ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಂಗಾಳ ಪೊಲೀಸರ ವಿರುದ್ಧ ಸಾಕ್ಷ್ಯ ಇದೆ: ಸುಪ್ರೀಂಕೋರ್ಟ್‌ಗೆ ಸಿಬಿಐ ಅಫಿಡವಿಟ್

|
Google Oneindia Kannada News

ನವದೆಹಲಿ, ಫೆಬ್ರವರಿ 5: ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ವೇಳೆ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಹಿರಿಯ ರಾಜಕಾರಣಿಗಳ ವಿರುದ್ಧ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ ಎಂದು ಸಿಬಿಐ ಸುಪ್ರೀಂಕೋರ್ಟ್‌ಗೆ ತಿಳಿಸಿದೆ.

ದೀದಿ-ಸಿಬಿಐ ವಿವಾದ LIVE: 'ಸತ್ತರೂ ಮುಂದಿಟ್ಟ ಹೆಜ್ಜೆ ಹಿಂದಿಡೋಲ್ಲ!' ದೀದಿ-ಸಿಬಿಐ ವಿವಾದ LIVE: 'ಸತ್ತರೂ ಮುಂದಿಟ್ಟ ಹೆಜ್ಜೆ ಹಿಂದಿಡೋಲ್ಲ!'

ಪಶ್ಚಿಮ ಬಂಗಾಳದಲ್ಲಿ ನಡೆದ ಹಣ ವಂಚನೆ ಹಗರಣದ ಆರೋಪಿಗಳ ವಿರುದ್ಧ ದೋಷಾರೋಪ ಹೊರಿಸಲು ಸಾಲುವಷ್ಟು ಪುರಾವೆಗಳನ್ನು ಸಂಗ್ರಹಿಸಿರುವುದಾಗಿ ಅದು ಮಂಗಳವಾರ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ತಿಳಿಸಿದೆ.

ಸಿಬಿಐ v/s ಮಮತಾ ವಿವಾದ: ಮೌನವೇ ಆಭರಣ ಎಂದ ಟಿಆರ್ ಎಸ್ ಸಿಬಿಐ v/s ಮಮತಾ ವಿವಾದ: ಮೌನವೇ ಆಭರಣ ಎಂದ ಟಿಆರ್ ಎಸ್

'ಕೋಲ್ಕತಾದ ಪೊಲೀಸ್ ಕಮಿಷನರ್ ರಾಜೀವ್ ಕುಮಾರ್ ಅಥವಾ ಪಶ್ಚಿಮ ಬಂಗಾಳದ ಯಾವುದೇ ಅಧಿಕಾರಿ ಸಾಕ್ಷ್ಯ ನಾಶ ಮಾಡುತ್ತಿದ್ದಾರೆ ಅಥವಾ ತನಿಖೆಗೆ ಅಡ್ಡಿಪಡಿಸಿದರೆ ಸಾಕ್ಷ್ಯ ಒದಗಿಸಿ. ಅದಕ್ಕೆ ಅವರು ತಕ್ಕ ಪಶ್ಚಾತ್ತಾಪ ಪಡುವಂತೆ ಮಾಡುತ್ತೇವೆ' ಎಂದು ಸುಪ್ರೀಂಕೋರ್ಟ್ ಸಿಬಿಐಗೆ ಸೋಮವಾರ ಸೂಚನೆ ನೀಡಿತ್ತು.

cbi submitted affidavit supreme court sharada chit fund case incriminating material west bengal police

ಸುಪ್ರೀಂಕೋರ್ಟಿನ ಈ ಹೇಳಿಕೆಯನ್ನೇ ಪಶ್ಚಿಮ ಬಂಗಾಳ ಸರ್ಕಾರ ಪ್ರಮುಖ ಅಸ್ತ್ರವನ್ನಾಗಿ ಬಳಸಿಕೊಳ್ಳುವ ಸಾಧ್ಯತೆ ಇದೆ.

ಸಿಬಿಐ ಕಾಲಿಡದಂತೆ ನಿಷೇಧಿಸುವ ಅಧಿಕಾರ ರಾಜ್ಯಗಳಿಗೆ ಇದೆಯೇ? ಇಲ್ಲಿದೆ ಮಾಹಿತಿ ಸಿಬಿಐ ಕಾಲಿಡದಂತೆ ನಿಷೇಧಿಸುವ ಅಧಿಕಾರ ರಾಜ್ಯಗಳಿಗೆ ಇದೆಯೇ? ಇಲ್ಲಿದೆ ಮಾಹಿತಿ

ಪಶ್ಚಿಮ ಬಂಗಾಳ ಸರ್ಕಾರದ ನಡೆಯ ವಿರುದ್ಧ ಸಿಬಿಐ ಸಲ್ಲಿಸಿರುವ ದೂರಿನ ಅರ್ಜಿಯನ್ನು ಸುಪ್ರೀಂಕೋರ್ಟ್‌ಗೆ ಮಂಗಳವಾರ ವಿಚಾರಣೆಗೆ ಮುಂದೂಡಿತ್ತು.

English summary
CBI on Tuesday submitted affidavit to the Supreme Court on Sharada chit fund case alleging there are several incriminating material/correspondence that was collected during the investigation by the CBI against the senior police officials as well as senior politicians.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X