'ಕೋರ್ಟಿನ ಮೂಲೆಯಲ್ಲಿ ಕೂರಿ', ನಾಗೇಶ್ವರ್ ರಾವ್ ಗೆ ಸುಪ್ರೀಂ ವಿಲಕ್ಷಣ ಶಿಕ್ಷೆ!

ನವದೆಹಲಿ, ಫೆಬ್ರವರಿ 12: ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿರುವ ಸಿಬಿಐ ನ ಮಾಜಿ ಮಧ್ಯಂತರ ನಿರ್ದೇಶಕ ನಾಗೇಶ್ವರ್ ರಾವ್ ಅವರಿಗೆ ಸುಪ್ರೀಂ ಕೋರ್ಟ್ ವಿಲಕ್ಷಣ ಶಿಕ್ಷೆಯೊಂದನ್ನು ನೀಡಿದೆ.

ಬಿಹಾರದ ಮುಜಾಫರ್ಪುರದಲ್ಲಿ ನಡೆದ ಶೆಲ್ಟರ್ ಹೋಮ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿದ್ದ ಅಧಿಕಾರಿಯೊಬ್ಬರನ್ನು ವರ್ಗಾವಣೆ ಮಾಡಲು ನಾಗೇಶ್ವರ್ ರಾವ್ ತಾವು ಸಿಬಿಐ ನಿರ್ದೇಶಕರಾಗಿದ್ದ ಸಮಯದಲ್ಲಿ ಆದೇಶ ಹೊರಡಿಸಿದ್ದರು.

ಆದರೆ ಸಿಬಿಐ ನ ಮಾಜಿ ಮುಖ್ಯಸ್ಥ ಅಲೋಕ್ ಕುಮಾರ್ ಅವರು ಭ್ರಷ್ಟಾಚಾರದ ಆರೋಪ ಎದುರಿಸುತ್ತಿದ್ದ ಸಮಯದಲ್ಲಿ, ಹಂಗಾಮಿ ನಿರ್ದೇಶಕರಾಗಿ ಆಯ್ಕೆಯಾಗಿದ್ದ ನಾಗೇಶ್ವರ್ ರಾವ್ ಅವರು ತಮ್ಮ ಅಧಿಕಾರಾವಧಿಯಲ್ಲಿ ಯಾವುದೇ ಮಹತ್ವದ ನಿರ್ಣಯ ತೆಗೆದುಕೊಳ್ಳುವಂತಿಲ್ಲ ಎಂದು ಅವರನ್ನು ನೇಮಿಸಿದ ನಂತರ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಆದರೆ ಆ ಆದೇಶವನ್ನೂ ಲೆಕ್ಕಿಸದೆ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಮೂಲಕ ನಾಗೇಶ್ವರ್ ರಾವ್ ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

CBIs Nageshwar Rao guilty of contempt, SC orders unusual punishment

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಲಯ, ನಾಗೇಶ್ವರ್ ರಾವ್ ನ್ಯಾಯಾಂಗ ನಿಂದನೆ ಮಾಡಿದ್ದು ಸತ್ಯ ಎಂದಿದ್ದು, ಅವರಿಗೆ 1 ಲಕ್ಷ ರೂ. ದಂಡ ವಿಧಿಸಿದೆ. ಮತ್ತು ಒಂದು ದಿನ ಕೂರ್ಟಿನ ಮೂಲೆಯಲ್ಲೇ ಕುಳಿತಿರುವಂತೆ ಶಿಕ್ಷೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+