ಸುಶಾಂತ್ ಸಿಂಗ್ ಆತ್ಮಹತ್ಯೆ ಬಗ್ಗೆ ಸಿಬಿಐ ತನಿಖೆ?

ನವದೆಹಲಿ, ಜುಲೈ 15 : ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಯಲಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ತಮಗೆ ಬಂದಿದ್ದ ಮನವಿಯನ್ನು ಸಂಬಂಧಿಸಿದ ಅಧಿಕಾರಿಗಳಿಗೆ ರವಾನೆ ಮಾಡಿದ್ದಾರೆ.

ಬಿಹಾರದ ಮಾಜಿ ಸಂಸದ ಪಪ್ಪು ಯಾದವ್ ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಯಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾಗೆ ಮನವಿ ಮಾಡಿದ್ದರು. ಈ ಪತ್ರವನ್ನು ಅಮಿತ್ ಶಾ ಸಂಬಂಧಿಸಿದ ಅಧಿಕಾರಿಗಳಿಗೆ ಕಳುಹಿಸಿಕೊಟ್ಟಿದ್ದಾರೆ.

ಮಂಗಳವಾರ ಅಮಿತ್ ಶಾ ಪತ್ರವನ್ನು ಕಳುಹಿಸಿಕೊಟ್ಟಿರುವ ಚಿತ್ರಗಳನ್ನು ಪಪ್ಪು ಯಾದವ್ ಟ್ವೀಟ್ ಮಾಡಿದ್ದಾರೆ. ಹಲವು ನಟರು, ಸಂಘ ಸಂಸ್ಥೆಗಳು ಸುಶಾಂತ್ ಸಾವಿನ ಬಗ್ಗೆ ಸಿಬಿಐ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದವು. ಈ ಕುರಿತು ಗೃಹ ಇಲಾಖೆ ಶೀಘ್ರದಲ್ಲಿಯೇ ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇದೆ.

CBI May Probe Death Case Of Sushant Singh Rajput

ಜೂನ್ 14ರಂದು ಮುಂಬೈನ ಅಪಾರ್ಟ್‌ಮೆಂಟ್‌ನಲ್ಲಿ ಸುಶಾಂತ್ ಸಿಂಗ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ತಮ್ಮ ಪತ್ರವನ್ನು ನಿರ್ಲಕ್ಷಿಸಬಾರದು ಎಂದು ಪಪ್ಪು ಯಾದವ್ ಅಮಿತ್ ಶಾಗೆ ಮನವಿ ಮಾಡಿದ್ದರು.

ಪ್ರಸ್ತುತ ಮುಂಬೈ ಪೊಲೀಸರು ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದಾರೆ. 30 ಸಾಕ್ಷಿಗಳ ಹೇಳಿಕೆಗಳನ್ನು ದಾಖಲು ಮಾಡಿಕೊಂಡಿದ್ದಾರೆ. ಇವರಲ್ಲಿ ಸುಶಾಂತ್ ಕುಟುಂಬ ಸದಸ್ಯರು, ಸ್ನೇಹಿತರು, ಸಿನಿಮಾ ಕ್ಷೇತ್ರದ ಹಲವು ಜನರು ಸೇರಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+