ಬಂಗಾಳ ಪೊಲೀಸರ ವಿರುದ್ಧ ಸಾಕ್ಷ್ಯ ಇದೆ: ಸುಪ್ರೀಂಕೋರ್ಟ್‌ಗೆ ಸಿಬಿಐ ಅಫಿಡವಿಟ್
ನವದೆಹಲಿ, ಫೆಬ್ರವರಿ 5: ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ವೇಳೆ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಹಿರಿಯ ರಾಜಕಾರಣಿಗಳ ವಿರುದ್ಧ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ ಎಂದು ಸಿಬಿಐ ಸುಪ್ರೀಂಕೋರ್ಟ್‌ಗೆ ತಿಳಿಸಿದೆ.
ಪಶ್ಚಿಮ ಬಂಗಾಳದಲ್ಲಿ ನಡೆದ ಹಣ ವಂಚನೆ ಹಗರಣದ ಆರೋಪಿಗಳ ವಿರುದ್ಧ ದೋಷಾರೋಪ ಹೊರಿಸಲು ಸಾಲುವಷ್ಟು ಪುರಾವೆಗಳನ್ನು ಸಂಗ್ರಹಿಸಿರುವುದಾಗಿ ಅದು ಮಂಗಳವಾರ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ತಿಳಿಸಿದೆ.
'ಕೋಲ್ಕತಾದ ಪೊಲೀಸ್ ಕಮಿಷನರ್ ರಾಜೀವ್ ಕುಮಾರ್ ಅಥವಾ ಪಶ್ಚಿಮ ಬಂಗಾಳದ ಯಾವುದೇ ಅಧಿಕಾರಿ ಸಾಕ್ಷ್ಯ ನಾಶ ಮಾಡುತ್ತಿದ್ದಾರೆ ಅಥವಾ ತನಿಖೆಗೆ ಅಡ್ಡಿಪಡಿಸಿದರೆ ಸಾಕ್ಷ್ಯ ಒದಗಿಸಿ. ಅದಕ್ಕೆ ಅವರು ತಕ್ಕ ಪಶ್ಚಾತ್ತಾಪ ಪಡುವಂತೆ ಮಾಡುತ್ತೇವೆ' ಎಂದು ಸುಪ್ರೀಂಕೋರ್ಟ್ ಸಿಬಿಐಗೆ ಸೋಮವಾರ ಸೂಚನೆ ನೀಡಿತ್ತು.

ಸುಪ್ರೀಂಕೋರ್ಟಿನ ಈ ಹೇಳಿಕೆಯನ್ನೇ ಪಶ್ಚಿಮ ಬಂಗಾಳ ಸರ್ಕಾರ ಪ್ರಮುಖ ಅಸ್ತ್ರವನ್ನಾಗಿ ಬಳಸಿಕೊಳ್ಳುವ ಸಾಧ್ಯತೆ ಇದೆ.
ಪಶ್ಚಿಮ ಬಂಗಾಳ ಸರ್ಕಾರದ ನಡೆಯ ವಿರುದ್ಧ ಸಿಬಿಐ ಸಲ್ಲಿಸಿರುವ ದೂರಿನ ಅರ್ಜಿಯನ್ನು ಸುಪ್ರೀಂಕೋರ್ಟ್‌ಗೆ ಮಂಗಳವಾರ ವಿಚಾರಣೆಗೆ ಮುಂದೂಡಿತ್ತು.












Click it and Unblock the Notifications