲೆ ಸಿಬಿಐ ಕೇಸ್
ನವದೆಹಲಿ, ಜನವರಿ 22: ಸಾಮಾಜಿಕ ಜಾಲತಾಣ ಫೇಸ್ಬುಕ್ನಿಂದ ಭಾರತೀಯ ಬಳಕೆದಾರರ ಮಾಹಿತಿ ಕಳವು ಮಾಡುತ್ತಿದ್ದ ಆರೋಪದಲ್ಲಿ ಕೇಂಬ್ರಿಜ್ ಅನಾಲಿಟಿಕಾ ಹಾಗೂ ಬ್ರಿಟನ್ ನ ಗ್ಲೋಬಲ್ ಸೈನ್ಸ್ ರಿಸರ್ಚ್ ಲಿಮಿಟೆಡ್ ಸಂಸ್ಥೆಗಳ ಮೇಲೆ ಸಿಬಿಐ ಪ್ರಕರಣ ದಾಖಲಿಸಿದೆ.
ಭಾರತದ ಫೇಸ್ ಬುಕ್ ಬಳಕೆದಾರರ ವೈಯಕ್ತಿಕ ಮಾಹಿತಿಯನ್ನು ಅಕ್ರಮವಾಗಿ ಪಡೆದುಕೊಳ್ಳುತ್ತಿದ್ದ ಆರೋಪದ ಮೇಲೆ ಸಿಬಿಐ ಪ್ರಕರಣ ದಾಖಲಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
2018ರಲ್ಲಿಯೇ ಈ ಎರಡೂ ಸಂಸ್ಥೆಗಳ ಮೇಲೆ ಸಿಬಿಐ ಪ್ರಾಥಮಿಕ ತನಿಖೆಗೆ ಮುಂದಾಗಿತ್ತು. ಗ್ಲೋಬಲ್ ಸೈನ್ಸ್ ರಿಸರ್ಚ್ ಲಿಮಿಟೆಡ್, ಫೇಸ್ಬುಕ್ನಿಂದ ಅಕ್ರಮಮವಾಗಿ ಸಂಗ್ರಹಿಸಿದ್ದ ಮಾಹಿತಿಗಳನ್ನು ಕೇಂಬ್ರಿಜ್ ಅನಾಲಿಟಿಕಾ ಪಡೆದುಕೊಂಡಿತ್ತು ಎಂದು ಆರೋಪಿಸಲಾಗಿದೆ.

ಈ ಹಿಂದೆಯೂ ಅಮೆರಿಕದ ಸುಮಾರು 87 ಮಿಲಿಯನ್ ಜನರ ಮಾಹಿತಿಗಳನ್ನು ಕೇಂಬ್ರಿಜ್ ಅನಾಲಿಟಿಕಾ ಅಕ್ರಮವಾಗಿ ಪಡೆದುಕೊಂಡಿದೆ ಎಂದು ಫೇಸ್ಬುಕ್ ಸಂಸ್ಥಾಪಕ ಮಾರ್ಕ್ ಜುಕರ್ ಬರ್ಗ್ ಆರೋಪಿಸಿದ್ದರು. ಆ ನಂತರ ಈ ವಿಷಯಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಬೇಕೆಂದು 2018ರಲ್ಲಿ ಮಾಹಿತಿ ತಂತ್ರಜ್ಞಾನ ಸಚಿವಾಲಯ, ಫೇಸ್ಬುಕ್ ಹಾಗೂ ಕೇಂಬ್ರಿಜ್ ಅನಾಲಿಟಿಕಾಗೆ ಪತ್ರ ಬರೆದಿತ್ತು. ಕ್ರಿಸ್ಟೊಫರ್ ವೈಲೀ ಎಂಬುವರು ಈ ಹಗರಣವನ್ನು ಬೆಳಕಿಗೆ ತಂದ ನಂತರ ಸಚಿವಾಲಯ ಈ ಕ್ರಮ ತೆಗೆದುಕೊಂಡಿತ್ತು. ಇದೀಗ ಈ ಎರಡೂ ಸಂಸ್ಥೆಗಳ ಮೇಲೆ ಸಿಬಿಐ ಪ್ರಕರಣ ದಾಖಲಿಸಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications